Close Menu
Kodagu News
    ಹೊಸ ಸುದ್ದಿ

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ
    • ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ
    • ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ
    • ಗೋಣಿಕೊಪ್ಪ ಅಪರಿಚಿತ ವ್ಯಕ್ತಿ 12 ಅಡಿ ಕಟ್ಟಡದಿಂದ ಜಿಗಿದು ಸಾವು
    • ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ
    • ಹಾಕಿ ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ
    • ನಾಳೆಯಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬ ಆರಂಭ
    • ಮೇ.2 ರಂದು ನಡೆಯಲಿರುವ “ಮಾದರಿ ಮದುವೆ” ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿಗೆ ಕೊಡಗು ಜಿಲ್ಲಾ ಎಸ್ ವೈ ಎಸ್ ಸಮಿತಿ ಕರೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»Uncategorized»ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ; ಹಲವು ವಿಚಾರ ಚರ್ಚೆ
    Uncategorized

    ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ; ಹಲವು ವಿಚಾರ ಚರ್ಚೆ

    ಮಡಿಕೇರಿ : ಅನುಸೂಚಿತ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ ನಿಯಂತ್ರಣ) ನಿಯಮ ರೀತಿಯ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.

    ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಎಚ್.ಎಸ್.ಮುತ್ತಪ್ಪ ಅವರು ಹೊದ್ದೂರು, ಹೊದವಾಡ ಸೇರಿದಂತೆ ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಶಿಷ್ಟರು ವಾಸ ಮಾಡುತ್ತಿದ್ದು, ಇವರಿಗೆ ಶಾಶ್ವತ ನೆಲೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು.

    ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಕುಟುಂಬಗಳಿಗೆ ನಿವೇಶನ ಕಲ್ಪಿಸುವುದರ ಜೊತೆಗೆ ಮನೆ ನಿರ್ಮಿಸಿಕೊಡುವಂತಾಗಬೇಕು ಎಂದು ಮುತ್ತಪ್ಪ ಅವರು ಕೋರಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಹೊದ್ದೂರು-ಹೊದವಾಡ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಎಸ್.ಮುತ್ತಪ್ಪ ಅವರು ಹರದೂರು ಗ್ರಾ.ಪಂ. ವ್ಯಾಪ್ತಿಯ ಮಲ್ಲಿಕಾರ್ಜುನ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಲವು ಕಾಮಗಾರಿ ನಡೆದಿದ್ದು, ಬಿಲ್ಲುಗಳ ಪಾವತಿಗೆ ಬಾಕಿ ಇದೆ ಎಂದರು.

    ಮತ್ತೊಬ್ಬ ಸಮಿತಿ ಸದಸ್ಯರಾದ ಜೆ.ಎಲ್.ಜನಾರ್ಧನ ಅವರು ಮಾತನಾಡಿ ಗಂಗಾ ಕಲ್ಯಾಣ ಯೋಜನೆಯಡಿ ಹಲವು ಕೆಲಸಗಳು ಬಾಕಿ ಇದ್ದು, ಕೂಡಲೇ ಪೂರ್ಣಗೊಳಿಸಬೇಕಿದೆ ಎಂದು ಕೋರಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಚಂದ್ರಪ್ಪ ಕೆಲವು ಯೋಜನೆಗಳು ಕೇಂದ್ರ ಕಚೇರಿಯಿಂದ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಈ ಸಂಬಂಧ ಕೇಂದ್ರ ಕಚೇರಿ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಜನಾರ್ಧನ ಅವರು ಕೊಡ್ಲಿಪೇಟೆ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದೆ ಅಲ್ಲಿನ ಸಾರ್ವಜನಿಕರು ಪ್ರತೀನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗಮನ ಸೆಳೆದರು. ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಕಾಯ್ದಿರಿಸಬೇಕು ಎಂದರು ಕೋರಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ವೈದ್ಯರ ಕೊರತೆ ಎಲ್ಲೆಡೆ ಇದ್ದು, ವೈದ್ಯರ ನಿಯೋಜನೆಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

    ಮತ್ತೊಬ್ಬ ಸದಸ್ಯರಾದ ಪಿ.ಪಿ.ಸುಕುಮಾರ್ ಹಾಗೂ ಜಾಯ್ಸ್ ಮೆನೇಜಸ್ ಅವರು ಮಾತನಾಡಿ ಬಾಳೆಗುಂಡಿ ವಾಲ್ನೂರು ತ್ಯಾಗತ್ತೂರು ವಿವಿಧ ಹಾಡಿಗಳಲ್ಲಿ ವಾಸಿಸುವ ಪರಿಶಿಷ್ಟ ವರ್ಗದ ಜನರು ಆಧಾರ್ ಕಾರ್ಡ್ ಇಲ್ಲದೆ ಪಡಿತರ ಚೀಟಿ ಪಡೆಯಲು ಸಾಧ್ಯವಾಗಿಲ್ಲ, ಆದ್ದರಿಂದ ಆಧಾರ್ ಇಲ್ಲದ ಕುಟುಂಬಗಳನ್ನು ಗುರ್ತಿಸಿ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು ಎಂದರು.

