Close Menu
Kodagu News
    ಹೊಸ ಸುದ್ದಿ

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    • ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
    • ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ? ಸಿದ್ದರಾಮಯ್ಯ ಸುಳಿವು
    ಜಿಲ್ಲೆ

    ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ? ಸಿದ್ದರಾಮಯ್ಯ ಸುಳಿವು

    ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ? ಸಿದ್ದರಾಮಯ್ಯ ಸುಳಿವು

    ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ವ್ಯಸನವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮಕ್ಕೆ ಮುಂದಾಗಲು ಸರ್ಕಾರ ನಿರ್ಧರಿಸಿದೆ.

     

    ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಅವರ ಅಧಿಕೃತ ಅಭಿಪ್ರಾಯವನ್ನು ಕೋರಿದ್ದಾರೆ. ಕ್ಯಾಂಪಸ್‌ಗಳಲ್ಲಿ ಅಪ್ರಾಪ್ತ ವಯಸ್ಕರ ಮೊಬೈಲ್ ಬಳಕೆಯನ್ನು ನಿರ್ಬಂಧಿಸುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ವರದಿ ನೀಡುವಂತೆ ಅವರು ಸೂಚಿಸಿದ್ದಾರೆ.

     

    ಬೆಂಗಳೂರಿನಲ್ಲಿ ಶನಿವಾರ ನಡೆದ ಉಪಕುಲಪತಿಗಳ (ವಿಸಿ) ಸಮಾವೇಶದಲ್ಲಿ ಅವರು ಈ ಬಗ್ಗೆ ಚರ್ಚಿಸಿದರು. ಚರ್ಚೆಯ ಸಮಯದಲ್ಲಿ, ಸಿದ್ದರಾಮಯ್ಯ ಅವರು ಮೊಬೈಲ್ ವ್ಯಸನ, ಆನ್‌ಲೈನ್ ಗೇಮಿಂಗ್, ಮಕ್ಕಳ ಶೈಕ್ಷಣಿಕ ಮತ್ತು ದೈಹಿಕ ಸಾಮರ್ಥ್ಯದ ಮೇಲೆ ಸಾಮಾಜಿಕ ಮಾಧ್ಯಮದ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

     

    *ಸಿಎಂ ಕಳವಳಕ್ಕೆ ಪ್ರಮುಖ ಕಾರಣಗಳು:*

     

    ವಿಶ್ವವಿದ್ಯಾಲಯಗಳ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೊಬೈಲ್ ಬಳಕೆಯಿಂದ ಉಂಟಾಗುತ್ತಿರುವ

    ಸಾಮಾಜಿಕ ಜಾಲತಾಣದ ವ್ಯಸನವು ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸುವ ಬದಲು ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ಸಮಯ ಕಳೆಯುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ. ಅತಿಯಾದ ಮೊಬೈಲ್ ಬಳಕೆ ಮಕ್ಕಳ ವರ್ತನೆ, ಶಿಕ್ಷಣ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ತಂತ್ರಜ್ಞಾನದ ದುರ್ಬಳಕೆಯಿಂದಾಗಿ ಮಕ್ಕಳು ಮಾದಕ ದ್ರವ್ಯಗಳ (Drugs) ಜಾಲಕ್ಕೆ ಸಿಲುಕುವ ಅಪಾಯ ಹೆಚ್ಚುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

    “ಈಗಾಗಲೇ ಆಸ್ಟ್ರೇಲಿಯಾ ಸೇರಿದಂತೆ ಹಲವು ರಾಷ್ಟ್ರಗಳು ಶಾಲಾ ವಿದ್ಯಾರ್ಥಿಗಳ ಮೊಬೈಲ್ ಬಳಕೆಯ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಿವೆ. ಇದೇ ಮಾದರಿಯನ್ನು ರಾಜ್ಯದಲ್ಲೂ ಜಾರಿಗೆ ತರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ,” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ನಿಯಮವು ಕೇವಲ 16 ವರ್ಷದೊಳಗಿನ ಅಪ್ರಾಪ್ತರಿಗೆ ಮಾತ್ರ ಅನ್ವಯಿಸಲಿದೆ ಎಂದು ಅವರು ಹೇಳಿದ್ದಾರೆ.

    ಈ ಪ್ರಸ್ತಾವನೆ ಜಾರಿಗೆ ಬಂದಲ್ಲಿ, ಶೈಕ್ಷಣಿಕ ವಲಯದಲ್ಲಿ ತಂತ್ರಜ್ಞಾನದ ದುರ್ಬಳಕೆಯನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಲಿದೆ.

    Previous Articleಕೊಡಗಿನಲ್ಲಿ ಒಮ್ಮೆಲೆ ತಾಪಮಾನ ಏರಿಕೆ
    Next Article ಕುಟ್ಟ ಪೊಲೀಸ್ ಠಾಣಾ ಸಿಬ್ಬಂದಿ ಎ.ಟಿ ಮಂಜುನಾಥ್ ರಚಿತ ಕೃತಿ “ಕಾಣದ ಕಡಲು” ಲೋಕಾರ್ಪಣೆ

    Related Posts

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.