
ಮಡಿಕೇರಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯವರ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಇಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬದ ಕುರಿತು ಖರ್ಗೆ ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಹಾಗೂ ಬಿಜೆಪಿ ವಕ್ತಾರ ರವಿ ಕುಶಾಲಪ್ಪ ಸೇರಿದಂತೆ ಪಕ್ಷದ ಹಲವು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಮುಖಂಡರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.


