Close Menu
Kodagu News
    ಹೊಸ ಸುದ್ದಿ

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    • ಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ
    • ಕೊಡಗಿನಲ್ಲಿ ಪಕ್ಷಾಂತರ ಪರ್ವ: ಬಿಜೆಪಿಗೆ ನಾಯಕತ್ವದ ಸವಾಲು, ಕಾಂಗ್ರೆಸ್‌ಗೆ ರಾಜಕೀಯ ಅವಕಾಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
    Uncategorized

    ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

    *ಪ್ರಾಮಾಣಿಕತೆ ಮೆರೆದ ಆಟೋ ಚಾಲಕ*

     

    ಮಡಿಕೇರಿ -ಆಟೋ ರಿಕ್ಷಾದಲ್ಲಿ ಪ್ರಯಾಣಿಕರೊಬ್ಬರು ತಾನು ಪ್ರಯಾಣಿಸಿದ 2 ಕಿ.ಮೀ. ಅಂತರದ ಪ್ರಯಾಣಕ್ಕೆ ರೂ. 40 ಪವಾತಿಸಬೇಕಾದವರು ತಮಗರಿವಿಲ್ಲದೇ ಗೂಗಲ್ ಪೇ ಮಾಡಿದ್ದ ರೂ. 34 ಸಾವಿರ ಹಣವನ್ನು ಹಿಂತಿರುಗಿಸುವ ಮೂಲಕ ಮಡಿಕೇರಿಯ ಆಟೋ ಚಾಲಕ ಸತೀಶ್ ಹಾಗೂ ಆಟೋ ಮಾಲೀಕರ, ಚಾಲಕರ ಸಂಘದವರು ಪ್ರಾಮಾಣಿಕತೆ ಮೆರೆದಿದ್ದಾರೆ.

     

    ದಿನಾಂಕ 11ರಂದು ಎಮ್ಮೆಮಾಡು ನಿವಾಸಿ ಆಲಿ ಎಂಬುವವರು ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿಯಿಂದ ಆಟೋ ಏರಿದ್ದು ಸಬ್ ರಿಜಿಸ್ಟ್ರಾರ್ ಕಛೇರಿ ಬಳಿ ಇಳಿದಿದ್ದಾರೆ. ಅವರು ಆಟೋ

    ಬಾಡಿಗೆಯ ಹಣ ರೂ. 40 ನೀಡಬೇಕಿತ್ತು. ಆದರೆ ಅವರ ಕೈಯಲ್ಲಿ ಹಣವಿರದ ಕಾರಣ ಬಾಡಿಗೆಯ ಹಣ ಸೇರಿಸಿ ರೂ. 500 ಗೂಗಲ್ ಪೇ ಮಾಡುವುದಾಗಿ ಹೇಳಿ ಬಾಡಿಗೆ ಹಣ ಕಳೆದು ಉಳಿದ 460 ರೂಪಾಯಿ ಕ್ಯಾಶ್ ನೀಡುವಂತೆ ಕೇಳಿಕೊಂಡಿದ್ದಾರೆ. ತನ್ನ ಬಳಿ ಅಷ್ಟು ಹಣ ಇಲ್ಲದಿರುವುದರಿಂದ ರೂ. 340 ಗೂಗಲ್ ಪೇ ಮಾಡುವಂತೆ ಹೇಳಿದ ಚಾಲಕ ಸತೀಶ್, ರೂ. 300 ಕೊಟ್ಟಿದ್ದಾರೆ. ಆದರೆ ಆಲಿಯವರು 340 ರೂ. ಗಳನ್ನು ಗೂಗಲ್ ಪೇ ಮಾಡುವ ಬದಲಾಗಿ ತನಗೆ ಅರಿವಿಲ್ಲದೆ 34,000 ರೂ. ಗಳನ್ನು ಚಾಲಕನ ಸ್ಕ್ಯಾನರ್ ಗೆ ಸ್ಕ್ಯಾನ್ ಮಾಡಿದ್ದಾರೆ. ನಂತರ ಇದ್ಯಾವುದರ ಅರಿವಿಲ್ಲದೆ ಇಬ್ಬರೂ ಅವರವರ ಪಾಡಿಗೆ ಹೊರಟು ಹೋಗಿದ್ದಾರೆ.

     

