ಕೊಡಗು ಜಿಲ್ಲೆಯಲ್ಲಿ ಆನೆ-ಹುಲಿ ದಾಳಿ, ರಸ್ತೆ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಸಾರ್ವಜನಿಕರನ್ನು ಶಾಸಕರ ಹಿಂಬಾಲಕರು ವೈಯಕ್ತಿಕವಾಗಿ ನಿಂದಿಸಿ, ಅವಹೇಳನ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅಮ್ಮುಣಿಚಂಡ ರಂಜಿ ಪೂಣಚ್ಚ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಸಮಸ್ಯೆಗಳನ್ನು ಪ್ರಶ್ನಿಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವವರನ್ನು ಏಕವಚನದಲ್ಲಿ ನಿಂದಿಸುವುದು, ವೈಯಕ್ತಿಕವಾಗಿ ಹೀಯಾಳಿಸುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಅವರು ಹೇಳಿದ್ದಾರೆ.
ಹಿಂಬಾಲಕರ ಇಂತಹ ವರ್ತನೆಯಿಂದ ಶಾಸಕರ ವರ್ಚಸ್ಸು ಹೆಚ್ಚುವ ಬದಲು ಕುಂದುತ್ತಿದೆ. ಸಾರ್ವಜನಿಕರ ಪ್ರಶ್ನೆಗಳಿಗೆ ಶಾಸಕರು ಹಾಗೂ ಪಕ್ಷದ ಜವಾಬ್ದಾರಿಯುತ ಮುಖಂಡರು ಉತ್ತರಿಸಬೇಕೇ ಹೊರತು, ಅಧಿಕೃತ ಹುದ್ದೆಯಿಲ್ಲದವರು ಮನಬಂದಂತೆ ವರ್ತಿಸಬಾರದು ಎಂದು ಆಕ್ಷೇಪಿಸಿದ್ದಾರೆ.
ಪ್ರಶ್ನಿಸುವವರ ಬಾಯಿ ಮುಚ್ಚಿಸುವುದರಿಂದ ಸಮಸ್ಯೆಗಳು ಬಗೆಹರಿಯುವುದಿಲ್ಲ. ಜನರ ಸಮಸ್ಯೆಗಳಿಗೆ ಉತ್ತರ ನೀಡುವ ಸಂಸ್ಕೃತಿ ರಾಜಕೀಯದಲ್ಲಿ ಬೆಳೆಯಬೇಕು ಎಂದು ರಂಜಿ ಪೂಣಚ್ಚ ಆಗ್ರಹಿಸಿದ್ದಾ

