Close Menu
Kodagu News
    ಹೊಸ ಸುದ್ದಿ

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026

    ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ

    August 2, 2026

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
    • ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
    • ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ
    • ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ
    • 2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    • ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ರಸ್ತೆ ಸುರಕ್ಷತೆಗೆ ಗಮನಹರಿಸಿ ಅಪಘಾತ ತಪ್ಪಿಸಿ: ವೆಂಕಟ್ ರಾಜಾ
    ಜಿಲ್ಲೆ

    ರಸ್ತೆ ಸುರಕ್ಷತೆಗೆ ಗಮನಹರಿಸಿ ಅಪಘಾತ ತಪ್ಪಿಸಿ: ವೆಂಕಟ್ ರಾಜಾ

    *******************************************
    ಮಡಿಕೇರಿ : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
    ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‍ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ ಪಟ್ಟೆ ಬರೆಯುವುದು. ರಸ್ತೆ ಬದಿ ಗಿಡಗಂಟೆಗಳನ್ನು ಕಡಿಯುವುದು, ಜೊತೆಗೆ ರಸ್ತೆ ತಿರುವು, ಉಬ್ಬು ರಸ್ತೆ ಮತ್ತಿತರ ಬಗ್ಗೆ ಸೂಚನಾ ಫಲಕ ಅಳವಡಿಸಿ, ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಎಂಜಿನಿಯರ್‍ಗಳಿಗೆ ತಾಕೀತು ಮಾಡಿದರು.
    ಚಾಲಕರಿಗೆ ರಸ್ತೆಗೆ ಸಂಬಂಧಿಸಿದಂತೆ ಮಾಹಿತಿ ದೊರೆಯುವಂತಾಗಬೇಕು. ಇದರಿಂದ ವೇಗ ನಿಯಂತ್ರಣಕ್ಕೆ ಸಹಕಾರಿಯಾಗಿ ಅಪಘಾತ ತಡೆಯಬಹುದಾಗಿದೆ. ಆ ನಿಟ್ಟಿನಲ್ಲಿ ತುರ್ತು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು.
    ಕುಶಾಲನಗರದಿಂದ ಸಂಪಾಜೆ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಕೊಯನಾಡು ಬಳಿ ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಪದೇ ಪದೇ ಹೆದ್ದಾರಿಯಲ್ಲಿ ಅಪಘಾತ ಸಂಭವಿಸುತ್ತಿದ್ದು, ಈ ಬಗ್ಗೆ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದರು.
    ವಿರಾಜಪೇಟೆ-ಗೋಣಿಕೊಪ್ಪ ಮಾರ್ಗದ ಆತೂರು ಜಂಕ್ಷನ್ ಬಳಿ ಸೂಚನಾ ಫಲಕ ಅಳವಡಿಸಬೇಕು. ಜೊತೆಗೆ ರಸ್ತೆ ಹಂಪ್‍ಗಳನ್ನು ಅಳವಡಿಸಬೇಕು. ವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಹೆಚ್ಚಾಗಲಿವೆ. ಈ ಸಂಬಂಧ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
    ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ, ಪಂಚಾಯತ್ ಇಲಾಖೆ ವ್ಯಾಪ್ತಿಯ ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡದೆ ಅಪಘಾತಗಳು ಸಂಭವಿಸಿದ್ದಲ್ಲಿ ತಮ್ಮ ಮೇಲೆ ಸೋಮೋಟೋ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು.
    ರಸ್ತೆ ಸುರಕ್ಷತೆ ಬಗ್ಗೆ ಎಂಜಿನಿಯರ್‍ಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಒಂದು ವಾರದಲ್ಲಿ ತಾಲ್ಲೂಕುವಾರು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
    ಮುಂದಿನ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಆಗಸ್ಟ್, 21 ರಂದು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಸಿದರು.
    ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಅವರು ಮಾತನಾಡಿ ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಎಲ್ಲೆಲ್ಲಿ ಹಂಪ್‍ಗಳನ್ನು ಅಳವಡಿಸಬೇಕು. ಬಿಳಿ ಬಣ್ಣ ಬಳಿಯಬೇಕು ಎಂಬ ಬಗ್ಗೆ, ಹೆಚ್ಚಿನ ಅಫಘಾತ ಸಂಭವಿಸುವ ಸ್ಥಳದ ಬಗ್ಗೆ ಎರಡು ಮೂರು ದಿನದಲ್ಲಿ ಪಟ್ಟಿ ನೀಡಲಾಗುವುದು ಎಂದು ತಿಳಿಸಿದರು.
    ಅಪಘಾತದಿಂದ ಹಲವರು ಜೀವ ಕಳೆದುಕೊಳ್ಳುತ್ತಿದ್ದು, ಅಪಘಾತ ತಡೆಯುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತೀ ಮುಖ್ಯ. ಪ್ರತಿಯೊಬ್ಬರ ಜೀವವು ಅಮೂಲ್ಯವಾಗಿದ್ದು, ಈ ಬಗ್ಗೆ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಪೊಲೀಸ್, ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಹೀಗೆ ವಿವಿಧ ಇಲಾಖೆಗಳ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದರು.
    ಅರ್ಧ ಕಿಲೋಮೀಟರ್ ಒಳಗೆ ಪದೇ ಪದೇ ಅಪಘಾತ ಸಂಭವಿಸಿದ್ದಲ್ಲಿ ‘ಬ್ಲಾಕ್ ಸ್ಪಾಟ್ ಎಂದು ಗುರುತಿಸಲಾಗುತ್ತದೆ ಎಂದು ತಿಳಿಸಿದರು.
    ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ಜಿ.ಎಸ್.ಗಿರೀಶ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಪಂಚಾಯತ್ ರಾಜ್ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಜಿ.ಕೆ.ನಾಯಕ್ ಅವರು ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು.
    ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಪೌರಾಯುಕ್ತರಾದ ಎಚ್.ಆರ್.ರಮೇಶ್, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ಸಹಾಯಕ ಸಂಚಾರ ಅಧೀಕ್ಷಕರಾದ ಎ.ಈರಸಪ್ಪ ಇತರರು ಇದ್ದರು.

    Previous Articleಗಡಿ ರಾಜ್ಯದಿಂದ ಕೊಡಗಿಗೆ ಆಹಾರದ ಹೆಸರಿನಲ್ಲಿ ವಿಷದ ಹಂಚಿಕೆ
    Next Article ಅಧಿಕಾರಿಗಳು ಜನಸ್ನೇಯಿಯಾಗಬೇಕು: ಶಾಸಕ ಪೊನ್ನಣ್ಣ

    Related Posts

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026

    ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ

    August 2, 2026

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026

    ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ

    August 2, 2026

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.