Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಸಂತ್ರಸ್ತ ೨೫೨ ಕುಟುಂಬಗಳಿಗೆ ಪಾರದರ್ಶಕವಾಗಿ ನಡೆದ ‘ಮನೆ ಹಂಚಿಕೆ’
    Uncategorized

    ಸಂತ್ರಸ್ತ ೨೫೨ ಕುಟುಂಬಗಳಿಗೆ ಪಾರದರ್ಶಕವಾಗಿ ನಡೆದ ‘ಮನೆ ಹಂಚಿಕೆ’

    ಮಡಿಕೇರಿ : ೨೦೧೮-೧೯ನೇ ಸಾಲಿನಲ್ಲಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಮನೆ ಕಳೆದುಕೊಂಡ ೨೫೨ ಸಂತ್ರಸ್ತ ಕುಟುಂಬಗಳಿಗೆ ‘ಮನೆ ಹಂಚಿಕೆ’ ಕಾರ್ಯವು ನಗರದ ಜಿ.ಪಂ.ಸಭಾAಗಣದಲ್ಲಿ ಬುಧವಾರ ನಡೆಯಿತು.
    ಜಿಲ್ಲಾಧಿಕಾರಿ ವೆಂಕಟ್ ರಾಜಾ, ಇನ್ಫೋಸಿಸ್ ಸಂಸ್ಥೆಯ ಸುನಿಲ್ ಕುಮಾರ್, ಸಂತೋಷ್ ಹಾಗೂ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರ ಉಪಸ್ಥಿತಿಯಲ್ಲಿ ಲಾಟರಿ ಮೂಲಕ ‘ಮನೆ ಹಂಚಿಕೆ’ ಕಾರ್ಯವು ಪಾರದರ್ಶಕವಾಗಿ ನಡೆಯಿತು.
    ‘ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ಇನ್ಫೋಸಿಸ್ ಸಂಸ್ಥೆ ವತಿಯಿಂದ ನಿರ್ಮಾಣವಾಗಿರುವ ೨೦೦ ಮನೆಗಳು ಸೇರಿದಂತೆ ಜಂಬೂರಿನಲ್ಲಿ ಇಂಡಿಯನ್ ಹ್ಯಾಬಿಟೇಟ್ ಸಂಸ್ಥೆಯಿAದ ನಿರ್ಮಾಣವಾಗಿರುವ ೪ ಮನೆಗಳು, ಜೊತೆಗೆ ಮದೆನಾಡು ಬಳಿ ೪, ಕೆ.ನಿಡುಗಣೆ ಬಳಿ ೨, ಗಾಳಿಬೀಡು ಬಳಿ ೪೨ ಸೇರಿದಂತೆ ಒಟ್ಟು ೨೫೨ ಮನೆಗಳ ಹಂಚಿಕೆ ಕಾರ್ಯವು ಸಂತ್ರಸ್ತರ ಸಮ್ಮುಖದಲ್ಲಿ ಮನೆ ಹಂಚಿಕೆ ನಡೆಯಿತು. ಲಾಟರಿ ತೆಗೆಯುವ ಮೂಲಕ ಸಂತ್ರಸ್ತರೇ ತಮ್ಮ ಮನೆ ಸಂಖ್ಯೆ ಆಯ್ಕೆ ಮಾಡಿಕೊಂಡರು.’
    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ೨೦೧೮-೧೯ ರಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡಿದ್ದ ಬಾಕಿ ಕುಟುಂಬದವರಿಗೆ ಮನೆ ಹಂಚಿಕೆ ಮಾಡಲಾಗುತ್ತಿದೆ. ಇನ್ಫೋಸಿಸ್ ಸಂಸ್ಥೆಯಿAದ ೨೦೦ ಮನೆಗಳು ಸೇರಿದಂತೆ ಹ್ಯಾಬಿಟೇಟ್ ಸಂಸ್ಥೆಯಿAದ ವಿವಿಧ ಕಡೆಗಳಲ್ಲಿ ನಿರ್ಮಿಸಿರುವ ೫೨ ಮನೆಗಳನ್ನು ಲಾಟರಿ ಮೂಲಕ ಪಾರದರ್ಶಕವಾಗಿ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
    ಮನೆ ಹಂಚಿಕೆ ಸಂಬAಧ ಈಗಾಗಲೇ ಆಕ್ಷೇಪಣೆಗೂ ಸಹ ಅವಕಾಶ ಕಲ್ಪಿಸಲಾಗಿತ್ತು. ಆಕ್ಷೇಪಣೆ ಸಂಬAಧ ಎಲ್ಲಾ ರೀತಿ ಪರಿಶೀಲಿಸಿ ಬಾಕಿ ಇರುವ ಸಂತ್ರಸ್ತ ಕುಟುಂಬಗಳಿಗೆ ಪಾರದರ್ಶಕವಾಗಿ ಲಾಟರಿ ಮೂಲಕ ಮನೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು.
