ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!

ಮಡಿಕೇರಿ: ಕೊಡಗಿನಲ್ಲಿ ತೀವ್ರಗೊಂಡಿರುವ ಆನೆ–ಮಾನವ ಸಂಘರ್ಷಕ್ಕೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಡಾ. ಮಂಥರ್ ಗೌಡ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಸೇರಿದಂತೆ ಜಿಲ್ಲಾಧಿಕಾರಿ ಸೋಮಶೇಖರ್, ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ, ZP CEO ಆನಂದ್ ಪ್ರಕಾಶ್ ಮೀನಾ, ಕೆ.ಪಿ. ಚಂದ್ರಕಲಾ, CCF ಸೋನಲ್ ವೇಶನಿ, DCF ಅಭಿಷೇಕ್, ಮಾಜಿ ಸಚಿವ ಕೆ.ಜಿ. ಭೋಪಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಅಧಿಕಾರಿಗಳು ಹಾಗೂ ವಿವಿಧ ಸಂಘ–ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಕಾಡಾನೆಗಳ ಹಾವಳಿ ನಿಯಂತ್ರಣ ಹಾಗೂ ಜನ–ಆನೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

Exit mobile version