Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಸೋಮವಾರಪೇಟೆ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ
    Uncategorized

    ಸೋಮವಾರಪೇಟೆ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ

    ಮಡಿಕೇರಿ : ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗುರುವಾರ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು.

    ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

    ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

    ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕೃಷ್ಣಮೂರ್ತಿ, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಇತರರು ಇದ್ದರು.

    ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ: ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭದಲ್ಲಿ ಸಭೆ ನಡೆಸಿದರು.

    ಈ ಬಾರಿ ಮುಂಗಾರು ಬೇಗ ಆರಂಭವಾಗಿದ್ದು, ಮೇ ಮತ್ತು ಜೂನ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.

    ಅಂಗನವಾಡಿ, ಶಾಲಾ ಮತ್ತು ಕಾಲೇಜು ಕಟ್ಟಡಗಳ ಸ್ಥಿತಿಗತಿ ಬಗ್ಗೆ ಕೂಡಲೇ ವರದಿ ನೀಡಬೇಕು. ಸುಸ್ಥಿತಿಯಲ್ಲಿರದ ಶಾಲಾ, ಕಾಲೇಜು, ಅಂಗನವಾಡಿ ಕಟ್ಟಡ ಸಂಬಂಧ ಅಂದಾಜುಪಟ್ಟಿ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

    ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಕಾಲ ಕಾಲಕ್ಕೆ ಹವಾಮಾನ ಇಲಾಖೆ ಹೊರಡಿಸುವ ಮಾಹಿತಿ ಹಂಚಿಕೊಳ್ಳಬೇಕು. ಅತೀವೃಷ್ಟಿಯಿಂದ ಮನೆ, ಮತ್ತಿತರ ಹಾನಿ ಸಂಭವಿಸಿದಲ್ಲಿ ಕೂಡಲೇ ಪರಿಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

    ತಹಶೀಲ್ದಾರರು ಮತ್ತು ತಾ.ಪಂ ಇಒಗಳ ಜೊತೆ ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಅಹವಾಲಿಗೆ ಸ್ಪಂದಿಸುವಂತೆ ನಿರ್ದೇಶನ ನೀಡಿದರು.

    ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ, ತಹಶೀಲ್ದಾರ್ ಕೃಷ್ಣಮೂರ್ತಿ, ತಾ.ಪಂ.ಇಒ ಪರಮೇಶ ಇತರರು ಇದ್ದರು.

    Previous Articleಅನ್ನ ಭಾಗ್ಯಕ್ಕೆ ಕನ್ನ ಹಾಕುವವರ ವಿರುದ್ಧ ಕ್ರಮ
    Next Article ಜೂ.21 ರಂದು ಅಂಚೆ ವಹಿವಾಟು ಸ್ಥಗಿತ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.