ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
ಮಡಿಕೇರಿ: ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ ಹಾಗೂ ಜಿಲ್ಲಾ ಅಕ್ಕಪಡೆ ಸಿಬ್ಬಂದಿಗಳ ವತಿಯಿಂದ ಮೂರ್ನಾಡಿನ ಜ್ಞಾನಜ್ಯೋತಿ ಪ್ರೌಢಶಾಲೆ ಮತ್ತು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹದ ದುಷ್ಪರಿಣಾಮಗಳು, ಮಾದಕ ವಸ್ತುಗಳ ಸೇವನೆಯಿಂದಾಗುವ ಅಪಾಯಗಳು ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಮಾಹಿತಿ ನೀಡಲಾಯಿತು.
ವಿದ್ಯಾರ್ಥಿಗಳು ತಮ್ಮ ಹಕ್ಕುಗಳು ಮತ್ತು ಕಾನೂನುಗಳ ಬಗ್ಗೆ ಅರಿವು ಹೊಂದುವುದರ ಜೊತೆಗೆ, ಯಾವುದೇ ರೀತಿಯ ಕಿರುಕುಳ ಅಥವಾ ಅಪರಾಧ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸಿಬ್ಬಂದಿಗಳು ಸಲಹೆ ನೀಡಿದರು.
ಮಾದಕ ವಸ್ತುಗಳಿಂದ ಯುವಜನತೆ ದೂರವಿರಬೇಕು ಹಾಗೂ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಸುರಕ್ಷಿತ ಜೀವನ ನಡೆಸಬೇಕು ಎಂದು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು.

