Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    • ಸಾಂಸ್ಕೃತಿಕ ಹಕ್ಕಿಗೆ ಬೆಂಬಲ, ವಿಭಜನೆಗೆ ವಿರೋಧ: ಕೊಡಗನ ಹರ್ಷ
    • ನೇತ್ರದಾನದಿಂದ ಇಬ್ಬರ ಬದುಕಿಗೆ ಬೆಳಕು: ಮಡಿಕೇರಿಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    ಅಡುಗೆ ಮನೆ

    ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌

    Updated:September 9, 2026

    ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌ ಗೆ ಮನವಿ

    ಲಂಡನ್: ಕೊಡಗಿನ ಕೊನೆಯ ರಾಜ ಚಿಕ್ಕವೀರ ರಾಜೇಂದ್ರ ತಮ್ಮ ಬದುಕಿನ ಕೊನೆಯ ಏಳು ವರ್ಷಗಳನ್ನು ಕಳೆದ ಲಂಡನ್‌ನ 20, ಕ್ಲಿಫ್ಟನ್ ವಿಲ್ಲಾಸ್ ಮನೆ ಇಂದಿಗೂ ತನ್ನ ಇತಿಹಾಸವನ್ನು ಉಳಿಸಿಕೊಂಡಿದೆ.

    1852ರಿಂದ 1859ರವರೆಗೆ ಚಿಕ್ಕವೀರ ರಾಜೇಂದ್ರ ಅವರು ತಮ್ಮ ಮಗಳು ಗೌರಮ್ಮ ಹಾಗೂ ಪತ್ನಿಯೊಂದಿಗೆ ಇದೇ ಮನೆಯಲ್ಲಿ ವಾಸಿಸಿದ್ದರು. ಇಂದು ಈ ಮನೆ ಲಂಡನ್‌ನ ಪ್ರಮುಖ ಹಾಗೂ ಶ್ರೀಮಂತ ಪ್ರದೇಶಗಳಲ್ಲೊಂದಾಗಿದ್ದು, ಬೇರೆ ಕುಟುಂಬವೊಂದು ಇಲ್ಲಿ ವಾಸಿಸುತ್ತಿದೆ.

    1834ರಲ್ಲಿ ಬ್ರಿಟಿಷರು ಕೊಡಗನ್ನು ವಶಪಡಿಸಿಕೊಂಡ ಬಳಿಕ ಚಿಕ್ಕವೀರ ರಾಜೇಂದ್ರ ಅವರನ್ನು ಕೆಲ ವರ್ಷ ವೆಲ್ಲೂರು ಕೋಟೆ ಹಾಗೂ ಬನಾರಸ್‌ನಲ್ಲಿ ಇರಿಸಲಾಗಿತ್ತು. ಕೊಡಗನ್ನು ಮರಳಿ ಪಡೆಯುವ ಪ್ರಯತ್ನದ ಭಾಗವಾಗಿ ಅವರು 1852ರಲ್ಲಿ ಇಂಗ್ಲೆಂಡ್‌ಗೆ ತೆರಳಿ ವಿಕ್ಟೋರಿಯಾ ರಾಣಿಯನ್ನು ಭೇಟಿಯಾಗಲು ಪ್ರಯತ್ನಿಸಿದ್ದರು. ಬ್ರಿಟಿಷ್ ಸಂಸತ್ ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿಯಾಗಿ ಕೊಡಗನ್ನು ಮರಳಿ ಪಡೆಯಲು ಹಲವು ಪ್ರಯತ್ನಗಳನ್ನು ನಡೆಸಿದರೂ ಅದು ಯಶಸ್ವಿಯಾಗಲಿಲ್ಲ.

