Close Menu
Kodagu News
    ಹೊಸ ಸುದ್ದಿ

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದ ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವವು ಏಪ್ರಿಲ್ ೩ ಮತ್ತು ೪ ರಂದು ನಡೆಯಲಿದೆ.
    ಜಿಲ್ಲೆ

    ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದ ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವವು ಏಪ್ರಿಲ್ ೩ ಮತ್ತು ೪ ರಂದು ನಡೆಯಲಿದೆ.

    ರಜಿತ ಕಾರ್ಯಪ್ಪ, (೯೪೮೧೭೭೧೮೫೧)

    ವಿರಾಜಪೇಟೆ:ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವವು ಏಪ್ರಿಲ್ ೩ ಮತ್ತು ೪ ರಂದು ನಡೆಯಲಿದೆ.

    ಕೆದಮುಳ್ಳೂರು ಚಾಮುಂಡಿ ಹಬ್ಬ ಎಂದರೆ ಎಲ್ಲೆಡೆ ಪ್ರಚಲಿತದಲ್ಲಿದ್ದು ಅತ್ಯಂತ ಹೆಸರುವಾಸಿಯಾಗಿದೆ. ಹಾಗೂ ಅತ್ಯಂತ ಶಕ್ತಿಯನ್ನು ಹೊಂದಿರತಕ್ಕAತಹ ಚಾಮುಂಡಿ ದೇವಿಯ ಕ್ಷೇತ್ರವಾಗಿದೆ. ಹಾಗಾಗಿ ಈ ಉತ್ಸವದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ತರು, ದೂರ ದೂರದ ಊರುಗಳಿಂದ ಭಕ್ತರು, ಆಗಮಿಸಿ ದೇವರಲ್ಲಿ ಹರಕೆ ಹೊತ್ತುಕೊಂಡು ತಮ್ಮ ಸಂಕಷ್ಟಗಳನ್ನು ಪರಿಹರಿಸಿಕೊಳ್ಳುತ್ತಾರೆ.

    ೨ ರಂದು ರಾತ್ರಿ ೮:೩೦ ಗಂಟೆಗೆ ಕೊಟ್ಟಿಪಾಡೋ, ೩ ರಂದು ರಾತ್ರಿ ೮:೩೦ ಗಂಟೆಗೆ ತಕ್ಕರ ಮನೆಯಿಂದ ಭಂಡಾರ ಇಳಿಯುವುದು, ಹಾಗೂ ರಾತ್ರಿ ವಿವಿದ ಕೋಲಗಳು, ೪ರಂದು ಬೆಳಿಗ್ಗೆ ೭:೩೦ ಗಂಟೆಗೆ ವಿಷ್ಣುಮೂರ್ತಿ ತೆರೆ, ಮಧ್ಯಾಹ್ನ ೧೨ ಗಂಟೆಗೆ ಶ್ರೀ ಚಾಮುಂಡಿ ತೆರೆ ನಡೆಯಲಿದೆ.

    ಬೆಳಿಗ್ಗೆ ೪ ರಂದು ಪ್ರಮುಖವಾದ ವಿಷ್ಣುಮೂರ್ತಿ ಕೋಲವು ದೇವಾಲಯದ ಮುಂದೆ ಸಿದ್ಧಪಡಿಸಿದ್ದ ಬೆಂಕಿ ಕೆಂಡದ ಮೇಲೆ ೧೦೧ ಬಾರಿ ಮೇಲೇರಿ ಬೀಳಲಿದೆ.

    ಬಳಿಕ ಮಧ್ಯಾಹ್ನ ೧೨ ರ ಸುಮಾರಿಗೆ ಇನ್ನೊಂದು ಪ್ರಮುಖವಾದ ಚಾಮುಂಡಿ ದೇವಿಯ ಕೋಲವನ್ನು ಪ್ರಸ್ತುತಪಡಿಸಲಾಗುತ್ತದೆ.

    ಈ ಉತ್ಸವದ ಕೊನೆಯ ತೆರೆಯಾದ ಚಾಮುಂಡಿ ದೇವಿ ಕೆಂಪು ವಸ್ತçದಲ್ಲಿ ಕಂಗೋಳಿಸುವ ತೆರೆಯಾಗಿದ್ದು ಆಕರ್ಷಕವಾಗಿರುತ್ತದೆ. ಈ ತೆರೆಗೆ ಉದ್ದನೆಯ ಬಿದಿರಿನಿಂದ ತಯಾರಿಸಿ ಶೃಂಗಾರಗೊಳಿಸಿದ ಮುಡಿಯನ್ನು ಏರಿಸಲಾಗುತ್ತದೆ. ಇದು ಭಕ್ತರನ್ನು ಆಕರ್ಷಿಸುವುದಲ್ಲದೆ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡುತ್ತದೆ.

