Close Menu
Kodagu News
    ಹೊಸ ಸುದ್ದಿ

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    • ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ: KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಫೆಬ್ರವರಿ 12ರ ಮುಷ್ಕರ ನಿಮಿತ್ತ ಕರಪತ್ರ ಬಿಡುಗಡೆ
    ಜಿಲ್ಲೆ

    ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಫೆಬ್ರವರಿ 12ರ ಮುಷ್ಕರ ನಿಮಿತ್ತ ಕರಪತ್ರ ಬಿಡುಗಡೆ

    ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಫೆಬ್ರವರಿ 12ರ ಮುಷ್ಕರ ನಿಮಿತ್ತ ಕರಪತ್ರ ಬಿಡುಗಡೆ

     

    ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಫೆ. 12ರಂದು ಹಮ್ಮಿಕೊಂಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗಾಗಿ ನಗರದಲ್ಲಿ ಮುಷ್ಕರದ ಕುರಿತಾದ ಕರಪತ್ರವನ್ನು ಬಿಡುಗಡೆ ಮಾಡುವ ಮೂಲಕ ಹೋರಾಟಕ್ಕೆ ವಿರಾಜಪೇಟೆಯ ಗಡಿಯಾರ ಕಂಬದ ಬಳಿ ಅಧಿಕೃತ ಚಾಲನೆ ನೀಡಲಾಯಿತು.

    ಮಡಿಕೇರಿಯ ಹಳೆಯ ಖಾಸಗಿ ಬಸ್ಸು ನಿಲ್ಧಾಣದಿಂದ ಡಿಸಿ ಕಛೇರಿವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆಯಲ್ಲಿ ಎಲ್ಲ ಕಾರ್ಮಿಕ ಸಂಘಟನೆಯವರು ಭಾಗವಹಿಸುವಂತೆ ಮನವಿ ಮಾಡಿ ಮಾತನಾಡಿದ ಕಾರ್ಮಿಕ ಸಂಘಟನೆಯ ಹಿರಿಯ ಮುಖಂಡರಾದ ಡಾ. ಐ.ಆರ್ ದುರ್ಗಾಪ್ರಸಾದ್ ಅವರು ಕೇಂದ್ರ ಸರ್ಕಾರವು ರೈಲ್ವೆ, ಬಂದರು, ಕಲ್ಲಿದ್ದಲು ಗಣಿ, ತೈಲ ಮತ್ತು ರಕ್ಷಣಾ ಉತ್ಪಾದನೆಯಂತಹ ಪ್ರಮುಖ ಕ್ಷೇತ್ರಗಳನ್ನು ವಿದೇಶಿ ಮತ್ತು ದೇಶೀಯ ಕಾಪೆರ್Çರೇಟ್ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿದೆ. ಇದರಿಂದಾಗಿ ಉದ್ಯೋಗ ಭದ್ರತೆ ನಾಶವಾಗುತ್ತಿದ್ದು, ನಿರುದ್ಯೋಗ ಸಮಸ್ಯೆ ಗಂಭೀರ ಸ್ವರೂಪ ತಾಳಿದೆ. ಸಾರ್ವಜನಿಕ ಸೇವೆಗಳ ದರ ಏರಿಕೆಯಾಗಿ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹೆಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೇಂದ್ರದಲ್ಲಿ ಮೂರು ಬಾರಿ ಅಧಿಕಾರ ಹಿಡಿದಿರುವ ನರೇಂದ್ರ ಮೋದಿ ಸರಕಾರ 2025ರಲ್ಲಿ ನವಂಬರ್‍ನಲ್ಲಿ 4 ಕಾರ್ಮಿಕ ವಿರೋಧಿ ಕಾಯ್ದೆಗಳನ್ನ ಜಾರಿಗೆ ತಂದಿದ್ದು, ಇದರ ಜೊತೆಗೆ ನರೇಗಾ ಯೋಜನೆ ಮತ್ತೆ ಚಾಲನೆ ನೀಡುವುದು, ಭೂ ಸ್ವಾಧೀನ ಕಾಯ್ದೆಯನ್ನ ಹಿಂಪಡೆಯಬೇಕು, ಎಪಿಎಂಸಿ ಕಾಯ್ದೆ, ಜಾನುವಾರು ಸಂರಕ್ಷಣಾ ತಿದ್ದುಪಡಿ, ವಿದ್ಯುತ್ ಖಾಸಗಿಕರಣ ಕೈ ಬಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ಹಮ್ಮಿಕೊಂಡಿದ್ದು ಸಾರ್ವಜನಿಕರ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.

    ಸಿಐಟಿಯು ಜಿಲ್ಲಾಧ್ಯಕ್ಷ ಎ.ಸಿ ಸಾಬು ಮಾತನಾಡಿ ಕೇಂದ್ರ ಸರಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆ ರದ್ದುಪಡಿಸಬೇಕು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಯುವಜನತೆ ಮತ್ತು ಶ್ರಮಿಕ ವರ್ಗವನ್ನು ಆಧುನಿಕ ಗುಲಾಮಗಿರಿಗೆ ತಳ್ಳಲಿದೆ. ಕಾರ್ಮಿಕರು, ರೈತರು, ಯುವ ಸಮುದಾಯ, ಮಹಿಳಾ ಸಂಘಟನೆಗಳು, ಹಾಗೂ ಎಲ್ಲಾ ದುಡಿಯುವ ವರ್ಗದ ಜನ ತಮ್ಮ ಎಲ್ಲಾ ರೀತಿಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತರಾಗಿ ಮುಷ್ಕರಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

    ವೇತನ ಸಂಹಿತೆ ನಿಯಮಗಳಲ್ಲಿಯೂ ಕಾರ್ಮಿಕರ ಹಕ್ಕುಗಳನ್ನು ಮೊಕಟುಗೊಳಿಸಲಾಗಿದೆ. ವಸತಿ ಸೌಕರ್ಯದ ಹೆಸರಿನಲ್ಲಿ ಯಾವುದೇ ಮಾನದಂಡಗಳಿಲ್ಲದೆ ವೇತನ ಕಡಿತಗೊಳಿಸಲು ಮಾಲೀಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಬ್ಯಾಂಕೇತರ ಡಿಜಿಟಲ್ ವ್ಯಾಲೆಟ್‍ಗಳ ಮೂಲಕ ವೇತನ ಪಾವತಿಗೆ ಅವಕಾಶ ನೀಡಿರುವುದು ಕಾರ್ಮಿಕರನ್ನು ಶೋಷಣೆಗೆ ತಳ್ಳಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ಸಂದರ್ಭ ಸಿಐಟಿಯು ಪದಾಧಿಕಾರಿಗಳಾದ ಶಾಜಿ ರಮೇಶ್, ಖಾಸಿಂ, ಕೆ.ಕೆ.ಹರಿದಾಸ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಪದ್ಮಿನಿ ಶ್ರೀಧರ್, ಡಿವೈಎಫ್‍ಐ ಜಿಲ್ಲಾ ಮುಖಂಡ ಸಾದಿಖ್ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಯ ಮುಖಂಡರುಗಳು ಇದ್ದರು.

    Previous Articleರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಹಾಡುವುದು ಕಡ್ಡಾಯ : ಕೇಂದ್ರದಿಂದ ಮಾರ್ಗಸೂಚಿ
    Next Article ಮಡಿಕೇರಿಯಲ್ಲಿ 10ನೇ ವರ್ಷದ ರಾಜ್ಯಮಟ್ಟದ ಮೊಗೇರ ಕ್ರೀಡಾಕೂಟ

    Related Posts

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.