Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಜಿಲ್ಲೆಯ 201 ವಿಕಲಚೇತನರಿಗೆ 20 ಲಕ್ಷ ರೂ.ವೆಚ್ಚದ 344 ಉಪಕರಣ ವಿತರಣೆ
    Uncategorized

    ಜಿಲ್ಲೆಯ 201 ವಿಕಲಚೇತನರಿಗೆ 20 ಲಕ್ಷ ರೂ.ವೆಚ್ಚದ 344 ಉಪಕರಣ ವಿತರಣೆ

     

    ವಿಕಲಚೇತನರಿಗೆ ಸರ್ಕಾರದಿಂದ ಹಲವು ಸೌಲಭ್ಯ: ಯದುವೀರ್  

    ಮಡಿಕೇರಿ : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ವಿಕಲಚೇತನರ ಇಲಾಖೆ ವತಿಯಿಂದ ‘ಸಾಮಾಜಿಕ ಆಧಾರಿತ ಸಿವಿಲ್’ ಯೋಜನೆಯಲ್ಲಿ ದಿವ್ಯಾಂಗರಿಗೆ ಸಾಧನ ಸಲಕರಣೆಗಳನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಂಗಳವಾರ ವಿತರಿಸಿದರು.

    ನಗರದ ರೆಡ್‍ಕ್ರಾಸ್ ಭವನದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಸಂಸದರು ಜಿಲ್ಲೆಯ 201 ವಿಕಲಚೇತನರಿಗೆ 20 ಲಕ್ಷ ರೂ.ವೆಚ್ಚದ 344 ಸಾಧನ ಸಲಕರಣೆ ವಿತರಿಸಲಾಗುತ್ತದೆ ಎಂದು ತಿಳಿಸಿದರು.

    ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿ ಅವಲಂಬಿತರಾಗಿದ್ದಾರೆ. ಆ ನಿಟ್ಟಿನಲ್ಲಿ ವಿಕಲಚೇತನರಿಗೆ ಇನ್ನೂ ಹೆಚ್ಚಿನ ಅವಕಾಶ ನೀಡಬೇಕಿದೆ. ಆ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಸಾಧನ ಉಪಕರಣ ಕಲ್ಪಿಸುತ್ತಿದೆ ಎಂದು ತಿಳಿಸಿದರು.

    ರಾಷ್ಟ್ರದ ಅಭಿವೃದ್ಧಿಗೆ ವಿಕಲಚೇತನರು ಸಹ ಹಲವು ಕೊಡುಗೆ ನೀಡಿದ್ದು, ವಿಕಲಚೇತನರು ಇತರರಂತೆ ಬದುಕು ನಡೆಸುವಂತಾಗಲು ಸರ್ಕಾರ ಹಲವು ಸೌಲಭ್ಯ ನೀಡುತ್ತಿದೆ ಎಂದು ಸಂಸದರು ನುಡಿದರು.

    ಭಾರತ ಬಲಿಷ್ಠ ಹಾಗೂ ಆದರ್ಶ ಸಮಾಜ ನಿರ್ಮಾಣ ಮಾಡಲು ಎಲ್ಲರ ಕೊಡುಗೆ ಅಗತ್ಯ. ಆ ನಿಟ್ಟಿನಲ್ಲಿ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ವಿಕಲಚೇತನರಿಗೆ ಸಾಧ್ಯವಾದಷ್ಟು ಸಹಕಾರ ನೀಡುವಂತಾಗಬೇಕು ಎಂದರು.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತದಡಿ ಸಮಗ್ರ ಸಂಪೂರ್ಣ ಅಭಿವೃದ್ಧಿ ಆಗಬೇಕಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಪಾತ್ರವು ಪ್ರಮುಖವಾಗಿದೆ. ನವ ಭಾರತ ನಿರ್ಮಾಣಕ್ಕೆ ಎಲ್ಲರ ಕೊಡುಗೆ ಅಗತ್ಯ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಿ ಹೇಳಿದರು.

    ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಮಾತನಾಡಿ ವಿಕಲಚೇತನರಿಗಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಸ್ವಾಭಿಮಾನಿ ಮತ್ತು ಸ್ವಾವಲಂಬಿ ಬದುಕು ನಡೆಸಲು ಹಲವು ಕಾರ್ಯಕ್ರಮ ಜಾರಿಗೊಳಿಸಿದೆ ಎಂದರು.

