ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
ವಿರಾಜಪೇಟೆ: ವಿರಾಜಪೇಟೆ ತಾಲೂಕು ಕೊಂಡಂಗೇರಿ ಭಾಗದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೊಡಗು ಖಾಜಿ ಭವನದ ಕಟ್ಟಡ ಕಾಮಗಾರಿಯ ಪ್ರಗತಿಯನ್ನು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ವೀಕ್ಷಿಸಿ ಪರಿಶೀಲನೆ ನಡೆಸಿದರು.
ಕಟ್ಟಡ ಕಾಮಗಾರಿಯ ವಿವಿಧ ಹಂತಗಳನ್ನು ವೀಕ್ಷಿಸಿದ ಅವರು, ಕಾಮಗಾರಿಯ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಎರ್ಮು ಹಾಜಿ, ಕಾವೇರಿ ಜಲನಯನ ಪ್ರದೇಶ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಸೂರಜ್ ಹೊಸೂರು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

