Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಉದ್ಯೋಗವಕಾಶ»ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ
    ಉದ್ಯೋಗವಕಾಶ

    ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ

    Updated:August 17, 2026

    ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ

    ಮಡಿಕೇರಿ: ಕೊಡಗು ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ನೀಡಲಾಗುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

    ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರು ಪುತ್ರಿ ಡಾ. ಅನುಶ್ರೀ ಅವರ ‘ಹ್ಯಾಪಿಟೀತ್ ಡೆಂಟಲ್ ಕ್ಲಿನಿಕ್’ ಹೆಸರಿನಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳನ್ನು ಒಳಗೊಂಡ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿಗೆ, ಶಕ್ತಿ ದಿನಪತ್ರಿಕೆಯಲ್ಲಿ ಪ್ರಕಟಗೊಂಡ ಉಪಸಂಪಾದಕ ಉಜ್ವಲ್ ರಂಜಿತ್ ಅವರ ‘ನೋವಿಂದ ನರಳುತ್ತಿರುವ ಗಜರಾಜ’ ಚಿತ್ರ ಆಯ್ಕೆಯಾಗಿದೆ.

    ಕೊಡಗು ಪತ್ರಕರ್ತರ ಸಂಘದಿಂದ ಮಳೆಗಾಲದ ಪ್ರಕೃತಿ ಸೌಂದರ್ಯವನ್ನು ಬಿಂಬಿಸುವ ಅತ್ಯುತ್ತಮ ವೀಡಿಯೋಗ್ರಫಿಗಾಗಿ ನೀಡಲಾಗುವ ಪ್ರಶಸ್ತಿಗೆ ಕೊಡಗು ಚಾನೆಲ್‌ನ ಕ್ಯಾಮೆರಾಮನ್ ಹನೀಫ್ ಅವರ ವೀಡಿಯೋ ಆಯ್ಕೆಯಾಗಿದೆ.

    3- ಗುಂಡುಕುಟ್ಟಿ ಎಸ್ಟೇಟ್ ಮಾಲೀಕ ಜಿ.ಎಂ..ಮಹೇಂದ್ರ ಅವರು ತಮ್ಮ ತಂದೆ ಜಿ.ಎಂ. ಮೋಹನ್ ಹೆಸರಿನಲ್ಲಿ ನೀಡುವ ದತ್ತಿನಿಧಿ ಪ್ರಶಸ್ತಿ ಕಾಫಿ ಉದ್ಯಮದ ಕುರಿತ ವರದಿಗೆ ವಿನೋದ್ ಮೂಡಗಡ್ಡೆ ಅವರ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡ ಕಾಫಿ ಬೆಳೆಯಿಂದ ಹಸನಾದ ಕೃಷಿಕ ವರದಿ ಪ್ರಶಸ್ತಿ ಪಡೆದುಕೊಂಡಿದೆ.

    ದೇವನಹಳ್ಳಿಯ ಸಮಾಜಸೇವಕ ಮಂಡಿಬೆಲೆ ರಾಜಣ್ಣ ಅವರು ತಮ್ಮ ಪೋಷಕರಾದ ಮಂಡಿಬೆಲೆ ದ್ಯಾವಮ್ಮ–ಶ್ಯಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಆದಿವಾಸಿಗಳ ಬದುಕಿಗೆ ಸಂಬಂಧಿಸಿದ ಮಾನವೀಯ ವರದಿ ಪ್ರಶಸ್ತಿಗೆ, ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಎನ್ ಕೆ ಸುಕುಮಾರ್ ಅವರ ‘ಪ್ಲಾಸ್ಟಿಕ್ ಟೆಂಟ್‌ನಲ್ಲಿ ವಾಸಿಸುತ್ತಿದ್ದ ವೃದ್ಧ ದಂಪತಿಗಳಿಗೆ ನೂತನ ಮನೆ’ ವರದಿ ಆಯ್ಕೆಯಾಗಿದೆ.

    ಆಗಸ್ಟ್ 19ರಂದು ಬುಧವಾರ ಬೆಳಗ್ಗೆ 10.30 ಗಂಟೆಗೆ, ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕೊಡಗು ಪತ್ರಕರ್ತರ ಸಂಘ ಹಾಗೂ ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆಯುವ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ.

    Previous Articleಅನೆ ದಾಳಿ: ಕಾರ್ಮಿಕ ಸಾವು, ಮತ್ತೊಬ್ಬ ಗಂಬೀರ.
    Next Article ಜಾನಪದ ಯುವ ಬ್ರಿಗೇಡ್ ಕೊಡಗು ಜಿಲ್ಲಾ ಸಂಚಾಲಕರಾಗಿ ಸುಜಯ್ ಟಿ.ಪಿ. ನೇಮಕ

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.