    ಲಂಡನ್‌ಗೆ ಆಗಮಿಸಿದ ಸಂದರ್ಭದಲ್ಲಿ ಕ್ಲಿಫ್ಟನ್ ವಿಲ್ಲಾಸ್ ನಿರ್ಮಾಣ ಹಂತದಲ್ಲಿತ್ತು. ಇದೇ ಮನೆಯಲ್ಲಿ ಏಳು ವರ್ಷ ವಾಸಿಸಿದ್ದ ರಾಜ ಇಂಗ್ಲಿಷ್ ಕಲಿತಿದ್ದು, ತಮ್ಮ ರಾಜ್ಯವನ್ನು ಮರಳಿ ಪಡೆಯಲು ನಿರಂತರ ಪ್ರಯತ್ನ ನಡೆಸಿದ್ದರು. ಆದರೆ ಪ್ರಯತ್ನಗಳು ವಿಫಲವಾದ ಬಳಿಕ ಖಿನ್ನತೆ ಹಾಗೂ ಅತಿಯಾದ ಮದ್ಯಪಾನಕ್ಕೆ ಒಳಗಾದ ಅವರು 1859ರ ಸೆಪ್ಟೆಂಬರ್ 24ರಂದು, 55ನೇ ವಯಸ್ಸಿನಲ್ಲಿ ಇದೇ ಮನೆಯಲ್ಲಿ ನಿಧನರಾದರು.

    ನಂತರ ಅವರನ್ನು ಲಂಡನ್‌ನ ಕೆನ್ಸಲ್ ಗ್ರೀನ್ ಸ್ಮಶಾನದಲ್ಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಲಾಯಿತು ಎನ್ನಲಾಗಿದೆ. 1861ರಲ್ಲಿ ಅವರ ದೇಹದ ಅವಶೇಷಗಳನ್ನು ಕೆನ್ಸಲ್ ಗ್ರೀನ್ ಸ್ಮಶಾನದಿಂದ ಬನಾರಸ್‌ಗೆ ಸ್ಥಳಾಂತರಿಸಿ ಜಂಗಮವಾಡಿ ಮಠದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು ಎಂಬ ಮಾಹಿತಿಯನ್ನೂ ಇತಿಹಾಸಕಾರ ಸಿ.ಪಿ. ಬೆಳ್ಳಿಯಪ್ಪ ಅವರು ಉಲ್ಲೇಖಿಸಿದ್ದಾರೆ.

    ಇಂಗ್ಲೆಂಡ್‌ಗೆ ಕಾಲಿಟ್ಟ ದಕ್ಷಿಣ ಏಷ್ಯಾದ ಮೊದಲ ರಾಜರಲ್ಲಿ ಚಿಕ್ಕವೀರ ರಾಜೇಂದ್ರ ಪ್ರಮುಖರಾಗಿದ್ದು, ಲಂಡನ್‌ನಲ್ಲಿನ ಅವರ ವಾಸಸ್ಥಳದ ಇತಿಹಾಸವನ್ನು ಉಳಿಸುವ ನಿಟ್ಟಿನಲ್ಲಿ ಇದೀಗ ಮಹತ್ವದ ಪ್ರಯತ್ನ ನಡೆದಿದೆ.

    ಲಂಡನ್‌ನ ಐತಿಹಾಸಿಕ ಕಟ್ಟಡಗಳಿಗೆ ಬ್ಲೂ ಪ್ಲೇಕ್ ಅಳವಡಿಸುವ English Heritage ಸಂಸ್ಥೆಗೆ, “The Last King/Rajah of Coorg lived here (1852–1859)” ಎಂಬ ಫಲಕವನ್ನು 20, ಕ್ಲಿಫ್ಟನ್ ವಿಲ್ಲಾಸ್ ಮನೆಗೆ ಅಳವಡಿಸುವಂತೆ ಮನವಿ ಮಾಡಲಾಗಿದೆ.

    ಕೊಡಗಿನ ಇತಿಹಾಸದ ಪ್ರಮುಖ ಅಧ್ಯಾಯವೊಂದಕ್ಕೆ ಸಾಕ್ಷಿಯಾಗಿರುವ ಈ ಮನೆ, ಇಂದಿಗೂ ಲಂಡನ್‌ನಲ್ಲಿ ಚಿಕ್ಕವೀರ ರಾಜೇಂದ್ರ ಅವರ ನೆನಪನ್ನು ಜೀವಂತವಾಗಿರಿಸಿಕೊಂಡಿದೆ.

    Previous Articleಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Next Article ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?

    Related Posts

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026

    ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.