ಸ್ಟೀಲ್ ರೋಪ್ ಬ್ಯಾರಿಕೇಡ್ಗೆ ಅಭಿಮನ್ಯುವಿನಿಂದ ಪ್ರಾಯೋಗಿಕ ಪರೀಕ್ಷೆ
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಿಸುವ ಉದ್ದೇಶದಿಂದ ನಿರ್ಮಿಸಿರುವ ನೂತನ ಸ್ಟೀಲ್ ರೋಪ್ ಬ್ಯಾರಿಕೇಡ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದುನೂರಿನಿಂದ ಬಸವರಾಜನಕಟ್ಟೆವರೆಗೆ 2.8 ಕಿ.ಮೀ. ವ್ಯಾಪ್ತಿಯಲ್ಲಿ ಸ್ಟೀಲ್ ರೋಪ್ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ಈ ಬ್ಯಾರಿಕೇಡ್ನ್ನು ಕಾಡಾನೆಗಳು ತಳ್ಳಿ ಬೀಳಿಸುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆ ಎದುರಾಗಿತ್ತು.
ಈ ಹಿನ್ನೆಲೆಯಲ್ಲಿ ಬ್ಯಾರಿಕೇಡ್ನ ಸಾಮರ್ಥ್ಯ ಹಾಗೂ ಬಲವನ್ನು ಪರಿಶೀಲಿಸಲು ಮತ್ತಿಗೋಡು ಆನೆ ಶಿಬಿರದ ಅಭಿಮನ್ಯು ಆನೆಯನ್ನು ಸ್ಥಳಕ್ಕೆ ಕರೆತರಲಾಯಿತು. ಅಭಿಮನ್ಯುವಿನಿಂದ ಸ್ಟೀಲ್ ರೋಪ್ ಬ್ಯಾರಿಕೇಡ್ನ್ನು ತಳ್ಳಿಸಿ, ಅದರ ದೃಢತೆ ಮತ್ತು ಪ್ರತಿರೋಧ ಸಾಮರ್ಥ್ಯವನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲಾಯಿತು.
ಕಾಡಾನೆಗಳ ಶಕ್ತಿ ಹಾಗೂ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ನಡೆಸಲಾದ ಈ ಪರೀಕ್ಷೆಯ ಮೂಲಕ, ಹೊಸ ಬ್ಯಾರಿಕೇಡ್ ಕಾಡಾನೆಗಳ ತಳ್ಳುವಿಕೆಯನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆಯೇ ಎಂಬುದನ್ನು ಪರಿಶೀಲಿಸಲಾಯಿತು.

