Close Menu
Kodagu News
    ಹೊಸ ಸುದ್ದಿ

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
    • ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ
    • ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
    • ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
    • ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
    • ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಬಿಗ್ ನ್ಯೂಸ್»ಕೊಡವ ಮಕ್ಕಡ ಕೂಟಕ್ಕೆ ೧೨ನೇ ವರ್ಷದ ಸಂಭ್ರಮ : ೧೦೯ನೇ ಪುಸ್ತಕ ಬಿಡುಗಡೆ
    ಬಿಗ್ ನ್ಯೂಸ್

    ಕೊಡವ ಮಕ್ಕಡ ಕೂಟಕ್ಕೆ ೧೨ನೇ ವರ್ಷದ ಸಂಭ್ರಮ : ೧೦೯ನೇ ಪುಸ್ತಕ ಬಿಡುಗಡೆ

    Updated:February 19, 2025

    ಮಡಿಕೇರಿ: ಸಾಮಾಜಿಕ ಕಳಕಳಿಯೊಂದಿಗೆ ಸಾಹಿತ್ಯ ಕ್ಷೇತ್ರದ ಪ್ರಗತಿಗೆ ಅಪಾರ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ಸಂಘಟನೆ ೧೨ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ವಾರ್ಷಿಕೋತ್ಸವದ ಪ್ರಯುಕ್ತ ಇಂದು ಲೇಖಕಿ ಮುಕ್ಕಾಟಿರ ಮೌನಿ ನಾಣಯ್ಯ ಅವರು ರಚಿಸಿರುವ “ಆ ಒರ್ ಬೈಟ್…?” ಎಂಬ ಕೊಡವ ಮಕ್ಕಡ ಕೂಟದ ೧೦೯ನೇ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
    ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಬಯವಂಡ ಮಹಾಬಲ ಪೂವಯ್ಯ ಪುಸ್ತಕ ಬಿಡುಗಡೆ ಮಾಡಿದರು.
    ಸಾಹಿತಿ ಹಾಗೂ ಕೊಡವ ಮಕ್ಕಡ ಕೂಟದ ಸಲಹೆಗಾರರಾದ ಐಚಂಡ ರಶ್ಮಿ ಮೇದಪ್ಪ ಮಾತನಾಡಿ, ಭಾಷೆಯ ಬೆಳೆವಣಿಗೆಗೆ ಸಾಹಿತ್ಯದ ಅಗತ್ಯವಿದೆ, ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಯುವ ಪೀಳಿಗೆ ಮುಂದಾಗಬೇಕು ಎಂದು ಕರೆ ನೀಡಿದರು.
    ಸಾಹಿತ್ಯ ಕ್ಷೇತ್ರಕ್ಕೆ ಮಹಿಳಾ ಲೇಖಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ಕೊಡವ ಮಕ್ಕಡ ಕೂಟ ಕೊಡವ ಭಾಷೆ ಮಾತ್ರವಲ್ಲದೆ ಇತರ ಭಾಷೆಗಳ ಸಾಹಿತ್ಯ ಬೆಳವಣಿಗೆಗೂ ಸಹಕಾರ ನೀಡುತ್ತಿರುವುದು ಶ್ಲಾಘನೀಯವೆಂದರು.

