Close Menu
Kodagu News
    ಹೊಸ ಸುದ್ದಿ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    • ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾಳೆಯಿಂದ ಕೊಂಡಂಗೇರಿ ಮಖಾಂ ಉರೂಸ್ ಆರಂಭ- ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಉರೂಸ್ ಆಚರಣೆಗೆ ನಿರ್ಧಾರ
    ಜಿಲ್ಲೆ

    ನಾಳೆಯಿಂದ ಕೊಂಡಂಗೇರಿ ಮಖಾಂ ಉರೂಸ್ ಆರಂಭ- ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಉರೂಸ್ ಆಚರಣೆಗೆ ನಿರ್ಧಾರ

    ನಾಳೆಯಿಂದ ಕೊಂಡಂಗೇರಿ ಮಖಾಂ ಉರೂಸ್ ಆರಂಭ-

    ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಉರೂಸ್ ಆಚರಣೆಗೆ ನಿರ್ಧಾರ

    ವರದಿ :ಝಕರಿಯ ನಾಪೋಕ್ಲು

     

    ನಾಪೋಕ್ಲು :ಇತಿಹಾಸ ಪ್ರಸಿದ್ಧ ಕೊಂಡಂಗೇರಿ ಮಖಾಂ ಉರೂಸ್ ಸಮಾರಂಭವು ಏ. 10ರಿಂದ 14ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕೊಂಡಂಗೇರಿ ಸುನ್ನೀ ಮುಸ್ಲಿಂ ಜಮಾಅತ್ ಅಧ್ಯಕ್ಷ ಪೇರಿಯಂಡ. ಎ.ಯೂಸುಫ್ ಹಾಜಿ ತಿಳಿಸಿದ್ದಾರೆ.

     

    ಕೊಂಡಂಗೇರಿ ಜಮಾಅತ್ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷ ಯೂಸುಫ್ ಹಾಜಿ ಅವರು ಉರೂಸ್ ಸಮಾರಂಭ ಕಾರ್ಯಕ್ರಮದಲ್ಲಿ ಹಲವಾರು ಸಾಮಾಜಿಕ ಧಾರ್ಮಿಕ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದು ಜಾತಿ,ಧರ್ಮ, ಭೇದ ಮರೆತು ಸರ್ವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

     

    ಜಮಾಅತ್ ಕಾರ್ಯದರ್ಶಿ ಪಿ. ಎ.ಮುಜೀಬ್ ಮಾತನಾಡಿ ಏ.10ರ ಶುಕ್ರವಾರ ಜುಮಾ ನಮಾಜಿನ ಬಳಿಕ ಕೊಂಡಂಗೇರಿ ಸುನ್ನಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಯೂಸುಫ್ ಹಾಜಿ ಹಾಗೂ ಉಪಾಧ್ಯಕ್ಷರಾದ ಬಶೀರ್ ಅವರು ಜಂಟಿಯಾಗಿ ದ್ವಜಾರೋಹಣ ನೆರವೇರಿಸುವ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡಲಿದ್ದಾರೆ.

    ಸಯ್ಯದ್ ಎಸ್ ಹಕೀಂ ಅಸ್ಸಖಾಫ್ ಆದೂರ್ ತಂಙಳ್ ಮಖಾಂ ಅಲಂಕಾರ,ಖತಂ ದುಆ ಹಾಗೂ ಸಾಮೂಹಿಕ ಪ್ರಾರ್ಥನೆಗೆ ನೇತೃತ್ವ ವಹಿಸಲಿದ್ದಾರೆ.

    ಅಂದು ರಾತ್ರಿ ಅಸಯ್ಯದ್ ಜಾಫರ್ ಸ್ವಾದಿಕ್ ತಂಙಳ್ ಕುಂಬೋಳ್ ಅವರ ನೇತೃತ್ವದಲ್ಲಿ ಜಲಾಲಿಯ್ಯ ರಾತೀಬ್ ನಡೆಯಲಿದ್ದು ಪ್ರಖ್ಯಾತ ವಾಗ್ಮಿ ಪೇರೋಡ್ ಅಬ್ದುಲ್ ರಹ್ಮನ್ ಸಖಾಫಿ ಮತ ಪ್ರವಚನ ನಡೆಸಲಿದ್ದಾರೆ.

     

    ಏ.11 ರಂದು ರಾತ್ರಿ ಮೊಹಮ್ಮದ್ ರಾಫಿ ಹಿಮಾಮಿ ಸಖಾಫಿ ದೇರಳಕಟ್ಟೆ ಮತ ಪ್ರವಚನಕ್ಕೆ ನೇತೃತ್ವ ವಹಿಸಲಿದ್ದಾರೆ.ಏ.12 ರಂದು ನೌಫಲ್ ಸಖಾಫಿ ಕಳಸ ಧಾರ್ಮಿಕ ಪ್ರವಚನ ನಡೆಸಲಿದ್ದಾರೆ.

