Close Menu
Kodagu News
    ಹೊಸ ಸುದ್ದಿ

    ಸ್ಟೀಲ್ ರೋಪ್ ಬ್ಯಾರಿಕೇಡ್‌ಗೆ ಅಭಿಮನ್ಯುವಿನಿಂದ ಪ್ರಾಯೋಗಿಕ ಪರೀಕ್ಷೆ

    October 6, 2026

    ಮಡಿಕೇರಿಯಲ್ಲಿ ಲೋಕಾಯುಕ್ತ ದಾಳಿ: ₹25 ಸಾವಿರ ಲಂಚ ಪಡೆಯುವಾಗ ಜಿಲ್ಲಾ ವಿಮಾ ಅಧಿಕಾರಿ ಲೋಕಾಯುಕ್ತ ಬಲೆಗೆ

    October 5, 2026

    ವಿರಾಜಪೇಟೆ ವಿದ್ಯುತ್ ದುರಂತ: ಗಾಯಗೊಂಡಿದ್ದ ಯುವಕ ಸಾವು

    October 5, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಸ್ಟೀಲ್ ರೋಪ್ ಬ್ಯಾರಿಕೇಡ್‌ಗೆ ಅಭಿಮನ್ಯುವಿನಿಂದ ಪ್ರಾಯೋಗಿಕ ಪರೀಕ್ಷೆ
    • ಮಡಿಕೇರಿಯಲ್ಲಿ ಲೋಕಾಯುಕ್ತ ದಾಳಿ: ₹25 ಸಾವಿರ ಲಂಚ ಪಡೆಯುವಾಗ ಜಿಲ್ಲಾ ವಿಮಾ ಅಧಿಕಾರಿ ಲೋಕಾಯುಕ್ತ ಬಲೆಗೆ
    • ವಿರಾಜಪೇಟೆ ವಿದ್ಯುತ್ ದುರಂತ: ಗಾಯಗೊಂಡಿದ್ದ ಯುವಕ ಸಾವು
    • 44 ವರ್ಷಗಳ ಕಾಯುವಿಕೆಗೆ ಅಂತ್ಯ: ಚಿನ್ನ ಗೆದ್ದ ಭಾರತದ ಮಹಿಳಾ ಹಾಕಿ ತಂಡ
    • ವಿರಾಜಪೇಟೆಯಲ್ಲಿ ಸ್ಮರಣೀಯ ಹೆಜ್ಜೆ: ಮಾತಂಡ ಮೊಣ್ಣಪ್ಪ ಹೆಸರಿನಲ್ಲಿ ರಸ್ತೆ
    • ನಿರ್ಗತಿಗರ ನೆರವಿಗೆ ನಿಂತ ಕರವೇ.
    • ನಿಗದಿತ ಮಿತಿಮೀರಿಸಿ ಮರದ ದಿಮ್ಮಿ ಸಾಗಾಟ: 5 ಲಾರಿ ವಶ, ₹2.97 ಲಕ್ಷ ದಂಡ
    • ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿ: ವಾಹನ ಸವಾರರಿಗೆ ಕಿರಿಕಿರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಮಣ್ಣಿನ ಮೇಲೆಯೇ ಕಾಂಕ್ರೀಟ್! ನಂದಿಗುಂದದಲ್ಲಿ ಕಳಪೆ ಕಾಮಗಾರಿಗೆ ಗ್ರಾಮಸ್ಥರ ಆಕ್ರೋಶ
    ಕ್ರೈಂ ನ್ಯೂಸ್

    ಮಣ್ಣಿನ ಮೇಲೆಯೇ ಕಾಂಕ್ರೀಟ್! ನಂದಿಗುಂದದಲ್ಲಿ ಕಳಪೆ ಕಾಮಗಾರಿಗೆ ಗ್ರಾಮಸ್ಥರ ಆಕ್ರೋಶ

    ನಂದಿಗುಂದದಲ್ಲಿ ಕಳಪೆ ರಸ್ತೆ ಕಾಮಗಾರಿ ತಡೆದ ಕರವೇ ಸ್ವಾಭಿಮಾನಿ ಸೇನೆ–ಗ್ರಾಮಸ್ಥರು; ಲೋಕಾಯುಕ್ತಕ್ಕೆ ದೂರು

    ಸೋಮವಾರಪೇಟೆ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಂದಿಗುಂದ ಗ್ರಾಮದಲ್ಲಿ KRIDL ವತಿಯಿಂದ ನಡೆಯುತ್ತಿದ್ದ ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಹಾಗೂ ಗ್ರಾಮಸ್ಥರು ಕಾಮಗಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.

    ಸಂಜೆ 6 ಗಂಟೆಯ ನಂತರ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸ್ಥಳದಲ್ಲಿ ಸಂಬಂಧಪಟ್ಟ KRIDL ಅಧಿಕಾರಿಗಳು, ಇಂಜಿನಿಯರ್ ಅಥವಾ ಗುತ್ತಿಗೆದಾರರು ಯಾರೂ ಇರಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇಂಜಿನಿಯರ್‌ರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ, ರಸ್ತೆ ಕಾಮಗಾರಿ ನಡೆಯುತ್ತಿರುವುದೇ ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

