Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಭೂಮಿ, ದೌರ್ಜನ್ಯ, ಸುಳ್ಳು ಪ್ರಕರಣಗಳ ಸದ್ದು; ಪರಿಶಿಷ್ಟರ ನೋವು ಆಲಿಸಿದ ಎಸ್‌ಪಿ ಬಿಂದುಮಣಿ
    ಅಂತರರಾಷ್ಟ್ರೀಯ

    ಭೂಮಿ, ದೌರ್ಜನ್ಯ, ಸುಳ್ಳು ಪ್ರಕರಣಗಳ ಸದ್ದು; ಪರಿಶಿಷ್ಟರ ನೋವು ಆಲಿಸಿದ ಎಸ್‌ಪಿ ಬಿಂದುಮಣಿ

    ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ಸಭೆ ನಡೆಯಿತು.

    ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಪರಿಶಿಷ್ಟ ಸಮುದಾಯದ ಸದಸ್ಯರು ಭೂ ವಿವಾದ, ದೌರ್ಜನ್ಯ, ಸುಳ್ಳು ಪ್ರಕರಣ, ಅಕ್ರಮ ಮದ್ಯ ಮಾರಾಟ ಹಾಗೂ ಮಾದಕ ವಸ್ತುಗಳ ಕುರಿತು ತಮ್ಮ ಅಹವಾಲುಗಳನ್ನು ಮಂಡಿಸಿದರು.

    ಸಭೆಯಲ್ಲಿ ಮಾತನಾಡಿದ ಎಸ್‌ಪಿ ಬಿಂದುಮಣಿ, ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸೂಕ್ತ ಸ್ಪಂದನೆ ದೊರೆಯದಿದ್ದರೆ ತಮ್ಮ ಗಮನಕ್ಕೆ ತರಬಹುದು. ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಇಲಾಖೆಯ ಆದ್ಯತೆಯಾಗಿದೆ ಎಂದರು.

    ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಕಳೆದ ಎಂಟು ತಿಂಗಳಲ್ಲಿ 237 ಪ್ರಕರಣ ದಾಖಲಿಸಿ, 333 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಹಾಡಿ ಪ್ರದೇಶಗಳು ಸೇರಿದಂತೆ ವಿವಿಧೆಡೆ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

    ಕೊಡ್ಲಿಪೇಟೆಯ ಜನಾರ್ಧನ ಜೆ.ಎಲ್. ಅವರು ಶನಿವಾರಸಂತೆ, ಕೊಡ್ಲಿಪೇಟೆ ಭಾಗದಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೂ ಹೆಚ್ಚಿನ ಆದ್ಯತೆ ನೀಡುವಂತೆ ಕೋರಿದರು.

    ವೀರೇಂದ್ರ ಅವರು ಕೆಲವು ಪೊಲೀಸ್ ಠಾಣೆಗಳಲ್ಲಿ ದೂರುಗಳ ಸರಿಯಾದ ವಿಚಾರಣೆ ನಡೆಸದೆ ಸುಳ್ಳು ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿ, ಪ್ರಕರಣ ದಾಖಲಿಸುವ ಮುನ್ನ ಸಮಗ್ರ ವಿಚಾರಣೆ ನಡೆಸುವಂತೆ ಮನವಿ ಮಾಡಿದರು.

    ದೇವರಾಜು ಅವರು ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯಲ್ಲಿ ಪರಿಶಿಷ್ಟರ ಭೂಮಿ ಒತ್ತುವರಿ ಪ್ರಕರಣಗಳಿದ್ದು, ಕಂದಾಯ ಹಾಗೂ ಪೊಲೀಸ್ ಇಲಾಖೆ ಜಂಟಿ ಸರ್ವೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

    ಕೆ.ಬಿ. ರಾಜು ಅವರು ಪ್ರತೀ ತಾಲೂಕಿನಲ್ಲಿ ಮೂರು ತಿಂಗಳಿಗೊಮ್ಮೆ ಪರಿಶಿಷ್ಟರ ಕುಂದುಕೊರತೆ ಸಭೆ ನಡೆಸುವಂತೆ ಸಲಹೆ ನೀಡಿದರು. ಪಿ.ಪಿ. ಸುಕುಮಾರ್ ಅವರು ಶಾಲಾ-ಕಾಲೇಜುಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತೆ ಮನವಿ ಮಾಡಿದರು.

    ಡಿವೈಎಸ್‌ಪಿ ಮಹೇಶ್ ಕುಮಾರ್ ಅವರು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು. 112, 181 ಹಾಗೂ 1098 ಸಹಾಯವಾಣಿಗಳಿಗೆ ದೂರು ಬಂದರೆ ತ್ವರಿತವಾಗಿ ಸ್ಪಂದಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

    ಡಿವೈಎಸ್‌ಪಿಗಳಾದ ಚಂದ್ರಶೇಖರ್, ಸೂರಜ್, ಹಿರಿಯ ಪೊಲೀಸ್ ಅಧಿಕಾರಿ ಐ.ಪಿ. ಮೇದಪ್ಪ, ಪಿಎಸ್‌ಐ ನವೀನ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

    Previous Articleಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಮಲ್ದಾರೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಮೇಲುಗೈ
    Next Article ಶಾಲೆಯಿಂದ ಮನೆಗೆ ಹೊರಟ ಬಾಲಕನಿಗೆ ವೇಗದ ಕಾರು ಡಿಕ್ಕಿ; ಗಂಭೀರ ಗಾಯ

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.