Close Menu
Kodagu News
    ಹೊಸ ಸುದ್ದಿ

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ
    • ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ
    • ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ
    • ಗೋಣಿಕೊಪ್ಪ ಅಪರಿಚಿತ ವ್ಯಕ್ತಿ 12 ಅಡಿ ಕಟ್ಟಡದಿಂದ ಜಿಗಿದು ಸಾವು
    • ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ
    • ಹಾಕಿ ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ
    • ನಾಳೆಯಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬ ಆರಂಭ
    • ಮೇ.2 ರಂದು ನಡೆಯಲಿರುವ “ಮಾದರಿ ಮದುವೆ” ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿಗೆ ಕೊಡಗು ಜಿಲ್ಲಾ ಎಸ್ ವೈ ಎಸ್ ಸಮಿತಿ ಕರೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»Uncategorized»ಅತಿಸಾರ ಬೇಧಿ ತಡೆಯುವಿಕೆ ಅಭಿಯಾನಕ್ಕೆ ಚಾಲನೆ : ಮಕ್ಕಳ ಉತ್ತಮ ಆರೋಗ್ಯದತ್ತ ಗಮನ ಇರಲಿ: ಡಾ.ಸತೀಶ್ ಕುಮಾರ್  
    Uncategorized

    ಅತಿಸಾರ ಬೇಧಿ ತಡೆಯುವಿಕೆ ಅಭಿಯಾನಕ್ಕೆ ಚಾಲನೆ : ಮಕ್ಕಳ ಉತ್ತಮ ಆರೋಗ್ಯದತ್ತ ಗಮನ ಇರಲಿ: ಡಾ.ಸತೀಶ್ ಕುಮಾರ್  

    ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ (ಮಕ್ಕಳ ವಿಭಾಗ) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಅತಿಸಾರ ಬೇಧಿ ತಡೆಗಟ್ಟುವಿಕೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸೋಮವಾರ ನಡೆಯಿತು.

    ಸ್ಟಾಪ್ ಡೈಯೇರಿಯ ಕ್ಯಾಂಪೇನ್ ಅನ್ನು ಜುಲೈ 31 ರವರೆಗೆ ಆಯೋಜಿಸಲಾಗಿದೆ. ಎಲ್ಲಾ ಐದು ವರ್ಷದ ಒಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಒಂದು ಮಗುವಿಗೆ ಎರಡು ಪ್ಯಾಕೆಟ್ ಓಆರ್‍ಎಸ್ ಮತ್ತು ಒಂದು ಪ್ಯಾಕೆಟ್ ಜಿಂಕ್ ಮಾತ್ರೆಯನ್ನು ನೀಡಲಾಗುವುದು. ಭೇದಿ ಆದಲ್ಲಿ ಮಾತ್ರ ಜಿಂಕ್ ಮಾತ್ರೆಯನ್ನು 14 ದಿನಗಳವರೆಗೆ ಉಪಯೋಗಿಸುವುದು. ಈ ಮಾಹಿತಿಯು ಪ್ರತಿಯೊಬ್ಬ ಪೆÇೀಷಕರಿಗೂ ಈ ಬಗ್ಗೆ ಮಾಹಿತಿ ತಿಳಿದಿರಬೇಕು. ಗುಣಮುಖವಾಗದಿದ್ದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೋರಿಸಬೇಕು. ಅತಿಸಾರ ಬೇಧಿಯಿಂದ ಉಂಟಾಗುವ ಮರಣವನ್ನು ತಪ್ಪಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಅತಿಸಾರ ಭೇದಿಯಿಂದ ಶೂನ್ಯ ಮರಣ ಎಂಬ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಆರೋಗ್ಯ ದಿನಾಚರಣೆ, ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ, ಅಂಗನವಾಡಿ ಮತ್ತು ಶಾಲೆಗಳಲ್ಲಿ, ವಸತಿ ನಿಲಯಗಳಲ್ಲಿ ಎಲ್ಲಾ ಸ್ವಸಹಾಯ ಗುಂಪುಗಳಲ್ಲಿ ಸಭೆ ಏರ್ಪಡಿಸಿ ಮಾಹಿತಿ ನೀಡಲಾಗುತ್ತದೆ.

