ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
ಸರ್ವಾನುಮತದಿಂದ ಆಯ್ಕೆಗೊಂಡ ಜಿ.ಪಂ. ಮಾಜಿ ಸದಸ್ಯರಿಗೆ ಅಧಿಕಾರ ಹಸ್ತಾಂತರ
ಭಾಗಮಂಡಲ: ಭಾಗಮಂಡಲ ಹಾಗೂ ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪ್ರಥ್ಯು ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಭಾಗಮಂಡಲ ದೇವಾಲಯದ ಆವರಣದಲ್ಲಿ ನಡೆದ ದೇವಾಲಯ ವ್ಯವಸ್ಥಾಪನಾ ಸಮಿತಿಯ ಸಭೆಯಲ್ಲಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ಬಾನಂಡ ಪ್ರಥ್ಯು ಅವರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಅವರು ನೂತನ ಅಧ್ಯಕ್ಷ ಬಾನಂಡ ಪ್ರಥ್ಯು ಅವರಿಗೆ ಅಧಿಕಾರ ಹಸ್ತಾಂತರಿಸಿದರು.