    ಇನ್ನು ಕಾಮಗಾರಿಯಲ್ಲಿ ತಾಂತ್ರಿಕ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ ಎಂಬುದು ಗ್ರಾಮಸ್ಥರ ಪ್ರಮುಖ ಆರೋಪವಾಗಿದೆ. ರಸ್ತೆಯ ತಳಭಾಗದಲ್ಲಿ ಪ್ಲಾಸ್ಟಿಕ್ ಶೀಟ್ ಅಳವಡಿಸದೆ, ಜಲ್ಲಿ ಹಾಸಿ ರೋಲರ್ ಮೂಲಕ ತಳಪಾಯ ಗಟ್ಟಿಗೊಳಿಸದೆ ನೇರವಾಗಿ ಮಣ್ಣಿನ ಮೇಲೆಯೇ ಕಾಂಕ್ರೀಟ್ ಸುರಿಯಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

    ಈ ಕುರಿತು ಮಾಹಿತಿ ಪಡೆದ ಕರವೇ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಹಾಗೂ ಗ್ರಾಮಸ್ಥರು ಸ್ಥಳಕ್ಕೆ ತೆರಳಿ ಕಾಮಗಾರಿ ಪರಿಶೀಲಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಮೇಲ್ವಿಚಾರಣೆ ಇಲ್ಲದೆ ನಡೆಯುತ್ತಿದ್ದ ಕಾಮಗಾರಿಯನ್ನು ಸ್ಥಳದಲ್ಲೇ ತಡೆದು ನಿಲ್ಲಿಸಿದ್ದಾರೆ.

    ಈಗಾಗಲೇ ಮಣ್ಣಿನ ಮೇಲೆ ಹಾಕಿರುವ ಕಾಂಕ್ರೀಟ್ ತೆರವುಗೊಳಿಸಿ, ನಿಯಮಾನುಸಾರ ತಳಪಾಯ ಸಿದ್ಧಪಡಿಸಿ, ಗುಣಮಟ್ಟದ ಜಲ್ಲಿ ಹಾಗೂ ಸಿಮೆಂಟ್ ಬಳಸಿ ರಸ್ತೆ ಮರುನಿರ್ಮಾಣ ಮಾಡಬೇಕು ಎಂದು ಕರವೇ ಸ್ವಾಭಿಮಾನಿ ಸೇನೆ ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಕಾಮಗಾರಿಯಲ್ಲಿ ಗುಣಮಟ್ಟ ಮತ್ತು ನಿಯಮ ಪಾಲನೆ ಕಡ್ಡಾಯವಾಗಬೇಕು. ಕಾಮಗಾರಿಯಲ್ಲಿ ಅಕ್ರಮ ಅಥವಾ ಅವ್ಯವಹಾರ ನಡೆದಿರುವುದು ತನಿಖೆಯಿಂದ ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

    ನಂದಿಗುಂದ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಲೋಕಾಯುಕ್ತಕ್ಕೆ ಅಧಿಕೃತ ದೂರು ಸಲ್ಲಿಸಲು ನಿರ್ಧರಿಸಿರುವುದಾಗಿ ಫ್ರಾನ್ಸಿಸ್ ಡಿಸೋಜ ಹಾಗೂ ಗ್ರಾಮಸ್ಥರು ತಿಳಿಸಿದ್ದಾರೆ.

    Previous Articleಮಾಣಿ ಫ್ಲೈಓವರ್‌ನಲ್ಲಿ ಭೀಕರ ಅಪಘಾತ: ಮಡಿಕೇರಿ ಮೂಲದ ಮಹಿಳೆ ಮೃತ್ಯು
    Next Article ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಸನ್ನ ಎಡಿಕೇರಿ ಸಾಂತ್ವನ

    Related Posts

    ಸ್ಟೀಲ್ ರೋಪ್ ಬ್ಯಾರಿಕೇಡ್‌ಗೆ ಅಭಿಮನ್ಯುವಿನಿಂದ ಪ್ರಾಯೋಗಿಕ ಪರೀಕ್ಷೆ

    October 6, 2026

    ಮಡಿಕೇರಿಯಲ್ಲಿ ಲೋಕಾಯುಕ್ತ ದಾಳಿ: ₹25 ಸಾವಿರ ಲಂಚ ಪಡೆಯುವಾಗ ಜಿಲ್ಲಾ ವಿಮಾ ಅಧಿಕಾರಿ ಲೋಕಾಯುಕ್ತ ಬಲೆಗೆ

    October 5, 2026

    ವಿರಾಜಪೇಟೆ ವಿದ್ಯುತ್ ದುರಂತ: ಗಾಯಗೊಂಡಿದ್ದ ಯುವಕ ಸಾವು

    October 5, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಸ್ಟೀಲ್ ರೋಪ್ ಬ್ಯಾರಿಕೇಡ್‌ಗೆ ಅಭಿಮನ್ಯುವಿನಿಂದ ಪ್ರಾಯೋಗಿಕ ಪರೀಕ್ಷೆ

    October 6, 2026

    ಮಡಿಕೇರಿಯಲ್ಲಿ ಲೋಕಾಯುಕ್ತ ದಾಳಿ: ₹25 ಸಾವಿರ ಲಂಚ ಪಡೆಯುವಾಗ ಜಿಲ್ಲಾ ವಿಮಾ ಅಧಿಕಾರಿ ಲೋಕಾಯುಕ್ತ ಬಲೆಗೆ

    October 5, 2026

    ವಿರಾಜಪೇಟೆ ವಿದ್ಯುತ್ ದುರಂತ: ಗಾಯಗೊಂಡಿದ್ದ ಯುವಕ ಸಾವು

    October 5, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.