ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಉದ್ಘಾಟನೆ – ಗಣ್ಯರ ಉಪಸ್ಥಿತಿ
ಮಡಿಕೇರಿ: ಶ್ರೀ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘ, ಕೊಡಗು ಚಾನಲ್ ಬಳಗ ಹಾಗೂ ರೈತ ಹೋರಾಟ ಸಮಿತಿ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ಸಮಾಜ ಸೇವಕ ಹಾಗೂ ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ ಅವರ ಜೀವನ, ಸಮಾಜ ಸೇವೆ ಮತ್ತು ಸಾಧನೆಗಳನ್ನು ಪರಿಚಯಿಸುವ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಪುಸ್ತಕ ಲೋಕಾರ್ಪಣೆ ಹಾಗೂ ಬೃಹತ್ ರೈತ ಸಮಾವೇಶವನ್ನು ನವೆಂಬರ್ 22ರ ಭಾನುವಾರ ಸೋಮವಾರಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಭಾರತ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಕೇಂದ್ರ ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದಾರೆ.
ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರು ಹಾಗೂ ಸಮಾಜ ಸೇವಕರಾದ ಹರಪಳ್ಳಿ ರವೀಂದ್ರ ಅವರು ಗೌರವ ಉಪಸ್ಥಿತಿ ವಹಿಸಲಿದ್ದು, ರೈತ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರು ಹಾಗೂ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ಪ್ರಮುಖರಾದ ಸುರೇಶ್ ಚಕ್ರವರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಸಚಿವ ಸಾ.ರಾ. ಮಹೇಶ್, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಕೊಡಗು ಚಾನಲ್ ಪ್ರಧಾನ ಸಂಪಾದಕ ರವಿಕುಮಾರ್ ಜಿ.ವಿ., ಕೃತಿಯ ಸಂಪಾದಕ ಟಿ.ಜೆ. ಪ್ರವೀಣ್ ಕುಮಾರ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ, ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದೀಪಕ್ ಬಿ.ಜೆ., ಯುವ ಉದ್ಯಮಿ ಹಾಗೂ ಸಮಾಜ ಸೇವಕ ಪ್ರಸನ್ನ ಎಡಿಕೇರಿ, ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷ ಮನು ಸೋಮಯ್ಯ, ಉಪಾಧ್ಯಕ್ಷ ಹೂವಯ್ಯ ಮಾಸ್ಟರ್, ತಾಲೂಕು ಅಧ್ಯಕ್ಷ ಕೆ.ಎಂ. ದಿನೇಶ್ ಹಾಗೂ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ಅಧ್ಯಕ್ಷ ನಾಗರಾಜ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಸಮಾಜ ಸೇವೆ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಹರಪಳ್ಳಿ ರವೀಂದ್ರ ಅವರ ಕುರಿತ ಪುಸ್ತಕದ ಲೋಕಾರ್ಪಣೆಯೊಂದಿಗೆ ರೈತರ ಸಮಸ್ಯೆಗಳು, ಹಕ್ಕುಗಳು ಹಾಗೂ ರೈತ ಹೋರಾಟದ ವಿಚಾರಗಳಿಗೆ ಒತ್ತು ನೀಡುವ ಉದ್ದೇಶದಿಂದ ಬೃಹತ್ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ರೈತರು, ಅಭಿಮಾನಿಗಳು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಮಾಜ ಸೇವಕ ಹರಪಳ್ಳಿ ರವೀಂದ್ರ ಅವರಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ರೈತ ಹೋರಾಟಕ್ಕೆ ಕೈಜೋಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಥಳ: ಜೂನಿಯರ್ ಕಾಲೇಜು ಮೈದಾನ, ಸೋಮವಾರಪೇಟೆ
ದಿನಾಂಕ: 22-11-2026, ಭಾನುವಾರ