    ಸಂಜೆ ವೇಳೆಗೆ ದೇವರು ಬನಕ್ಕೆ ತೆರಳಿ ಅಲ್ಲಿ ಪೂಜಾ ವಿಧಿ ವಿಧಾನಗಳನ್ನು ಪೂರೈಸಿದ ಬಳಿಕ ವಾರ್ಷಿಕ ತೆರೆ ಮಹೋತ್ಸವಕ್ಕೆ ತೆರೆ ಎಳೆಯಲಾಗುತ್ತದೆ.

    ವಾರ್ಷಿಕ ತೆರೆ ಮಹೋತ್ಸವದಲ್ಲಿ ಸ್ಥಳೀಯರು ವಿರಾಜಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿ ತಮ್ಮ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥಿಸಿ ಹರಕೆ ಕಾಣಿಕೆಗಳನ್ನು ಒಪ್ಪಿಸುತ್ತಾರೆ.

    ಈಗಾಗಲೇ ದೇವಾಲಯದ ಕ್ಷೇತ್ರದ ಪದ್ದತಿಯಂತೆ ಹಬ್ಬದ ಕಟ್ಟು ಬಿದ್ದಿದ್ದು, ಗ್ರಾಮದಲ್ಲಿ ಹಸಿ ಮರಗಳನ್ನು ಕಡಿಯುವಂತಿಲ್ಲ.

    ಈ ಕ್ಷೇತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಅಪಾರವಾದ ಕ್ಷೇತ್ರ ಮಹಿಮೆಯನ್ನು ಹೊಂದಿದ್ದಲ್ಲದೆ ನಂಬಿದವರ ಕೈ ಬಿಡುವುದಿಲ್ಲ ಎನ್ನುವ ಮಾತಿದೆ. ಭಕ್ತರು ಶ್ರದ್ದಾ ಭಕ್ತಿಯಿಂದ ನಂಬಿಕೆಯಿAದ ದೇವಾಲಯದ ಕಟ್ಟುಪಾಡಿನಂತೆ ಚಾಮುಂಡಿ ದೈವಸ್ಥಾನಕ್ಕೆ ಪ್ರವೇಶ ನೀಡಬಹುದಾಗಿದೆ. ದೇವರನ್ನು ಪರೀಕ್ಷಿಸುವ ನೆಪದಲ್ಲಿ ಅಥವಾ ದೇವರ ಸಂಪ್ರದಾಯ ಮತ್ತು ಕಟ್ಟುಪಾಡುಗಳಿಗೆ ವಿರುದ್ದವಾಗಿ ನಡೆದಂತಹ ಸಂದರ್ಭದಲ್ಲಿ ದೇವರ ಕೆಂಗಣ್ಣಿಗೆ ಗುರಿಯಾದ ಸನ್ನಿವೇಶಗಳು ಬಹಳಷ್ಟಿವೆ.

    ಪ್ರತಿಯೊಬ್ಬರೂ ಶ್ರದ್ದಾ ಭಕ್ತಿಯಿಂದ ಚಾಮುಂಡಿ ದೇವರ ಕೃಪೆಗೆ ಪಾತ್ರರಾಗುವಂತೆ ಹಾಗೂ ನಾಡಿನ ಭಕ್ತಾದಿಗಳು ದೇವರ ಉತ್ಸವದಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಪಡೆಯಬೇಕೆಂದು ದೇವ ತಕ್ಕರಾದ ಮಾಳೇಟಿರ ಗಣೇಶ್ ಕಾರ್ಯಪ್ಪ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

    ಪೋಟೋ:ಎಂಡಿಕೆ೩೦ವಿಪಿಟಿ೦೫ಎ: ಚಾಮುಂಡಿ ದೇವರ ತೆರೆ

    Previous Articleಕುಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಶಾಸಕರ ಅನುದಾನದ ₹ 28. ಲಕ್ಷದಲ್ಲಿ ಉದ್ದೇಶಿಸಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕರು ನೆರವೇರಿಸಿದರು
    Next Article ಕೊಯನಾಡು ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಕಾರು ಪವಾಡಸದೃಶ ಚಾಲಕ ಪಾರು

    Related Posts

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.