ಪೇರಂಬಾಡಿ ಚೆಕ್ಪೋಸ್ಟ್ನಲ್ಲಿ ನೈತಿಕ ಪೊಲೀಸ್ಗಿರಿ ವಿರುದ್ಧ ಬಿಜೆಪಿ ಹೋರಾಟ; ಎಸ್ಪಿ ಭರವಸೆಯ ಬಳಿಕ ಪ್ರತಿಭಟನೆ ಹಿಂಪಡೆತ
ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ಗಿರಿ ಘಟನೆಗಳನ್ನು ಖಂಡಿಸಿ ಪೇರಂಬಾಡಿ ಚೆಕ್ಪೋಸ್ಟ್ನಲ್ಲಿ ವಿರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ಸುವಿನ್ ಗಣಪತಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನೈತಿಕ ಪೊಲೀಸ್ಗಿರಿಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಹೋರಾಟದ ತೀವ್ರತೆ ಹೆಚ್ಚುತ್ತಿದ್ದಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪೊಲೀಸ್ ವರಿಷ್ಠಾಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.


