Close Menu
Kodagu News
    ಹೊಸ ಸುದ್ದಿ

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.
    • ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ
    • ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ
    • ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ
    • ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ
    • ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ.
    • ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು
    • ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ ಯಶಸ್ವಿ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಆರೋಗ್ಯ»ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ: ಶಾಸಕ ಡಾ. ಮಂತರ್ ಗೌಡ ಅಭಿಮತ
    ಆರೋಗ್ಯ

    ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ: ಶಾಸಕ ಡಾ. ಮಂತರ್ ಗೌಡ ಅಭಿಮತ

    ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ: ಶಾಸಕ ಡಾ. ಮಂತರ್ ಗೌಡ ಅಭಿಮತ

    ಕುಶಾಲನಗರ: ವಿದ್ಯಾರ್ಥಿಗಳು ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗದೇ ಸಂಗೀತ, ಕಲೆ, ನೃತ್ಯ ಸೇರಿದಂತೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯ, ಸಾಮರ್ಥ್ಯವನ್ನು ಪ್ರದರ್ಶಿಸಬೇಕು. ಅದಕ್ಕೆ ಈ ಯುವ ವೈಭವ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಕಲ್ಪಿಸಿ ಕೊಟ್ಟಿದೆ. ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ. ಇಂತಹ ಪ್ರಯತ್ನಗಳು ಹೀಗೆಯೇ ಮುಂದುವರೆಯಲಿ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾಕ್ಟರ್ ಮಂತರ್ ಗೌಡ ಅಭಿಮತ ವ್ಯಕ್ತಪಡಿಸಿದರು.

     

    ಇಲ್ಲಿನ ಚಿಕ್ಕ ಅಳುವಾರದ ಜ್ಞಾನಕಾವೇರಿ ಆವರಣದ ಕೊಡಗು ವಿಶ್ವವಿದ್ಯಾಲಯದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಅಂತ‌ರ್ ಕಾಲೇಜು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಯುವ ವೈಭವ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

     

    ಕೊಡಗು ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಇದ್ದರೂ ಎಲ್ಲ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಬೇರೆ ಜಿಲ್ಲೆಯ ವಿಶ್ವವಿದ್ಯಾಲಯಗಳತ್ತ ಮುಖ ಮಾಡುತ್ತಿರುವುದು ಬೇಸರದ ಸಂಗತಿ. ನಮ್ಮ ಜಿಲ್ಲೆಯ ವಿಶ್ವವಿದ್ಯಾಲಯ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಾಲಕರು, ಶಿಕ್ಷಕರು ಮಕ್ಕಳಿಗೆ ನಮ್ಮ ವಿಶ್ವವಿದ್ಯಾಲಯದಲ್ಲಿ ಕಲಿಯಲು ಪ್ರೋತ್ಸಾಹ ನೀಡಿ ವಿವಿಯನ್ನು ಹೆಮ್ಮರವಾಗಿ ಬೆಳೆಸಬೇಕು. ಅದಕ್ಕಾಗಿ ವಿಶ್ವವಿದ್ಯಾಲಯವು ಈ ರೀತಿಯ ಸಾಂಸ್ಕೃತಿಕ, ಕ್ರೀಡಾ ಮತ್ತಿತರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ವಿದ್ಯಾರ್ಥಿಗಳನ್ನು ವಿವಿಯತ್ತ ಸೆಳೆಯಬೇಕು ಎಂದು ಸಲಹೆ ನೀಡಿದರು.

     

    ಗೌರವ ಅತಿಥಿಗಳಾಗಿ ಆಗಮಿಸಿದ್ದ ಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತಾರಾನಾಥ್ ಟಿ. ಸಿ. ಮಾತನಾಡಿ, ರಕ್ಷಣಾ, ಕ್ರೀಡೆ, ಸಾಹಿತ್ಯ, ಕಾಫಿ ಮತ್ತಿತರ ಕ್ಷೇತ್ರಗಳಲ್ಲಿ ಕೊಡಗು ಜಿಲ್ಲೆಯು ರಾಷ್ಟ್ರದಲ್ಲಿ ಹೆಸರುವಾಸಿ. ಇದಕ್ಕೆ ಮತ್ತೊಂದು ಗರಿಮೆ ಎಂಬಂತೆ ಈ ಕೊಡಗು ವಿಶ್ವವಿದ್ಯಾಲಯ. ಈ ಉತ್ಸವದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಇಂತಹ ಸಾಂಸ್ಕೃತಿಕ ಸ್ಪರ್ಧಾ ಅವಕಾಶಗಳ ಮೂಲಕ ತಮ್ಮ ಪ್ರತಿಭೆ ಪ್ರದರ್ಶನ ಮಾಡಬೇಕು. ನಿಮ್ಮ ಆಲೋಚನೆಗಳು ನಿಮ್ಮನ್ನು ನಿರ್ಮಾಣ ಮಾಡುತ್ತವೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