    ಆ ಒರ್ ಬೈಟ್…? ಪುಸ್ತಕದ ಲೇಖಕಿ ಮುಕ್ಕಾಟಿರ ಮೌನಿ ನಾಣಯ್ಯ ಮಾತನಾಡಿ, ಬದುಕಿನಲ್ಲಿ ಗೆಳೆತನ ಮತ್ತು ಪ್ರೀತಿಗೆ ಇರುವ ಅಗಾಧವಾದ ಶಕ್ತಿಯನ್ನು ತೋರಿಸುವ ಸುಂದರ ಚಿತ್ರಣ “ಆ ಒರ್ ಬೈಟ್…?” ಕೊಡವ ಕಾದಂಬರಿಯಲ್ಲಿದೆ ಎಂದರು.
    ಪ್ರೀತಿ, ಸ್ನೇಹದ ಹೆಸರಿನಲ್ಲಿ ಮೋಸದ ಜಾಲಕ್ಕೆ ಸಿಲುಕಿ ನೊಂದು ಬೆಂದ ಯುವಪ್ರೇಮಿಗಳ ಕಥೆ ಇದರಲ್ಲಿದೆ. ಪವಿತ್ರ ಪ್ರೀತಿಗೆ ಯಾವತ್ತೂ ಸೋಲಿಲ್ಲ ಎನ್ನುವ ಅಂಶವನ್ನು ಚಿತ್ರಿಸಲಾಗಿದೆ. ಈ ಪುಸ್ತಕ ಸಿನಿಮಾ ಮಾದರಿಯಲ್ಲಿದ್ದು, ಕಥೆಯ ಮಧ್ಯದಲ್ಲಿ ಸಂದರ್ಭಕ್ಕೆ ಅನುಗುಣವಾಗಿ ಮೂರು ಹಾಡುಗಳನ್ನು ನೀಡಲಾಗಿದೆ ಎಂದು ಹೇಳಿದರು.

    ಇದೇ ಸಂದರ್ಭ ಕೊಡವ ಮಕ್ಕಡ ಕೂಟ ಹಾಗೂ ಪುಸ್ತಕ ಬಿಡುಗಡೆಗೆ ಸಹಕರಿಸಿದ ದಾನಿಗಳಿಗೆ ಧನ್ಯವಾದ ಸಲ್ಲಿಸಿದರು.
    ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಆ ಒರ್ ಬೈಟ್ ಪುಸ್ತಕವು ೧೨ನೇ ವರ್ಷಚಾರಣೆಯ ಪ್ರಯುಕ್ತ ಬಿಡುಗಡೆ ಮಾಡಲಾಗಿದ್ದು, ಇದು ಸಿನಿಮಾ ಮಾದರಿಯಲ್ಲಿದ್ದು, ಇದೊಂದು ವಿಶೇಷ ಪ್ರಯತ್ನವಾಗಿದೆ. ಮುಂದಿನ ದಿನಗಳಲ್ಲಿ ಚಲನಚಿತ್ರವಾಗಿ ತೆರೆಕಾಣುವಂತಾಗಲಿ ಎಂದು ಹಾರೈಸಿದರು.
    ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಕೊಡವ ಮಕ್ಕಡ ಕೂಟ ಕೇವಲ ಕೊಡವ ಪುಸ್ತಕ ಮಾತ್ರವಲ್ಲದೆ ಈವರೆಗೆ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕನ್ನಡ, ಇಂಗ್ಲೀಷ್, ಹಿಂದಿ ಭಾಷೆಯ ಕೃತಿಗಳನ್ನು ಬಿಡುಗಡೆ ಮಾಡಿದೆ. ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
    ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಚಿಯಕ್‌ಪೂವಂಡ ಸಚಿನ್ ಪೂವಯ್ಯ ಹಾಗೂ ಪೊನ್ನಚೆಟ್ಟಿರ ಪ್ರದೀಪ್ ಉಪಸ್ಥಿತರಿದ್ದರು.

    Previous Articleರುಚಿಕರವಾದ ಸಿಹಿ ಗೆಣಸಿನ ಹೋಳಿಗೆ ಮಾಡುವ ವಿಧಾನ…
    Next Article ನೆರೆ ಸಂತ್ರಸ್ತರಿಗೆ ಮೀಸಲಿಟ್ಟ ಜಾಗದಲ್ಲಿ ಕಟ್ಟಡ ನಿರ್ಮಿಸಿದರೆ ಕಾನೂನು ಹೋರಾಟ

    Related Posts

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.