Close Menu
Kodagu News
    ಹೊಸ ಸುದ್ದಿ

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ

    November 21, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    • ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
    • ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    • ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ
    • *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
    • ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ
    • ಬೆಳ್ಳಂಬೆಳಗ್ಗೆ ಮಡಿಕೇರಿ ಸರ್ವೆ ಇಲಾಖೆಗೆ ಲೋಕಾಯುಕ್ತ ಶಾಕ್ – ಕಡತಗಳ ಪರಿಶೀಲನೆ
    • ನವೆಂಬರ್ 22ರಂದು ಸೋಮವಾರಪೇಟೆಯಲ್ಲಿ ಹರಪಳ್ಳಿ ರವೀಂದ್ರ ಅವರ ಕುರಿತ ಪುಸ್ತಕ ಲೋಕಾರ್ಪಣೆ ಹಾಗೂ ಬೃಹತ್ ರೈತ ಸಮಾವೇಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    ಅಂತರರಾಷ್ಟ್ರೀಯ

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದೆ: ಗಣ್ಯರ ಅಭಿಮತ

    ಕನ್ನಡ ಭಾಷೆ ನಾಡಿನ ಎಲ್ಲರ ಅಸ್ಮಿತೆ; ಗಣ್ಯರ ಅಭಿಮತ

    ಮಡಿಕೇರಿ: ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ. ಅದು ನಮ್ಮ ನಾಡಿನ ಇತಿಹಾಸ, ಸಂಸ್ಕೃತಿ ಮತ್ತು ಅಸ್ಮಿತೆಯ ಪ್ರತೀಕ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಕರೆ ನೀಡಿದರು.

    ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮೂರ್ನಾಡು ಹೋಬಳಿ ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮೂರ್ನಾಡು ಹೋಬಳಿ ಘಟಕದ 3ನೇ ವರ್ಷದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಕನ್ನಡ ಹಬ್ಬ’ ಉದ್ಘಾಟಿಸಿ ಅವರು ಮಾತನಾಡಿದರು.

    ಕನ್ನಡಾಭಿಮಾನ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಬಾರದು. ವರ್ಷದ ಪ್ರತಿದಿನವೂ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಆದ್ಯತೆ ನೀಡಬೇಕು. ಮಕ್ಕಳಲ್ಲಿ ಕನ್ನಡದ ಅಭಿಮಾನ ಬೆಳೆಸುವುದರೊಂದಿಗೆ ಕನ್ನಡ ಸಾಹಿತಿಗಳು ಹಾಗೂ ಸಾಹಿತ್ಯದ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಕನ್ನಡ ಎಲ್ಲರ ಹೃದಯದ ಭಾಷೆಯಾಗಿದ್ದು, ಭಾಷೆಯ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಕನ್ನಡ ಪುಸ್ತಕಗಳನ್ನು ಓದುವ ಮತ್ತು ಸಾಹಿತಿಗಳನ್ನು ಪ್ರೋತ್ಸಾಹಿಸುವ ಮೂಲಕ ಭಾಷೆಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದರು.

    ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಮಾಜ ಸೇವಕ ಅವರೆಮಾದಂಡ ಶರತ್ ಪೂಣಚ್ಚ, ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ ಪ್ರತಿಯೊಂದು ಮನೆಯಿಂದಲೇ ಆರಂಭವಾಗಬೇಕು. ಮನೆಗಳಲ್ಲಿ ಕನ್ನಡ ಮಾತನಾಡುವ ಮೂಲಕ ದೈನಂದಿನ ವ್ಯವಹಾರದಲ್ಲೂ ಕನ್ನಡಕ್ಕೆ ಆದ್ಯತೆ ನೀಡಿದಾಗ ಮಾತ್ರ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದರು.

    ಇಂದಿನ ಜಾಗತಿಕ ರಾಜಕೀಯ ಮತ್ತು ಯುದ್ಧದ ಆತಂಕದ ಪರಿಸ್ಥಿತಿಯಲ್ಲಿ ಇಂಧನ ಸ್ವಾವಲಂಬನೆಗೂ ಆದ್ಯತೆ ನೀಡಬೇಕಿದೆ. ಪ್ರತಿಯೊಂದು ಗ್ರಾಮ ಹಾಗೂ ತಾಲೂಕುಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸಬೇಕು. ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಬಳಸಿ ಜೈವಿಕ ಅನಿಲ ತಯಾರಿಸುವ ಮೂಲಕ ಅಡುಗೆ ಅನಿಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬಹುದು ಎಂದು ಸಲಹೆ ನೀಡಿದರು. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಉಳಿವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತೆ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಸಮಾಜ ಸೇವಕ ಹರಪಳ್ಳಿ ರವೀಂದ್ರ, ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ ಸೇರಿದಂತೆ ಹಲವು ಗಣ್ಯರು ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ವಹಿಸಿದ್ದರು. ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ತಾಲೂಕು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 26 ಸಾಧಕರು ಹಾಗೂ ಗಣ್ಯರನ್ನು ಸನ್ಮಾನಿಸಲಾಯಿತು. ‘ಕನ್ನಡ ಸಿರಿ’ ಸ್ಮರಣ ಸಂಚಿಕೆಯ ಮುಖಪುಟ ಅನಾವರಣಗೊಳಿಸಲಾಯಿತು. ಸಾಹಿತಿ ಕಿಗ್ಗಲು ಗಿರೀಶ್ ಅವರ ‘ನಾಪತ್ತೆಯಾದ ನಿವ್ಯಾವತಿ’ ಪುಸ್ತಕ ಬಿಡುಗಡೆ ಮಾಡಲಾಯಿತು.

     

    Previous Articleರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    Related Posts

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ

    November 21, 2026

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ

    November 21, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ

    November 21, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.