ಕೇಬಲ್ ವೈರ್ ಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ಕುಶಾಲನಗರ ಸೋಮೇಶ್ವರ ರಸ್ತೆಯಲ್ಲಿ ಘಟನೆ
ಸೋಮೇಶ್ವರ ರಸ್ತೆಯಲ್ಲಿ ಇಂದು ಅಪರಿಚಿತ ವ್ಯಕ್ತಿಯೊಬ್ಬರು ಕಟ್ಟಡದ ಮೇಲಿನಿಂದ ಕೇಬಲ್ ವೈರ್ಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿ ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಕಟ್ಟಡದ ಮೇಲಿನಿಂದ ಕೆಳಗೆ ಬೀಳುವಾಗ ಕೇಬಲ್ ವೈರ್ನಲ್ಲಿ ಸಿಲುಕಿಕೊಂಡು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ.
ಈ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

