ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ: ಕೇಂದ್ರಗಳಿಗೆ ಎಸ್‌ಪಿ ಬಿಂದು ಮಣಿ ಭೇಟಿ
ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಭಾನುವಾರ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಯಿತು.
ಪರೀಕ್ಷೆಯು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿದ್ದ ಕಾನೂನು ಸುವ್ಯವಸ್ಥೆ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತಿನ ಕುರಿತು ಪರಿಶೀಲಿಸಿದ ಅವರು, ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಶಾಂತಿಯುತ ವಾತಾವರಣದಲ್ಲಿ ಲಿಖಿತ ಪರೀಕ್ಷೆ ನಡೆಯುವಂತೆ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತ್ತು.

