Close Menu
Kodagu News
    ಹೊಸ ಸುದ್ದಿ

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    • ಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ
    • ಕೊಡಗಿನಲ್ಲಿ ಪಕ್ಷಾಂತರ ಪರ್ವ: ಬಿಜೆಪಿಗೆ ನಾಯಕತ್ವದ ಸವಾಲು, ಕಾಂಗ್ರೆಸ್‌ಗೆ ರಾಜಕೀಯ ಅವಕಾಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    ಅಂತರರಾಷ್ಟ್ರೀಯ

    ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ

    ಕೊಡಗು ಜಿಲ್ಲೆಯಲ್ಲಿ ಅಕ್ರಮ ರೇವ್ ಪಾರ್ಟಿ ಹಾಗೂ ಮಾದಕ ವಸ್ತುಗಳ ಬಳಕೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

    ಜಿಲ್ಲೆಯ ಪ್ರವಾಸಿ ತಾಣಗಳು, ಜಲಪಾತಗಳು ಹಾಗೂ ಪ್ರಕೃತಿ ಸೌಂದರ್ಯದ ಪ್ರದೇಶಗಳನ್ನು ಬಳಸಿಕೊಂಡು ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಪ್ರವಾಸಿಗರನ್ನು ಸೆಳೆದು ‘ವಾರಾಂತ್ಯ ಪಾರ್ಟಿ’ ಹೆಸರಿನಲ್ಲಿ ರೇವ್ ಪಾರ್ಟಿ ಆಯೋಜಿಸುವ ಬಗ್ಗೆ ಎಚ್ಚರಿಕೆ ವಹಿಸುವಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಸೂಚಿಸಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ‘ದಿ ಕೂರ್ಗ್ ರೇವ್’ ಎಂಬ ಕಾರ್ಯಕ್ರಮದ ಪ್ರಚಾರವನ್ನೂ ಪೊಲೀಸ್ ಇಲಾಖೆ ಗಮನಕ್ಕೆ ತೆಗೆದುಕೊಂಡಿರುವುದು ಪೋಸ್ಟರ್‌ನಲ್ಲಿ ತಿಳಿಸಲಾಗಿದೆ. ಸೆಪ್ಟೆಂಬರ್ 25ರಿಂದ 27ರವರೆಗೆ ಕಾರ್ಯಕ್ರಮ ನಡೆಯಲಿದೆ ಎಂಬ ಪ್ರಚಾರ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

    ಅಕ್ರಮ ಪಾರ್ಟಿ, ಮಾದಕ ವಸ್ತುಗಳ ಜಾಲದ ಬಗ್ಗೆ ಮಾಹಿತಿ ದೊರೆತರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಮಾದಕ ವಸ್ತುಗಳ ಬಳಕೆ, ಮಾರಾಟ ಅಥವಾ ಇತರೆ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

    ಅಲ್ಲದೆ, ಮಾದಕ ವಸ್ತುಗಳ ಬಳಕೆ ಕಂಡುಬಂದಲ್ಲಿ ದೂರವಾಣಿ ಮೂಲಕ ಪೊಲೀಸರಿಗೆ ಮಾಹಿತಿ ನೀಡುವುದು, ಅಪರಿಚಿತ ವ್ಯಕ್ತಿಗಳ ಆಹ್ವಾನಕ್ಕೆ ಒಳಗಾಗದಿರುವುದು ಹಾಗೂ ಇಂತಹ ಕಾರ್ಯಕ್ರಮಗಳ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಾಗ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಸೂಚಿಸಿದೆ.

    ತುರ್ತು ಪರಿಸ್ಥಿತಿ ಅಥವಾ ಯಾವುದೇ ಅಕ್ರಮ ಚಟುವಟಿಕೆ ಕಂಡುಬಂದಲ್ಲಿ 112 ತುರ್ತು ಸಹಾಯವಾಣಿಗೆ ಕರೆ ಮಾಡುವಂತೆ ಸೂಚಿಸಲಾಗಿದೆ. ಕೊಡಗು ಪೊಲೀಸರು ಈ ಹಿಂದೆ ಕೂಡ ರೇವ್ ಪಾರ್ಟಿ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಹೋಂಸ್ಟೇ, ರೆಸಾರ್ಟ್ ಮತ್ತು ಹೋಟೆಲ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದರು.  

    ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಡಿಜೆ ಹಾಗೂ ಧ್ವನಿವರ್ಧಕ ಬಳಕೆಯ ಮೇಲೂ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ.  

    Previous Articleಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ
    Next Article ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ

    Related Posts

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.