ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು
ಮಡಿಕೇರಿ: ಕೊಡಗು ಜಿಲ್ಲೆಯ ಸೂರ್ಲಬ್ಬಿ ಗ್ರಾಮದ ಅಪ್ರಾಪ್ತ ಬಾಲಕಿಯ ಭೀಕರ ಹತ್ಯೆ ಪ್ರಕರಣದಲ್ಲಿ ಆರೋಪಿ ಓಂಕಾರಪ್ಪ ಅಲಿಯಾಸ್ ಪ್ರಕಾಶ್ಗೆ ಮರಣದಂಡನೆ ಶಿಕ್ಷೆ ವಿಧಿಸಿ ಮಡಿಕೇರಿಯ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.
2024ರ ಮೇ 9ರಂದು ನಡೆದಿದ್ದ ಈ ಭೀಕರ ಹತ್ಯೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ತಾನು ಪ್ರೀತಿಸುತ್ತಿದ್ದ ಬಾಲಕಿಯನ್ನು ಆರೋಪಿ ಪ್ರಕಾಶ್ ಅಮಾನುಷವಾಗಿ ತಲೆ ಕಡಿದು ಹತ್ಯೆ ಮಾಡಿದ್ದ. ಬಳಿಕ ಬಾಲಕಿಯ ರುಂಡ ಹಾಗೂ ದೇಹವನ್ನು ಬೇರ್ಪಡಿಸಿ, ರುಂಡವನ್ನು ಅರಣ್ಯದೊಳಗೆ ಪ್ಲಾಸ್ಟಿಕ್ ಚೀಲದಲ್ಲಿ ಮರದ ರೆಂಬೆಗೆ ನೇತುಹಾಕಿ ಬಚ್ಚಿಟ್ಟಿದ್ದ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸುಮಾರು ಎರಡು ವರ್ಷ ಆರು ತಿಂಗಳ ಕಾಲ ನಡೆದ ವಿಚಾರಣೆಯ ಬಳಿಕ ಇದೀಗ ನ್ಯಾಯಾಲಯ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಮೂಲಕ ಕೊಡಗು ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಸೂರ್ಲಬ್ಬಿ ಬಾಲಕಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ.

