Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
    ಜಿಲ್ಲೆ

    ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

    ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

    : ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟರೆ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ -ಗಣ್ಯರ ಕಿವಿಮಾತು

     

    ವರದಿ :ಝಕರಿಯ ನಾಪೋಕ್ಲು

     

    ನಾಪೋಕ್ಲು :ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ವಿಭಾಗದ ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳಿಂದ ಆಯೋಜಿಸಲಾದ ಬೀಳ್ಕೊಡುಗೆ ಸಮಾರಂಭವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು.

     

    ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

     

    ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾದ ಎ. ಎಂ.ವಿಶಾಲ ಅವರು ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಯಾವುದೇ ತಪ್ಪುಗಳು ಆದಲ್ಲಿ ಅವರನ್ನು ಸರಿದಾರಿಗೆ ತರುವುದು ನಮ್ಮ ಆದ್ಯ ಕರ್ತವ್ಯವಾಗಿದೆ.ಆ ನಿಟ್ಟಿನಲ್ಲಿ ಉಪನ್ಯಾಸಕರು ವಿದ್ಯಾರ್ಥಿಗಳ ತಪ್ಪನ್ನು ತಿದ್ದಿಕೊಳ್ಳಲು ನಿರಂತರ ಪ್ರಯತ್ನ ಪಡುತ್ತೇವೆ. ವಿದ್ಯಾರ್ಥಿಗಳು ಶ್ರಮಪಟ್ಟು ಓದಿ ಎಲ್ಲರೂ ತೇರ್ಗಡೆಯಾಗಿ ಶೇಕಡ 100 ರಷ್ಟು ಫಲಿತಾಂಶವನ್ನು ತಂದು ನಮ್ಮ ಶಾಲೆಗೆ ಕೀರ್ತಿಯನ್ನು ತರಬೇಕು ಎಂದು ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು.

     

    ಸಂಸ್ಥೆಯ ಉಪ ಪ್ರಾಂಶುಪಾಲರಾದ ಎನ್. ಎಸ್. ಶಿವಣ್ಣ ಮಾತನಾಡಿ ಪರೀಕ್ಷೆಗೆ ಕೆಲವೇ ದಿನಗಳು ಬಾಕಿಇದ್ದು ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಓದಿನ ಕಡೆ ಗಮನ ಹರಿಸಿ ಉತ್ತಮ ಅಂಕದೊಂದಿಗೆ ತೇರ್ಗಡೆ ಆಗುವ ನಿಟ್ಟಿನಲ್ಲಿ ಪ್ರಯತ್ನ ಪಡಬೇಕು ಎಂದು ಕಿವಿಮಾತು ಹೇಳಿ ಶುಭ ಹಾರೈಸಿದರು.

     

    ಸಂಸ್ಥೆಯ ಸಿವಿಲ್ ಕಾಮಗಾರಿ ಉಪ ಸಮಿತಿ ಅಧ್ಯಕ್ಷ ಕೆ. ಎ.ಹಾರಿಸ್ ಮಾತನಾಡಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜು ಪ್ರಾರಂಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡಂತೆ

    ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಬೀಳ್ಕೊಡುಗೆ ಕಾರ್ಯಕ್ರಮ ಈ ದಿನ ವಿದ್ಯಾರ್ಥಿಗಳಿಗೆ ಸಂತಸ ಸಂಭ್ರಮದೊಂದಿಗೆ ದುಃಖವೂ ಕೂಡ ಇರುತ್ತದೆ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಕೇವಲ ಅಂಕಕ್ಕೋಸ್ಕರ ಕಲಿಯದೆ ಬದುಕಿ ಗೋಸ್ಕರ ಕಲಿಯಬೇಕು.ಕೇವಲ ಅಂಕದಿಂದ ಮಾತ್ರ ಉತ್ತಮ ಭವಿಷ್ಯವಲ್ಲ ಹಿರಿಯರ ಪೋಷಕರ ಶಿಕ್ಷಕರ ಆಶೀರ್ವಾದ ಪಡೆದುಕೊಂಡು, ಜೀವನದಲ್ಲಿ ಅನುಸರಣೆ ಅಳವಡಿಸಿಕೊಂಡು ಶ್ರಮ ಪಟ್ಟರೆ ಮಾತ್ರ ಉಜ್ವಲ ಭವಿಷ್ಯ ಕಂಡುಕೊಳ್ಳಲು ಸಾಧ್ಯ. ಆ ನಿಟ್ಟಿನಲ್ಲಿ ಶಿಕ್ಷಕರನ್ನು, ಪೋಷಕರನ್ನು ಹಿರಿಯರನ್ನು ಗೌರವಿಸಿ

    ವಿದ್ಯಾರ್ಥಿಗಳು ಉತ್ತಮ ಅಂಕ ದೊಂದಿಗೆ ತೇರ್ಗಡೆಯಾದರೆ ನಿಮ್ಮ ಭವಿಷ್ಯಕ್ಕೆ ಬದ್ರ ಬುನಾದಿ ಆಗಲಿದೆ. ಇದರಿಂದ ನಿಮ್ಮ ಶಿಕ್ಷಕರಿಗೂ ಪೋಷಕರಿಗೂ ಮತ್ತು ಶಾಲೆಗೂ ಕೂಡ ಕೀರ್ತಿ ತಂದಂತಾಗುತ್ತದೆ ಎಂದರಲ್ಲದೆ ವಿದ್ಯಾರ್ಥಿಗಳು ಕಲಿತ ಶಾಲೆಯೊಂದಿಗೆ ನಿರಂತರ ಸಂಬಂಧ ಇಟ್ಟುಕೊಳ್ಳಬೇಕೆಂದು ತಿಳಿಸಿ ಶುಭ ಹಾರೈಸಿದರು.

     

    ಸಂಸ್ಥೆಯ ಉಪನ್ಯಾಸಕರಾದ ಸಚಿನ್, ಗಗನ್ , ವಿಜಿತ, ಶೈಜಿ ಮತ್ತು ಕೃತಿಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

     

    ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ವಿವಿಧ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರನ್ನು ರಂಜಿಸಿತು.

     

    ಈ ಸಂದರ್ಭ ಶಾಲೆಯ ಉಪನ್ಯಾಸಕ ವೃಂದದವರು, ಶಾಲೆಯ ಸಿಬ್ಬಂದಿಗಳು,ವಿದ್ಯಾರ್ಥಿಗಳು ಹಾಜರಿದ್ದರು.

    Previous Articleಕೊಡಗು ಸೈಬರ್ ಕ್ರೈಂ ಪೊಲೀಸರಿಂದ ಮೂರು ತಿಂಗಳಲ್ಲಿ 100 ಮೊಬೈಲ್ ಫೋನ್ ರಿಕವರ್ ಕೊಡಗು ಸೈಬರ್ ಕ್ರೈಂ ಪೊಲೀಸರ ಮಿಂಚಿನ ಕಾರ್ಯಚರಣೆ
    Next Article ಮದೆನಾಡು ಕಾಡಾನೆ ದಾಳಿ -ಗಾಯಾಳುವಿಗೆ ಸಾಂತ್ವನ ಹೇಳಿದ ಮಾಜಿ ಶಾಸಕ ಕೆ.ಜಿ. ಬೋಪಯ್ಯ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.