ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: 8 ಮಂದಿ ಬಂಧನ

ಮಡಿಕೇರಿ: ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನಿಸಿದ ಆರೋಪದ ಮೇರೆಗೆ ಎಂಟು ಮಂದಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಸಮೀಪದ ತಲಕಾವೇರಿ ವನ್ಯಧಾಮದಲ್ಲಿ ಆರ್‌ಎಫ್‌ಒ ತ್ಯಾಗರಾಜ್ ನೇತೃತ್ವದಲ್ಲಿ ಬೆಳಗಿನ ಜಾವ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಬಂದೂಕು, ಮದ್ದು ಗುಂಡುಗಳು ಹಾಗೂ ಮೂರು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರು ಕುಂದಚೇರಿ ಗ್ರಾಮದ ಕೋಪಟ್ಟಿ ಚರಂಡೇಟಿ ನಿವಾಸಿಗಳೆಂದು ತಿಳಿದುಬಂದಿದೆ. ಸಿಂಗತ್ತೂರು ಗ್ರಾಮದ ಹೆಚ್. ವಸಂತ ಎಂಬವರಿಗೆ ಸೇರಿದ ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ಕಾರ್ಯಾಚರಣೆ ವೇಳೆ ಒಟ್ಟು ಒಂಬತ್ತು ಮಂದಿ ಇದ್ದರೆನ್ನಲಾಗಿದ್ದು, ಎಂಟು ಮಂದಿಯನ್ನು ಬಂಧಿಸಲಾಗಿದೆ. ಓರ್ವ ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಎಸಿಎಫ್ ಅನನ್ಯ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version