    ಸ್ವಚ್ಛತೆ ಬಗ್ಗೆ ಮತ್ತು ಕೈ ತೊಳೆಯುವ ಬಗ್ಗೆ ಮಾಹಿತಿ ನೀಡಿ ಮಾಹಿತಿ ಶಿಕ್ಷಣದ ಪೋಸ್ಟರ್ಸ್ ಮತ್ತು  ಬ್ಯಾನರ್ ಗಳನ್ನು ವಿತರಿಸಲಾಗಿದೆ ಹಾಗೂ ಅನಾವರಣಗೊಳಿಸಲಾಗಿದೆ. ಇದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಉತ್ತಮ ಯೋಜನೆಯಾಗಿದೆ ಎಂದು ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ್ ಅವರು ಮಾಹಿತಿ ನೀಡಿದರು.

    ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಪುರುಷೋತ್ತಮ್  ಇದು ಬರಿ ಕಾರ್ಯಕ್ರಮವಲ್ಲ, ಅನುಷ್ಠಾನಕ್ಕೆ ಬರಬೇಕು. ನಿರ್ಜಲೀಕರಣ ಆಗದಂತೆ ದಿವ್ಯ ಔಷಧವಾದ ಒಆರ್‍ಎಸ್ ಮತ್ತು ಜಿಂಕ್ ಮಕ್ಕಳಿಗೆ ಕೊಡಿಸಿ ಎಂದು ಸಲಹೆ ನೀಡಿದರು.

    ಡಾ.ದಿವ್ಯರಾಣಿ ಮತ್ತು ಡಾಕ್ಟರ್ ಸಲ್ಮಾ ರವರು ಅತಿಸಾರ ಬೇದಿ ಆದಾಗ ತಕ್ಷಣವೇ ತಯಾರಿಸುವ ಮನೆಮಟ್ಟದ ಒಆರ್‍ಎಸ್ (6 ಟೀ ಸ್ಪೂನ್ ಸಕ್ಕರೆ ಮತ್ತು ಅರ್ಧ ಚಮಚ ಉಪ್ಪು ಹಾಗೂ ಒಂದು ಲೀಟರ್ ಶುದ್ಧ ಕುಡಿಯುವ ನೀರು) ಈ ಬಗ್ಗೆ ಮಾಹಿತಿ ನೀಡಿದರು.

    ‘ಯಾವುದೇ ಕಾರಣಕ್ಕೂ ಹುಳಿ ಅಂಶ ಮಿಶ್ರಣ ಮಾಡುವಂತಿಲ್ಲ, ಹಣ್ಣಿನ ಜ್ಯೂಸ್‍ಗೆ ಕೂಡ ಸಕ್ಕರೆ ಮಿಶ್ರಣ ಮಾಡಬಾರದು ಎಂದು ಕರೆ ನೀಡಿದರು.’

    ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಆರೋಗ್ಯ ಸಿಬ್ಬಂದಿಗಳು ಕೈ ತೊಳೆಯುವ ವಿಧಾನದ ಬಗ್ಗೆ ಓಆರ್‍ಎಸ್ ದ್ರಾವಣ ತಯಾರಿಸುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

    ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ನಿರೂಪಿಸಿ, ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ ಮತ್ತು ಪುಟಾಣಿ ಮಕ್ಕಳು ಹಾಗೂ ಪೆÇೀಷಕರು ಪಾಲ್ಗೊಂಡಿದ್ದರು.

    Previous Articleಜಿ.ಪಂ.ಭವನ ಐಟಿಡಿಪಿ ಕಚೇರಿಯಲ್ಲಿ ಅರಣ್ಯ ಹಕ್ಕು ಕೋಶ ಆರಂಭ
    Next Article ಜೂ.24 ರಂದು ಕರೆಂಟ್ ಇರಲ್ಲ..!

    Related Posts

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.