ಮಡಿಕೇರಿ ನಗರದ ಜಿಟಿ ವೃತ್ತದಲ್ಲಿ ಪ್ರತಿಭಟನೆ, ಮೆರವಣಿಗೆಗೆ ಜಿಲ್ಲಾಧಿಕಾರಿ ನಿರ್ಬಂಧ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ.
ಮಡಿಕೇರಿ, ನ.24: ಮಡಿಕೇರಿ ನಗರದ ಜಿಟಿ ವೃತ್ತದ ವ್ಯಾಪ್ತಿಯಲ್ಲಿ ಪ್ರತಿಭಟನೆ, ಧರಣಿ, ಮೆರವಣಿಗೆ ಹಾಗೂ ಮಾನವ ಸರಪಳಿ ನಡೆಸುವುದಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸೋಮಶೇಖರ್ ಎಸ್.ಜೆ. ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 31(1), ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 115, ಕರ್ನಾಟಕ ವಾಹನಗಳ ನಿಯಮಗಳು 1989ರ ನಿಯಮ 221(5) ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರದಿಸಿದ್ದಾರೆ.
ನಗರದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 31(1), ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 115, ಕರ್ನಾಟಕ ವಾಹನಗಳ ನಿಯಮಗಳು 1989ರ ನಿಯಮ 221(5) ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಹೆಚ್ಚುವರಿ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶದ ಪ್ರತಿಯನ್ನು ರವಾನಿಸಲಾಗಿದೆ.
ಜಿಲ್ಲಾಧಿಕಾರಿ ಸೋಮಶೇಖರ್ ಅವರು ನ.24ರಂದು ಡಿಜಿಟಲ್ ಸಹಿಯೊಂದಿಗೆ ಈ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲಾಧಿಕಾರಿಗಳ ಅಧಿಕೃತ ಆದೇಶದ ಪ್ರಕಾರ ಮಡಿಕೇರಿ ನಗರ ವ್ಯಾಪ್ತಿಗೆ ಈ ನಿರ್ಬಂಧ ಅನ್ವಯವಾಗಲಿದೆ. 

