ಕೊಡಗಿನ ಮೈತಾಡಿಯಲ್ಲಿ  ಹುಲಿ ದಾಳಿ: ಹಸು ಬಲಿ

ಮೈತಾಡಿ ಗ್ರಾಮದಲ್ಲಿ ಹುಲಿ ದಾಳಿ ನಡೆಸಿ ಹಸುವೊಂದನ್ನು ಕೊಂದು ಹಾಕಿರುವ ಘಟನೆ ನಡೆದಿದೆ.

ಇಂದು ಸಂಜೆ 4 ಗಂಟೆ ಸುಮಾರಿಗೆ ಬೊಳ್ಯಪಂಡ ಭೀಮಯ್ಯ ಅವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಲ್ಲಿ ಹಸು ಮೃತಪಟ್ಟಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಹುಲಿ ಇನ್ನೂ ಸುತ್ತಮುತ್ತಲ ಪ್ರದೇಶದಲ್ಲೇ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಲಾಗಿದೆ. ದನಕರುಗಳನ್ನು ಹೊರಗೆ ಬಿಡುವಾಗ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ.

ಹುಲಿ ಸೆರೆ ಕಾರ್ಯಾಚರಣೆಯನ್ನು ತಕ್ಷಣ ಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Exit mobile version