ಮಡಿಕೇರಿ : ಕೊಡಗಿನಲ್ಲಿ ಮುಂದುವರೆದ ಧಾರಾಕಾರ ಮಳೆ ನದಿ ತೊರೆಗಳು ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಜಲಪಾತಗಳು ಹಾಲ್ನೊರೆಯಂತೆ ಧುಮುಕುತ್ತಿದ್ದು ನೋಡುಗರ ಮನಸೆಳೆಯುತ್ತಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 53.94 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ 75.58 ಮಿ.ಮೀ, ವಿರಾಜಪೇಟೆ ತಾಲ್ಲೂಕಿನಲ್ಲಿ 50.05 ಮಿ.ಮೀ ಮಳೆಯಾಗಿದೆ.
ಪೊನ್ನಂಪೇಟೆ ತಾಲ್ಲೂಕಿನಲ್ಲಿ 46.07 ಮಿ.ಮೀ, ಸೋಮವಾರಪೇಟೆ ತಾಲ್ಲೂಕಿನಲ್ಲಿ 56.50 ಮಿ.ಮೀ, ಕುಶಾಲನಗರ ತಾಲ್ಲೂಕಿನಲ್ಲಿ 41.50 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 88.50, ನಾಪೋಕ್ಲು 79.20, ಸಂಪಾಜೆ 4, ಭಾಗಮಂಡಲ 130.60, ವಿರಾಜಪೇಟೆ 49.60, ಅಮ್ಮತ್ತಿ 50.50, ಹುದಿಕೇರಿ 49.30, ಶ್ರೀಮಂಗಲ 76, ಪೊನ್ನಂಪೇಟೆ 40, ಬಾಳೆಲೆ 19, ಸೋಮವಾರಪೇಟೆ 68, ಶನಿವಾರಸಂತೆ 50, ಶಾಂತಳ್ಳಿ 84, ಕೊಡ್ಲಿಪೇಟೆ 24, ಕುಶಾಲನಗರ 24, ಸುಂಟಿಕೊಪ್ಪ 59 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ
*******************************************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2843.19 ಅಡಿಗಳು. ಕಳೆದ ವರ್ಷ ಇದೇ ದಿನ 2824.11 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 20.20 ಮಿ.ಮೀ., ಇಂದಿನ ನೀರಿನ ಒಳಹರಿವು 3299 ಕ್ಯುಸೆಕ್, ಕಳೆದ ವರ್ಷ ಇದೇ ದಿನ 224 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 100 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.

