ಸೋಮವಾರಪೇಟೆ, ಆ.30: ಪ್ರವಾಸಿಗನೊಬ್ಬ ಅಜಾಗರೂಕತೆಯಿಂದ ಅತಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಶಾಲೆಯಿಂದ ಮನೆಗೆ ತೆರಳುತ್ತಿದ್ದ 15 ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರಪೇಟೆ ಸಮೀಪದ ಅಲೆಕಟ್ಟೆ ರಸ್ತೆಯಲ್ಲಿ ನಡೆದಿದೆ.
ಗಾಯಗೊಂಡ ಬಾಲಕನನ್ನು ನಿಶಾಂತ್ ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಬಳಿಕ ರಸ್ತೆ ಬದಿಯಲ್ಲಿದ್ದ ಗ್ಯಾಸ್ ಪಿಕಪ್ ವಾಹನಕ್ಕೂ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ನಿಶಾಂತ್ನನ್ನು ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


