ವಿರಾಜಪೇಟೆಯಲ್ಲಿ ಸ್ಮರಣೀಯ ಹೆಜ್ಜೆ: ಮಾತಂಡ ಮೊಣ್ಣಪ್ಪ ಹೆಸರಿನಲ್ಲಿ ರಸ್ತೆ
ವಿರಾಜಪೇಟೆ: ವಿರಾಜಪೇಟೆಯ ಕೊಡವ ಸಮಾಜದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಕೊಡವ ಸಮಾಜದ ರಸ್ತೆಗೆ ‘ದೇಶತಕ್ಕ ಮಾತಂಡ ಮೊಣ್ಣಪ್ಪ ರಸ್ತೆ’ ಎಂದು ನಾಮಕರಣ ಮಾಡಲಾಯಿತು.
ಈ ಸಂದರ್ಭದಲ್ಲಿ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ನಾಮಫಲಕವನ್ನು ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಸುಜಾ ಕುಶಾಲಪ್ಪ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ, ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಅಮ್ಮಣ್ಣಿಚಂಡ ರವಿ ಉತ್ತಪ್ಪ, ಕೋಡಿರ ವಿನೋದ್ ನಾಣಯ್ಯ, ಪ್ರಕಾಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ದೇಶತಕ್ಕ ಮಾತಂಡ ಮೊಣ್ಣಪ್ಪ ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡುವ ಮೂಲಕ ಅವರ ಸೇವೆ ಹಾಗೂ ಕೊಡುಗೆಯನ್ನು ಸ್ಮರಿಸುವ ಕಾರ್ಯ ನಡೆಯಿತು.