    ‘ಈಗಾಗಲೇ ಲಾಟರಿ ಮೂಲಕ ಮನೆ ಹಂಚಿಕೆ ಮಾಡಲಾಗಿದ್ದು, ಮನೆ ಹಕ್ಕುಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರಿಂದ ಶೀಘ್ರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.’
    ಇನ್ಫೋಸಿಸ್ ಸಂಸ್ಥೆಯ ಪ್ರಮುಖರಾದ ಸುನಿಲ್ ಕುಮಾರ್ ಅವರು ಮಾತನಾಡಿ ೨೦೧೮ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಹಲವು ಕುಟುಂಬಗಳು ಮನೆ ಕಳೆದುಕೊಂಡರು. ಈ ಹಿನ್ನೆಲೆ ಇನ್ಫೋಸಿಸ್ ಸಂಸ್ಥೆಯು ಸಾಧ್ಯವಾದಷ್ಟು ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ಜಂಬೂರಿನಲ್ಲಿ ೨೦೦ ಮನೆಗಳನ್ನು ನಿರ್ಮಿಸಲು ಮುಂದಾಯಿತು. ಆ ನಿಟ್ಟಿನಲ್ಲಿ ೩೪ ಕೋಟಿ ರೂ. ವೆಚ್ಚದಲ್ಲಿ ೨೦೦ ಮನೆಗಳನ್ನು ನಿರ್ಮಿಸಲಾಗಿದೆ ಎಂದರು.
    ಎರಡು ಬೆಡ್‌ರೂಮ್ ಒಳಗೊಂಡ ಲೈಟಿಂಗ್ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ಮನೆ ಒಳಗೊಂಡಿದೆ. ಸರ್ಕಾರ ಹಾಗೂ ಜಿಲ್ಲಾಡಳಿತದ ನಿರಂತರ ಪರಿಶ್ರಮದಿಂದ ಈ ಕಾರ್ಯ ಆಗಿದೆ ಎಂದು ಅವರು ನುಡಿದರು.
    ಇನ್ಫೋಸಿಸ್ ಸಂಸ್ಥೆಯ ಮತ್ತೊಬ್ಬ ಪ್ರತಿನಿಧಿ ಸಂತೋಷ್ ಅವರು ಮಾತನಾಡಿ ಪ್ರತಿಯೊಬ್ಬರ ಬದುಕಿನಲ್ಲಿ ವಸತಿ ಅವಶ್ಯಕ. ಆ ನಿಟ್ಟಿನಲ್ಲಿ ಸಂತ್ರಸ್ತರ ನೆಮ್ಮದಿಗೆ ಇನ್ಫೋಸಿಸ್ ಸಂಸ್ಥೆ ಸರ್ಕಾರದ ಜೊತೆ ಕೈಜೋಡಿಸಿದೆ. ಪ್ರತಿಯೊಬ್ಬರಿಗೂ ನೆಮ್ಮದಿಯ ಬದುಕು ಅತ್ಯಗತ್ಯ ಎಂದು ಹೇಳಿದರು.
    ಉಪ ವಿಭಾಗಾಧಿಕಾರಿ ಹಾಗೂ ಮನೆ ಹಂಚಿಕೆ ನೋಡಲ್ ಅಧಿಕಾರಿ ವಿನಾಯಕ ನರ್ವಾಡೆ ಅವರು ಮಾತನಾಡಿ ಸಂತ್ರಸ್ತರು ಮೊದಲ ಆದ್ಯತೆಯಲ್ಲಿ ಗಾಳಿಬೀಡು, ಎರಡನೇ ಆದ್ಯತೆಯಲ್ಲಿ ಜಂಬೂರು ಆಯ್ಕೆ ಮಾಡಿದ್ದರು. ಇನ್ಫೋಸಿಸ್ ಸಂಸ್ಥೆಯ ೨೦೦ ಮನೆಗಳು ಜೊತೆಗೆ ವಿವಿಧ ಪ್ರದೇಶದ ೫೨ ಮನೆಗಳನ್ನು ಪಾರದರ್ಶಕವಾಗಿ ಹಂಚಿಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

     

    Previous Articleನೆರೆ ಸಂತ್ರಸ್ತರಿಗೆ ಮೀಸಲಿಟ್ಟ ಜಾಗದಲ್ಲಿ ಕಟ್ಟಡ ನಿರ್ಮಿಸಿದರೆ ಕಾನೂನು ಹೋರಾಟ
    Next Article ಮಣ್ಣು ಮತ್ತು ನೀರಿನ ಸಂರಕ್ಷಣೆ ಸಾರುವ ಜಲಾನಯನ ಯಾತ್ರೆ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.