Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಉದ್ಯೋಗವಕಾಶ»ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳ ಕೊಟ್ಟು ಬೆಳೆಸಿದ್ದರು: ದುನಿಯಾ ವಿಜಯ್
    ಉದ್ಯೋಗವಕಾಶ

    ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳ ಕೊಟ್ಟು ಬೆಳೆಸಿದ್ದರು: ದುನಿಯಾ ವಿಜಯ್

    Updated:February 11, 2025

    ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದ್ದು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು ‘ಸಿಲ್ಲಿ ಲಲ್ಲಿ’ ನೋಡುವಂತೆ ಮಾಡಿದರು. ಈಗ ಇಡೀ ಕುಟುಂಬ ನೋಡುವಂತಹ ಸಿನಿಮಾ ಮಾಡಿದ್ದಾರೆ.

    ಲೂಸ್ ಮಾದ ಖ್ಯಾತಿಯ ಯೋಗಿ ಅಭಿನಯದ, ವಿಜಯಪ್ರಸಾದ್‍ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಭಾನುವಾರ ನಗರದಲ್ಲಿ ನಡೆಯಿತು.

    ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ನಟ ಮತ್ತು ನಿರ್ದೇಶಕ ‘ದುನಿಯಾ’ ವಿಜಯ್‍ ಬಂದು ಚಿತ್ರದ ‘ಚುರುಮುರಿ’ ಎಂಬ ಹಾಡನ್ನು ಬಿಡುಗಡೆ ಮಾಡಿದರು.

    ಹಾಡಿಗೆ ಅರಸು ಆಂತಾರೆ ಸಾಹಿತ್ಯ ಬರೆದಿದ್ದು, ಗೀತ ಸಂಯೋಜನೆಯನ್ನು ಅನೂಪ್ ಸೀಲಿನ್ ಅವರು ನಿರ್ವಹಿಸಿದ್ದಾರೆ. ಚಿನ್ಮಯಿ ಶ್ರೀಪಾದ ಅವರ ಕಂಠಸಿರಿಯಲ್ಲಿ ಹಾಡು ಮೂಡಿಬಂದಿದೆ.

    ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದುನಿಯಾ ವಿಜಯ್ ಅವರು, ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದ್ದು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು ‘ಸಿಲ್ಲಿ ಲಲ್ಲಿ’ ನೋಡುವಂತೆ ಮಾಡಿದರು. ಈಗ ಇಡೀ ಕುಟುಂಬ ನೋಡುವಂತಹ ಸಿನಿಮಾ ಮಾಡಿದ್ದಾರೆ. ಹೊಡಿ-ಬಡಿ ಸಿನಿಮಾಗಳ ಮಧ್ಯೆ ಒಳ್ಳೆಯ ಸಿನಿಮಾ ಬರುತ್ತಿದೆ ಎಂಬುದರ ಸೂಚನೆ ಇಲ್ಲಿದೆ. ಯೋಗಿಗೆ ಸಿನಿಮಾ ಮಾಡಿದ್ದಕ್ಕೆ ಧನ್ಯವಾದಗಳು. ಇದು ಇನ್ನೂ ಸಹ ಮುಂದುವರೆಯಲಿ. ಇನ್ನೊಂದು ಒಳ್ಳೆಯ ಕಥೆಯ ಮೂಲಕ ‘ಸಿದ್ಲಿಂಗು 3’ ಮಾಡಲಿ ಎಂಬುದು ನನ್ನಾಸೆ’ ಎಂದು ಹೇಳಿದರು.

    ಇದೇ ವೇಳೆ ನಾನು ಯೋಗಿಯ ದೊಡ್ಡ ಅಭಿಮಾನಿ ಎಂದ ವಿಜಯ್‍ ಕುಮಾರ್, ಯಾವುದೇ ಪಾತ್ರವಿದ್ದರೂ ನಾನು ಮಾಡಬಲ್ಲೆ ಎಂದು ಧೈರ್ಯವಾಗಿ ನಿಲ್ಲುತ್ತಾನೆ. ಅವನ ಸಾಮರ್ಥ್ಯ ಬೇರೆ ಇದೆ. ಅವನಿಗೆ ಒಳ್ಳೆಯ ಕಥೆಗಳು ಸಿಕ್ಕಿ ಅವನು ಇನ್ನೂ ಅದ್ಭುತ ನಟನಾಗಿ ಹೊರಹೊಮ್ಮಬೇಕು ಎಂಬುದು ನನ್ನಾಸೆ. ಅದಕ್ಕೆ ಇನ್ನೂ ಸಮಯ ಬರಬೇಕೇನೋ? ಬರದಿದ್ದರೆ ನಾನು ಅವನ ಜೊತೆಗೆ ನಿಲ್ಲುತ್ತೇನೆ. ಯಾವತ್ತೂ ಅವನ ಕೈಬಿಡುವುದಿಲ್ಲ. ಅವನನ್ನು ನಿಲ್ಲಿಸುತ್ತೇನೆ ಎಂದು ತಿಳಿಸಿದರು.

    Previous Articleಅರವಿಂದ ಶೆಟ್ಟಿ ಮತ್ತು ಪಲ್ಲವಿ ಶೆಟ್ಟಿ ದಂಪತಿಯರ ಸೇವಾರ್ಥ ಕಾಪು ಮಾರಿಯಮ್ಮಗೆ 1500 ಕೆಜಿ ತೂಕದ ದೊಡ್ಡ ಗಂಟೆ
    Next Article ರುಚಿಕರವಾದ ಸಿಹಿ ಗೆಣಸಿನ ಹೋಳಿಗೆ ಮಾಡುವ ವಿಧಾನ…

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.