ವಿರಾಜಪೇಟೆ ಗೌರಿ ಗಣೇಶ ವಿಸರ್ಜನೆ ಶೋಭಾಯಾತ್ರೆಯಲ್ಲಿ ಆಕಸ್ಮಿಕ ದುರಂತ

ಅಲಂಕೃತ ತೇರಿಗೆ ವಿದ್ಯುತ್ ತಂತಿ ಸ್ಪರ್ಶ; ಬೆಂಕಿ ಅವಘಡದಲ್ಲಿ ನಾಲ್ವರಿಗೆ ಗಾಯ

ವಿರಾಜಪೇಟೆ: ಗೌರಿ ಗಣೇಶ ವಿಸರ್ಜನೆ ಅಂಗವಾಗಿ ನಡೆದ ಶೋಭಾಯಾತ್ರೆಯಲ್ಲಿ ಅಲಂಕೃತ ತೇರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.

ಶೋಭಾಯಾತ್ರೆ ಸಾಗುತ್ತಿದ್ದ ವೇಳೆ ಅಲಂಕೃತ ತೇರು ವಿದ್ಯುತ್ ತಂತಿಗೆ ತಗುಲಿದ್ದು, ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಿಂದ ಮೆರವಣಿಗೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯಲ್ಲಿ ಬಸವರಾಜು ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ–ಧಾರವಾಡ ಮೂಲದ ಮತ್ತಿಬ್ಬರು ಗಾಯಾಳುಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಹಿನ್ನೆಲೆಯಲ್ಲಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Exit mobile version