     

    ಏ.13ರಂದು ಮದ್ಯಾಹ್ನ 1 ಗಂಟೆಗೆ ಜಮಾಅತ್ ಅಧ್ಯಕ್ಷರಾದ ಪೇರಿಯಂಡ ಯೂಸುಫ್ ಹಾಜಿ ಅಧ್ಯಕ್ಷತೆಯಲ್ಲಿ ಸೌಹಾರ್ದ ಸಮ್ಮೇಳನ ನಡೆಯಲಿದ್ದು ಸಯ್ಯಿದ್ ಶಿಯಾಬುದ್ದೀನ್ ಅಲ್ ಐದರೂಸಿ ಕಿಲ್ಲೂರ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕರ್ನಾಟಕ ರಾಜ್ಯ ವಖ್ಫ್ ಕೌನ್ಸಿಲ್ ಉಪಾಧ್ಯಕ್ಷ ಶಾಫಿ ಸಅದಿ ಮುಖ್ಯ ಭಾಷಣ ಮಾಡಲಿದ್ದಾರೆ.ಕೂರ್ಗ್ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ ಪ್ರಾರ್ಥನೆಗೆ ನೇತೃತ್ವ ನೀಡಲಿದ್ದಾರೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ,ಮಡಿಕೇರಿ ಶಾಸಕರಾದ ಡಾ.ಮಂಥರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಸೇರಿದಂತೆ ವಿವಿಧ ಧಾರ್ಮಿಕ ಸಾಮಾಜಿಕ ಹಾಗೂ ರಾಜಕೀಯ ನೇತಾರರು ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ 4 ಗಂಟೆಗೆ ಮಸೀದಿಯಲ್ಲಿ ಮೌಲೂದ್ ಪಾರಾಯಣ ಹಾಗೂ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ.

    ಅಂದು ರಾತ್ರಿ ಪ್ರಖ್ಯಾತ ವಾಗ್ಮಿ ಡಾ.ಫಾರೂಕ್ ನಈಮಿ ಕೊಲ್ಲಂ ಧಾರ್ಮಿಕ ಮತಪ್ರವಚನ ನಡೆಯಲಿದ್ದಾರೆ.

     

    ಏ.14 ರಂದು ರಾತ್ರಿ ಸಮಾರೋಪ ಸಮಾರಂಭ ನಡೆಯಲಿದ್ದು ಪ್ರಖ್ಯಾತ ವಾಗ್ಮಿ ಪೇರೋಡ್ ಮೊಹಮ್ಮದ್ ಅ ಝ್ಹರಿ ಅವರು ಮುಖ್ಯ ಪ್ರಭಾಷಣ ನಡೆಸಲಿದ್ದು,ಸಯ್ಯಿದ್ ಕೆಎಸ್ ಅಟಕೋಯಾ ತಂಙಳ್ ಕುಂಬೋಳ್ ಪ್ರಾರ್ಥನೆಗೆ ನೇತೃತ್ವ ವಹಿಸಲಿದ್ದಾರೆ.

    ಕಾರ್ಯಕ್ರಮದಲ್ಲಿ ಹಲವಾರು ಉಲಮಾ,ಉಮಾರ, ರಾಜ್ಯಕೀಯ,ನೇತಾರರು ಸೇರಿದಂತೆ ಮತ್ತಿತರರು ಪ್ರಮುಖರು ಭಾಗವಹಿಸಲಿದ್ದು

    ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಉರೂಸ್ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಮುಜೀಬ್ ಕೋರಿದರು.

     

    ಸುದ್ದಿಗೊಷ್ಟಿಯಲ್ಲಿ ಕೊಂಡಂಗೇರಿ ಜಮಾಅತ್ ಕೋಶಾಧಿಕಾರಿ ಅಬ್ದುಲ್ ಕರೀಂ ಹಾಜಿ,ಹೆಚ್ಚುವರಿ ಕಾರ್ಯದರ್ಶಿ ಜೆ.ಎಸ್. ಮೊಹಮ್ಮದ್ ಹನೀಫ್,ಆಡಳಿತ ಮಂಡಳಿ ಸದಸ್ಯರಾದ ಟಿ.ಎಂ. ಅಬ್ದುಲ್ ಖಾದರ್ ಉಪಸ್ಥಿತರಿದ್ದರು.

    Previous Articleಶಾಸಕ ಡಾ ಮಂತರ್ ಗೌಡ ರವರಿಗೆ ಕೋರಿಕೆ ಸಲ್ಲಿಸಿದ ಕನ್ನಂಡಬಾಣೆ ನಿವಾಸಿಗಳು
    Next Article ಇತಿಹಾಸ ಪುಟ ಸೇರಿದ ಟೌನ್‍ಹಾಲ್ ಕಾವೇರಿ ಕಲಾಕ್ಷೇತ್ರ ನೂತನ ಕಲಾಭವನ ನಿರ್ಮಾಣಕ್ಕೆ ಡಾ.ಮಂತರ್ ಗೌಡ ಭೂಮಿಪೂಜೆ

    Related Posts

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.