    2047 ರೊಳಗೆ ವಿಕಸಿತ ಭಾರತ ಆಗಬೇಕು ಎಂಬ ದೃಷ್ಟಿಯಿಂದ ಸಮಾಜದ ಕಟ್ಟಕಡೆಯವರನ್ನು ಗುರುತಿಸಿ ವಿಕಲಚೇತನರು ಸೇರಿದಂತೆ ಎಲ್ಲಾ ಜನ ಸಾಮಾನ್ಯರಿಗೂ ಹಲವು ಕಾರ್ಯಕ್ರಮ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

    ವಿಕಲಚೇತನರು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬದುಕುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಎಲ್ಲರಂತೆ ಬದುಕು ನಡೆಸುವಂತಾಗಬೇಕು ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಸಿರಸಗಿ ಅವರು ಮಾತನಾಡಿ ವಿಕಲತೆ ಶಾಪವಲ್ಲ. ಆದರೆ ಅದನ್ನು ಮೆಟ್ಟಿ ನಿಲ್ಲುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವ ಉದ್ಯೋಗ ಕೈಗೊಳ್ಳುವಂತಾಗಬೇಕು. ಸ್ವಾವಲಂಬಿ ಬದುಕು ನಡೆಸುವಂತಾಗಬೇಕು ಎಂದರು.

    ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಅವರು ಮಾತನಾಡಿ ರೆಡ್‍ಕ್ರಾಸ್ ಸಂಸ್ಥೆಯಿಂದ ವಿಕಲಚೇತನರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಸದ್ಯ 25 ಜನರಿಗೆ ರೈನ್‍ಕೋಟ್ ವಿತರಿಸಲಾಗಿದೆ ಎಂದರು.

    ಸರ್ಕಾರದ ಸಹಕಾರದಲ್ಲಿ ರೆಡ್‍ಕ್ರಾಸ್ ಭವನ ನಿರ್ಮಿಸಲಾಗಿದ್ದು, ಕಟ್ಟಡದ ಮೇಲ್ಬಾಗದಲ್ಲಿ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವಂತೆ ಸಂಸದರಲ್ಲಿ ಇದೇ ಸಂದರ್ಭದಲ್ಲಿ ಕೋರಿದರು.

    ಜಿಲ್ಲಾ ವಿಕಲಚೇತನರ ಅಧಿಕಾರಿ ವಿಮಲ ಅವರು ಮಾತನಾಡಿ ಜಿಲ್ಲೆಯಲ್ಲಿನ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ನೀಡಲಾಗುತ್ತಿದ್ದು, ಮಳೆ ಇರುವ ಕಾರಣ ಆಯಾಯ ತಾಲ್ಲೂಕು ಮಟ್ಟದಲ್ಲಿ ಸಾಧನ ಸಲಕರಣೆ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲಾ ವಿಕಲಚೇತನರ ಸಂಘಧ ಅಧ್ಯಕ್ಷರಾದ ಮಹೇಶ್ವರ, ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ನಿರೂಪಣಾ ಅಧಿಕಾರಿ ಪ್ರಸನ್ನ ಕುಮಾರ್, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಅಂಕಾಚಾರಿ, ರೆಡ್‍ಕ್ರಾಸ್ ಸಂಸ್ಥೆಯ ಸಹ ಕಾರ್ಯದರ್ಶಿ ಮಧುಕರ್, ಇತರರು ಇದ್ದರು.

    Previous Articleಗಾಂಜ ಸೇವನೆ ಮಾಡಿ ಅನುಚಿತ ವರ್ತನೆ : ಐವರ ವಿರುದ್ಧ ಪ್ರಕರಣ ದಾಖಲು
    Next Article ಟಿಂಬರ್ ಲೋಡ್ ಸಮೇತ ಮಗುಚಿ ಬಿದ್ದ ಲಾರಿ : ನಿರ್ಬಂಧವಿದ್ದರೂ ಮರದ ದಿಮ್ಮಿಗಳ ಸಾಗಾಟಕ್ಕೆ ಅಡ್ಡಿಯಿಲ್ಲ.

    Related Posts

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.