ನೇತ್ರದಾನದಿಂದ ಇಬ್ಬರ ಬದುಕಿಗೆ ಬೆಳಕು: ಮಡಿಕೇರಿಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಸಹಯೋಗದಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ ಅರ್ಥಪೂರ್ಣವಾಗಿ ನಡೆಯಿತು.
ನೇತ್ರದಾನದ ಮಹತ್ವ ಕುರಿತು ಮಾತನಾಡಿದ ವೈದ್ಯರು, ಒಬ್ಬ ವ್ಯಕ್ತಿಯ ನೇತ್ರದಾನದಿಂದ ಇಬ್ಬರು ಕಾರ್ನಿಯ ಅಂಧತ್ವದಿಂದ ಬಳಲುತ್ತಿರುವವರಿಗೆ ದೃಷ್ಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿಸಿದರು. ಪ್ರತಿಯೊಬ್ಬರೂ ನೇತ್ರದಾನದ ಪ್ರತಿಜ್ಞೆ ಕೈಗೊಂಡು ಕುಟುಂಬದಲ್ಲೂ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್ ಸೇರಿದಂತೆ ವೈದ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