    ಇದಾದ ಸ್ವಲ್ಪ ಹೊತ್ತಿನ ಬಳಿಕ ಟ್ರಾನ್ಸಾಕ್ಷನ್ ಪರಿಶೀಲಿಸಿದ ಚಾಲಕ ಸತೀಶ್ ರವರಿಗೆ ವಿಷಯ ಗಮನಕ್ಕೆ ಬಂದಿದೆ. ಹೆಚ್ಚು ಹಣ ಜಮೆ ಮಾಡಿದ ಆಲಿಯವರನ್ನು ಸಂಪರ್ಕಿಸಲು ಯಾವುದೇ ಸಂಪರ್ಕ ಸಂಖ್ಯೆ ಸ್ಕ್ಯಾನರ್ ನಲ್ಲಿ ಕೂಡ ಸಿಗದ ಕಾರಣ ಅವರನ್ನು ಸಂಪರ್ಕಿಸಲು ಕಷ್ಟವಾಗಿತ್ತು. ಹಾಗೆಯೇ ಹೆಚ್ಚುವರಿ ಹಣ ನೀಡಿದ ಆಲಿಯವರಿಗೆ ತಾ. 12 ರ ಮಧ್ಯಾಹ್ನದವರೆಗೂ ವಿಷಯ ಗಮನಕ್ಕೆ ಬಂದಿರಲಿಲ್ಲ ಬ್ಯಾಂಕಿಗೆ ಬಂದು ಪಾಸ್ ಪುಸ್ತಕವನ್ನು ಪರಿಶೀಲಿಸಿದಾಗ 34,000 ರೂ. ಗಳನ್ನು ಹಿಂದಿನ ದಿನ ಆಟೋ ಚಾಲಕನಿಗೆ ನೀಡಿರುವುದು ಗೋಚರಿಸಿದೆ. ಈ ಕುರಿತು ಆಟೋ ಮಾಲೀಕರ, ಚಾಲಕರ ಸಂಘಕ್ಕೆ ಮಾಹಿತಿ ನೀಡಿದ ಮೇರೆಗೆ ಸಂಘದ ಮುಖೇನ ಮಾಹಿತಿಯನ್ನು ಗ್ರೂಪ್ ನಲ್ಲಿ ಶೇರ್ ಮಾಡಲಾಗಿತ್ತು. ಇತರೆ ಚಾಲಕರು ತಾ. 11ರಂದು ನಡೆದ ಘಟನೆಯ ಬಗ್ಗೆ ಚಾಲಕ ಸತೀಶ್ ತಮ್ಮ ಬಳಿ ತಿಳಿಸಿರುವುದಾಗಿ ಸಂಘದವರಲ್ಲಿ ಮಾಹಿತಿ ನೀಡಿದ್ದಾರೆ.

     

    ಸಂಘದಿಂದ ಚಾಲಕ ಸತೀಶ್ ರವರನ್ನು ಸಂಪರ್ಕಿಸಿ ಘಟನೆಯ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಾಗಿದೆ. ತಾ. 11ರಂದೇ ಆಲಿರವರ ಖಾತೆಗೆ 1 ರೂ. ಗೂಗಲ್ ಪೇ ಮಾಡಿ ಅವರದ್ದೇ ಖಾತೆ ಎಂಬ ಬಗ್ಗೆ ಖಾತರಿ ಪಡಿಸುವಂತೆ ಮೆಸೇಜ್ ಮಾಡಿರುವುದಾಗಿ ಚಾಲಕ ಸತೀಶ್ ಸ್ಪಷ್ಟಪಡಿಸಿದ್ದಾರೆ. ಆದರೆ ಆಲಿ ಅವರು ಅದನ್ನು ಗಮನಿಸಿರಲಿಲ್ಲ. ತಾ. 12 ರಂದು ಚಾಲಕ ಸತೀಶ್ ರವರು ಆಲಿರವರಿಗೆ ಸಂಘದ ಮಧ್ಯಸ್ಥಿಕೆಯಲ್ಲಿ ಹಣವನ್ನು ಹಿಂತಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಹಣ ಕಳೆದುಕೊಂಡಿದ್ದ ಆಲಿ ಅವರು ಸಂಘದ ಈ ಸೇವೆಯನ್ನು ಮೆಚ್ಚಿ ಸಂಘಕ್ಕೆ ಧನ ಸಹಾಯ ನೀಡಲು ಮುಂದಾದರು. ಆದರೆ ಇದಕ್ಕೆ ಸಂಘವು ನಿರಾಕರಿಸಿರುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ದಿನು ಬಾರನ ಅವರು ತಿಳಿಸಿದ್ದಾರೆ.

     

    ಇಂತಹ ಪ್ರಾಮಾಣಿಕ ಸೇವೆಯ ಪ್ರತಿಫಲವಾಗಿ ಆಟೋ ಚಾಲಕರ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿರುವುದು ದೊಡ್ಡ ಕೊಡುಗೆಯಾಗಿದೆ. ಯಾವುದೇ ವಸ್ತು ಆಗಿರಲಿ, ಕಳೆದುಕೊಂಡವರು ಯಾರೇ ಆಗಿರಲಿ ವಾಸ್ತವ ಅರಿತಲ್ಲಿ ಈ ರೀತಿ ಸಹಕರಿಸಲು ಸಂಘ ಸದಾ ಸಿದ್ಧವಾಗಿರುತ್ತದೆ ಎಂದು ತಿಳಿಸಿರುವ ಅವರು, ಇತರೆ ಚಾಲಕರಿಗೆ ಮಾದರಿಯಾಗಿ ಪ್ರಾಮಾಣೀಕತೆ ಮೆರೆದ ಆಟೋ ಚಾಲಕ ಸತೀಶ್ ರವರಿಗೆ ಸಂಘದ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

    Previous Articleಹಾರಂಗಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಮುನ್ನೆಚ್ಚರಿಕೆ
    Next Article ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    Related Posts

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.