Close Menu
Kodagu News
    ಹೊಸ ಸುದ್ದಿ

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    • ಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
    ಅಂತರರಾಷ್ಟ್ರೀಯ

    ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

    Updated:July 10, 2026

    ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

    ಮಡಿಕೇರಿ, ಜು. 10: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದ ನಿವಾಸಿ ಜಯ ವೈ.ಎಂ. ಅವರಿಗೆ ಮಡಿಕೇರಿಯ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

    ಪ್ರಕರಣದ ವಿವರಗಳ ಪ್ರಕಾರ, ಆರೋಪಿ 2021ರ ಜುಲೈನಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪರಿಚಯಿಸಿಕೊಂಡು, ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಬಳಿಕ 2021ರ ಆಗಸ್ಟ್‌ನಿಂದ ನವೆಂಬರ್‌ವರೆಗೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಬಾಲಕಿ ಗರ್ಭಿಣಿಯಾಗಲು ಕಾರಣನಾಗಿದ್ದಾನೆ ಎಂದು ಆರೋಪಿಸಲಾಗಿದೆ.

    ಈ ಕುರಿತು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮಡಿಕೇರಿಯ ಕೊಡಗು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕರಾದ ವೆಂಕಟೇಶ್ ಪಿ.ವಿ. ಹಾಗೂ ಮುದ್ದು ಮಾದೇವ ಎಂ.ಇ. ನಡೆಸಿ, ಭಾರತೀಯ ದಂಡ ಸಂಹಿತೆ ಹಾಗೂ ಪೋಕ್ಸೊ (POCSO) ಕಾಯ್ದೆಯಡಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುರೇಂದ್ರ ಜಿ. ಅವರು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ₹20,000 ದಂಡ ವಿಧಿಸಿದ್ದಾರೆ. ಜೊತೆಗೆ, ನೊಂದ ಬಾಲಕಿಗೆ ₹4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

    ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಬಿ.ಎಸ್. ರುದ್ರ ಪ್ರಸನ್ನ ವಾದ ಮಂಡಿಸಿದ್ದರು.

    Previous Articleಕೈಕೇರಿಯಲ್ಲಿ ನೂತನ ಸಭಾಭವನ ಹಾಗೂ ಅನ್ನಪೂರ್ಣ ಭವನ ಲೋಕಾರ್ಪಣೆ: ಎಂಎಲ್‌ಸಿ ಸುಜಾ ಕುಶಾಲಪ್ಪ ಭಾಗಿ
    Next Article ಉತ್ತರ ಕನ್ನಡ ವಿರುದ್ಧ ಕೊಡಗುಗೆ 6-1 ಭರ್ಜರಿ ಜಯ

    Related Posts

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.