Close Menu
Kodagu News
    ಹೊಸ ಸುದ್ದಿ

    ಮೃತದೇಹದಲ್ಲಿದ್ದ ಚಿನ್ನಾಭರಣ ನಾಪತ್ತೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

    September 24, 2026

    ಬರ ಘೋಷಣೆ ಬಳಿಕವೂ ಖಾಲಿ ಚೆಂಬಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಬಿಜೆಪಿಗರ ಆಕ್ರೋಶ

    September 24, 2026

    ಜಪಾನ್‌ನಲ್ಲಿ ಅರುಣ್ ಮಚಯ್ಯಗೆ ಮತ್ತೊಂದು ಅಂತರರಾಷ್ಟ್ರೀಯ ಗೌರವ

    September 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೃತದೇಹದಲ್ಲಿದ್ದ ಚಿನ್ನಾಭರಣ ನಾಪತ್ತೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
    • ಬರ ಘೋಷಣೆ ಬಳಿಕವೂ ಖಾಲಿ ಚೆಂಬಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಬಿಜೆಪಿಗರ ಆಕ್ರೋಶ
    • ಜಪಾನ್‌ನಲ್ಲಿ ಅರುಣ್ ಮಚಯ್ಯಗೆ ಮತ್ತೊಂದು ಅಂತರರಾಷ್ಟ್ರೀಯ ಗೌರವ
    • ಮಡಿಕೇರಿ–ಕುಶಾಲನಗರವನ್ನೂ ಬರಪೀಡಿತ ತಾಲೂಕು ಪಟ್ಟಿಗೆ ಸೇರಿಸಿ: ಎಡಿಕೇರಿ ಪ್ರಸನ್ನ ಗೌಡ.
    • ಬೈಕ್ ತಪ್ಪಿಸಲು ಹೋಗಿ ಪಲ್ಟಿಯಾದ ಶಾಲಾ ಬಸ್: ಮಕ್ಕಳಿಗೆ ಗಾಯ
    • ಸೆ.26ರಂದು 1ರಿಂದ 9ನೇ ತರಗತಿವರೆಗೆ ವಿರಾಜಪೇಟೆ ಶಾಲೆಗಳಿಗೆ ರಜೆ
    • ಮಡಿಕೇರಿಯಲ್ಲಿ ಲೋಕಾಯುಕ್ತರ ಭರ್ಜರಿ ದಾಳಿ: ನಗರಸಭೆ ಆಯುಕ್ತ ರಮೇಶ್ ಮನೆ ಸೇರಿ 8 ಕಡೆ ಶೋಧ
    • ಗೌರವದ ಬದುಕಿಗಾಗಿ ಸ್ಟೇರಿಂಗ್ ಹಿಡಿದ ಮೃದು ಕೈಗಳಿಗೆ ಹೇಳೋಣ ಒಂದು ಸಲಾಂ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಮೃತದೇಹದಲ್ಲಿದ್ದ ಚಿನ್ನಾಭರಣ ನಾಪತ್ತೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
    ಕ್ರೈಂ ನ್ಯೂಸ್

    ಮೃತದೇಹದಲ್ಲಿದ್ದ ಚಿನ್ನಾಭರಣ ನಾಪತ್ತೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

    ಮೃತದೇಹದಲ್ಲಿದ್ದ ಚಿನ್ನಾಭರಣ ನಾಪತ್ತೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

    ಕುಶಾಲನಗರ: ಆನೆಕಾಡು ಬಳಿ ನಡೆದ ಸರಣಿ ಅಪಘಾತದಲ್ಲಿ ಮೃತಪಟ್ಟ ರತನ್ ಉಣ್ಣಿ ಅವರ ಶರೀರದಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

    ಸೆಪ್ಟೆಂಬರ್ 20ರಂದು ಆನೆಕಾಡು ಬಳಿ ನಡೆದ ಸರಣಿ ಅಪಘಾತದಲ್ಲಿ ರತನ್ ಉಣ್ಣಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕುಶಾಲನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಅವರ ದೇಹದಲ್ಲಿದ್ದ ಚಿನ್ನಾಭರಣಗಳನ್ನು ಅವರ ಸ್ನೇಹಿತರು ಗಮನಿಸಿದ್ದರು ಎನ್ನಲಾಗಿದೆ.

