ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
ಬೆಂಗಳೂರು: ಪ್ರಸಕ್ತ ಸಾಲಿನ ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಸಂಬಂಧ ಕೃಷಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ ಗುರುವಾರ ನಡೆಯಿತು.
ಸಭೆಯಲ್ಲಿ ಪ್ರಸಕ್ತ ಸಾಲಿನ ಖಾರೀಫ್ ಬೆಳೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆ, ಜಲಾಶಯದ ನೀರಿನ ಮಟ್ಟ ಹಾಗೂ ನೀರು ಹರಿಸುವ ಕುರಿತು ಚರ್ಚೆ ನಡೆಸಲಾಯಿತು.
ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ನೀರಿನ ಸಮರ್ಪಕ ಬಳಕೆ ಹಾಗೂ ನೀರು ಹಂಚಿಕೆ ಕುರಿತು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಕೆ. ವೆಂಕಟೇಶ್, ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎ. ಮಂಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಹಾಗೂ ನೀರಾವರಿ ಇಲಾಖೆಯ ಎಂಜಿನಿಯರ್ಗಳು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.



