ವಿರಾಜಪೇಟೆ ನಗರದಲ್ಲಿ ಸೆ.25ರ ರಾತ್ರಿ ನಡೆಯಲಿರುವ ಐತಿಹಾಸಿಕ ಗೌರಿ-ಗಣೇಶ ವಿಸರ್ಜನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸೆ.26ರಂದು ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಶಾಲೆಗಳಿಗೆ ಸ್ಥಳೀಯ ರಜೆ ಘೋಷಿಸಲಾಗಿದೆ.
ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸೆ.26ರಂದು ರಜೆ ನೀಡಲಾಗಿದೆ.
ಆದರೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ SA-1 ಪರೀಕ್ಷೆ ಮಂಡಳಿಯ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಗೌರಿ-ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಗವಹಿಸುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.