    ನಂತರ ವೈದ್ಯಕೀಯ ಪರೀಕ್ಷೆಗಾಗಿ, ಇಸಿಜಿ ತೆಗೆಯಲು ಅವರನ್ನು ಕರೆದೊಯ್ಯುವವರೆಗೂ ಆಭರಣಗಳು ಇದ್ದವು ಎಂದು ಸ್ನೇಹಿತರು ಗಮನಿಸಿರುವುದಾಗಿ ಕರವೇ ತಿಳಿಸಿದೆ. ಆದರೆ ಬಳಿಕ ಆಭರಣಗಳು ಆಸ್ಪತ್ರೆಯಲ್ಲೇ ತೆಗೆದಿಡಲಾಗಿದೆಯೇ ಅಥವಾ ಶವಾಗಾರದಲ್ಲಿದ್ದ ವೇಳೆ ನಾಪತ್ತೆಯಾಗಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.

    ಈ ಹಿನ್ನೆಲೆಯಲ್ಲಿ ಪ್ರಕರಣದ ಸತ್ಯಾಸತ್ಯತೆ ಬಯಲಿಗೆಳೆಯಲು ಸಮಗ್ರ ತನಿಖೆ ನಡೆಸಬೇಕು ಹಾಗೂ ಆಭರಣಗಳು ನಾಪತ್ತೆಯಾಗಿರುವುದು ದೃಢಪಟ್ಟಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

    ಈ ಸಂಬಂಧ ಇಂದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
    ದೂರು ನೀಡುವ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಉಪಾಧ್ಯಕ್ಷ ಕೆ.ಆರ್. ರಾಜೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ್ ರಾಜ್ ದಾಸ್, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಬಿ.ಜೆ. ಅಣ್ಣಯ್ಯ, ತಾಲೂಕು ಉಪಾಧ್ಯಕ್ಷ ಎಸ್.ಎಸ್. ಫಯಾಜ್ ಉದ್ದೀನ್, ಮೃತ ರತನ್ ಉಣ್ಣಿ ಅವರ ಸಂಬಂಧಿಕರು ಹಾಗೂ ಸ್ನೇಹಿತ ಪ್ರಶಾಂತ್ ವಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು.

    Previous Articleಬರ ಘೋಷಣೆ ಬಳಿಕವೂ ಖಾಲಿ ಚೆಂಬಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಬಿಜೆಪಿಗರ ಆಕ್ರೋಶ

    Related Posts

    ಬರ ಘೋಷಣೆ ಬಳಿಕವೂ ಖಾಲಿ ಚೆಂಬಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಬಿಜೆಪಿಗರ ಆಕ್ರೋಶ

    September 24, 2026

    ಜಪಾನ್‌ನಲ್ಲಿ ಅರುಣ್ ಮಚಯ್ಯಗೆ ಮತ್ತೊಂದು ಅಂತರರಾಷ್ಟ್ರೀಯ ಗೌರವ

    September 24, 2026

    ಮಡಿಕೇರಿ–ಕುಶಾಲನಗರವನ್ನೂ ಬರಪೀಡಿತ ತಾಲೂಕು ಪಟ್ಟಿಗೆ ಸೇರಿಸಿ: ಎಡಿಕೇರಿ ಪ್ರಸನ್ನ ಗೌಡ.

    September 23, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೃತದೇಹದಲ್ಲಿದ್ದ ಚಿನ್ನಾಭರಣ ನಾಪತ್ತೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

    September 24, 2026

    ಬರ ಘೋಷಣೆ ಬಳಿಕವೂ ಖಾಲಿ ಚೆಂಬಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಬಿಜೆಪಿಗರ ಆಕ್ರೋಶ

    September 24, 2026

    ಜಪಾನ್‌ನಲ್ಲಿ ಅರುಣ್ ಮಚಯ್ಯಗೆ ಮತ್ತೊಂದು ಅಂತರರಾಷ್ಟ್ರೀಯ ಗೌರವ

    September 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.