    ಸಫಾಯಿ ಕರ್ಮಚಾರಿ/ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್‍ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯು ಇದೇ ಸಂದರ್ಭದಲ್ಲಿ ನಡೆಯಿತು.

    ಸಮಿತಿ ಸದಸ್ಯರಾದ ರಂಗಸ್ವಾಮಿ ಅವರು ಮಾತನಾಡಿ ಪೌರಕಾರ್ಮಿಕರ ದಿನಾಚರಣೆಯನ್ನು ಗ್ರಾ.ಪಂ.ಮಟ್ಟದಲ್ಲಿಯೂ ಆಯೋಜಿಸುವಂತಾಗಬೇಕು ಎಂದು ಕೋರಿದರು.

    ಹಾಗೆಯೇ ಉನ್ನತ ವ್ಯಾಸಂಗ ಮಾಡಿದ ಪೌರಕಾರ್ಮಿಕರ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

    ಸುಂಟಿಕೊಪ್ಪ ಹೋಬಳಿ ಕೇಂದ್ರದಲ್ಲಿ ಪೌರಕಾರ್ಮಿಕರಿಗೆ ಸ್ವಂತ ನಿವೇಶನ ಇಲ್ಲದೆ ಗುಡಿಸಿಲಿನಲ್ಲಿ ವಾಸ ಮಾಡುತ್ತಿದ್ದು, ಇವರಿಗೆ ಜಾಗ ಕಾಯ್ದಿರಿಸಿ ಮನೆ ನಿರ್ಮಿಸಿಕೊಡುವಂತಾಗಬೇಕು ಎಂದು ರಂಗಸ್ವಾಮಿ ಕೋರಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸುಂಟಿಕೊಪ್ಪದಲ್ಲಿ ಸರ್ಕಾರಿ ಭೂಮಿ ಸಿಗುವುದು ಕಷ್ಟಸಾಧ್ಯವಾಗಿದೆ. ಹತ್ತಿರದಲ್ಲಿ ಪೈಸಾರಿ ಜಾಗ ಇದ್ದಲ್ಲಿ ಗುರುತಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

    ಸಫಾಯಿ ಕರ್ಮಚಾರಿಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ನೇರ ಸಾಲ ಯೋಜನೆಯಡಿ ಸಹಾಯಧನ ಕಲ್ಪಿಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ರಂಗಸ್ವಾಮಿ ಕೋರಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪರಿಶಿಷ್ಟರಿಗಾಗಿ ಸರ್ಕಾರದಿಂದ ಹಲವು ಸೌಲಭ್ಯಗಳಿದ್ದು, ಅವುಗಳನ್ನು ತಲುಪಿಸುವಂತಾಗಬೇಕು. ಸರ್ಕಾರದಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಅರ್ಹರಿಗೆ ಸವಲತ್ತು ತಲುಪಿಸುವಂತಾಗಬೇಕು ಎಂದು ಸೂಚಿಸಿದರು.

    ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಸಮಿತಿ ಸದಸ್ಯರಾದ ಪರಮೇಶ್, ವಿಜಯಕುಮಾರ್, ಪುಟ್ಟಮ್ಮ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ತಾ.ಪಂ.ಇಒಗಳಾದ ಅಪ್ಪಣ್ಣ, ಪರಮೇಶ, ಪುರಸಭೆ ಮುಖ್ಯಾಧಿಕಾರಿಗಳಾದ ಗಿರೀಶ್, ನಾಚಪ್ಪ, ಸತೀಶ್ ಇತರರು ಇದ್ದರು.

    Previous Articleಕನಿಷ್ಠ ವೇತನಕ್ಕೆ ಆಗ್ರಹಿಸಿ ಗ್ರಾ.ಪಂ ನೌಕರರ ಪ್ರತಿಭಟನೆ
    Next Article ಜೂ.28 ರಂದು ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್ ಮತ್ತು ಕ್ರೇನಿಯೋಫೇಶಿಯಲ್ ವಿರೂಪಗಳ ತಪಾಸಣಾ ಶಿಬಿರ

    Related Posts

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.