ಮಡಿಕೇರಿಯ ಜಿಲ್ಲಾ ಭವನದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೋಶಾಧಿಕಾರಿ ಮುದ್ದಯ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ತರಬೇತಿ ಆಯುಕ್ತ ರಂಜಿತ್ ಕೆ.ಯು., ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ರವಿ ಪಿ.ಎಂ. ಸೇರಿದಂತೆ ಕ್ರೀಡಾ ವಸತಿ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

