ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
ಸಿದ್ದಾಪುರ: ಕೆಲವು ದಿನಗಳ ಹಿಂದೆ ಸಿದ್ದಾಪುರ ಸಮೀಪ ಕಾರೊಂದು ಕೆರೆಗೆ ಬಿದ್ದು ಒಂದೇ ಕುಟುಂಬದ ಪುಟ್ಟ ಮಗು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ಮೃತ ವಿಜೇಶ್, ಪಮಿತಾ ಹಾಗೂ ಲಿಯಾ ಅವರ ಮನೆಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಮಂಗಳವಾರ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ವೆಂಕಟೇಶ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಬಿಜೋಯ್, ಮಾಜಿ ಅಧ್ಯಕ್ಷ ಬಶೀರ್, ಮಾಜಿ ಪಂಚಾಯಿತಿ ಸದಸ್ಯರಾದ ಮಿಲನ್ ಹಾಗೂ ದೇವಜಾನು, ಪಕ್ಷದ ಮುಖಂಡ ಸುಕುರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.