     

    ಈ ಸಂದರ್ಭದಲ್ಲಿ ಗೌರವಾನ್ವಿತ ಅತಿಥಿಯಾಗಿ ಆಗಮಿಸಿದ್ದ ಗ್ಯಾರಂಟಿ ಅನುಷ್ಠಾನ ಸಮಿತಿಯ ಕುಶಾಲನಗರ ತಾಲೂಕು ಅಧ್ಯಕ್ಷ ವಿ. ಪಿ. ಶಶಿಧರ್ ಮಾತನಾಡಿ, ಕೊಡಗು ಜಿಲ್ಲೆಗೆ ವಿಶ್ವವಿದ್ಯಾಲಯದ ಅಗತ್ಯತೆ ಅರಿತು ಆರಂಭದ ಅತ್ಯಂತ ಸಂಕಷ್ಟ ಸಂಘರ್ಷ ಸಮಯದಲ್ಲಿ ಕೊಡಗು ವಿಶ್ವವಿದ್ಯಾಲಯ ಉಳಿಸಲು ಹಗಲಿರುಳು ಶ್ರಮ ವಹಿಸುತ್ತಿರುವ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು . ಯುವ ವೈಭವ ಸಾಂಸ್ಕೃತಿಕ ಉತ್ಸವ ಹಮ್ಮಿಕೊಂಡಿರುವ ವಿಶ್ವವಿದ್ಯಾಲಯದ ಈ ಪ್ರಥಮ ಪ್ರಯೋಗವನ್ನು ಸದೃಢಗೊಳಿಸುವ ಪ್ರಯತ್ನ ಮಾಡಿದ ಕಾರಣಿಕತ್ಸರಿಗೆ ಅಭಿನಂದನೆ ತಿಳಿಸಿದರು.

     

    ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಟೇಶ್ ಗೌಡ, ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು ಮೌಲ್ಯಮಾಪನ ಡಾ.ಸುರೇಶ್ ಎಂ, ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ಪ್ರೊ.ಐ ಕೆ ಮಂಜುಳಾ, ಎನ್‌ಎಸ್‌ಎಸ್ ಸಂಯೋಜಕರು ಮತ್ತು ಐಕ್ಯೂಎಸಿ ನಿರ್ದೇಶಕರಾದ ಡಾ. ಗುಣಶ್ರೀ ಬಿ.ಎಸ್. ಗೌರವಾನ್ವಿತ ಉಪಸ್ಥಿತರಿದ್ದರು.

     

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ಮಾತನಾಡಿ, ಈ ವರ್ಷ ಆರಂಭ ಆಗಿರುವ ಯುವ ವೈಭವ ಇನ್ನೂ ಮುಂದೆ ಪ್ರತಿ ವರ್ಷ ನಡೆಯುತ್ತದೆ. ವಿವಿಯ ಎಲ್ಲ 25 ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳು ಈ ವೇದಿಕೆಯ ಸದುಪಯೋಗಪಡಿಸಿಕೊಳ್ಳಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದರು.

     

    ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಘಟಕ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳ 500ಕ್ಕೂ ಅಧಿಕ ವಿದ್ಯಾರ್ಥಿಗಳು 17 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕೊಡಗು ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಮತ್ತು ಅಂತರ್ ಕಾಲೇಜು ಯುವ ವೈಭವ ಉತ್ಸವದ ಸಂಯೋಜಕ ಮಂಜುನಾಥ್ ಗೌಡ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ಜಮೀರ್ ಅಹಮದ್, ಕನ್ನಡ ವಿಭಾಗದ ವಿದ್ಯಾರ್ಥಿ ರಾಕೇಶ್ ಎನ್ ಪಿ ಮತ್ತು ಸೂಕ್ಷ್ಮಾಣು ಜೀವವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸನಿಗಾ ನಿರೂಪಿಸಿದರು. ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಲೋಕೇಶ್ ಭರಣಿ ವಂದಿಸಿದರು.

    Previous Articleದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಸಚಿವ ಎನ್.ಎಸ್. ಬೋಸರಾಜು
    Next Article ಕೊಡಗಿನ ಐ ಪಿ ಎಸ್ ಅಧಿಕಾರಿ ಜಿನೇವಾದ ಕೌನ್ಸಲೇಟ್ ಜನರಲ್ ಆಗಿ ಭಾರತ ಸರಕಾರದಿಂದ ಬಡ್ತಿ ನೀಡಿ ನಿಯೋಜನೆ

    Related Posts

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.