Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಉದ್ಯೋಗವಕಾಶ»ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ
    ಉದ್ಯೋಗವಕಾಶ

    ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ


    ***********************************
    ಮಡಿಕೇರಿ :-ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿಗಳು, ಜಿ.ಪಂ.ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ವಿರಾಜಪೇಟೆ ತಾ.ಪಂ.ಸಾಮಾನ್ಯ ಸಭೆ ನಡೆಯಿತು.
    ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪೆÇನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಒಟ್ಟು 3 ಬ್ಯಾಚ್‍ಗಳಿಂದ 120 ಕಾಮಗಾರಿಗಳಿದ್ದು 44 ಕಾಮಗಾರಿಗಳು ಮಾತ್ರ ಮುಕ್ತಾಯಗೊಂಡಿದ್ದು, ಇನ್ನುಳಿದ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಲು ಕ್ರಮವಹಿಸಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಉಚಿತ ಪಠ್ಯ-ಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಊಟದ ನೀಡುತ್ತಿದ್ದರೂ ಕೂಡ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಮಾತ್ರ ಇಳಿಕೆಯಾಗುತ್ತಿದೆ. ಎಸ್ಸೆಸ್ಸೆಲ್ಸಿ ಓದುತ್ತಿರುವ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನಹರಿಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಾಡಿ ಜನರಿಗೆ ಸಿಗುತ್ತಿರುವ ಸೌಲಭ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. 6 ಆಶ್ರಮ ಶಾಲೆಗಳಲ್ಲಿ 700 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದು, ಎಲ್ಲಾ ಶಾಲೆಗಳು ಉತ್ತಮ ರೀತಿಯಲ್ಲಿ ನಿರ್ವಹಣೆ ಕೈಗೊಳ್ಳಲಾಗುತ್ತಿದೆ ಮತ್ತು ಹಾಡಿ ಜನರಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಅವರು ಸಭೆಗೆ ಮಾಹಿತಿ ನೀಡಿದರು.
    ಮೀನುಗಾರಿಕೆ ಇಲಾಖೆಯಿಂದ ಮೀನುಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಮೀನು ಹಿಡಿಯುವ ಕಿಟ್ ಹಾಗೂ ಮೀನು ಸಾಕಾಣಿಕೆ ಮಾಡುವ ರೈತರಿಗೆ ಅರ್ಹತೆ ಆಧಾರದ ಮೇಲೆ ಮೀನುಮರಿ ನೀಡಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
    ಪಶು ಸಂಗೋಪನೆ ಇಲಾಖೆಯಿಂದ ಈಗಾಗಲೇ ರಾಸುಗಳಿಗೆ ಕಾಲು-ಬಾಯಿ ಜ್ವರದ ಲಸಿಕೆ, ಚರ್ಮಗಂಟು ನಿವಾರಣಾ ಲಸಿಕೆ ನೀಡಲಾಗಿದ್ದು, ತಾಲ್ಲೂಕಿನ ವ್ಯಾಪ್ತಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ಹೊರತುಪಡಿಸಿ ಹಾಲು ಮಾರಾಟ ಕೇಂದ್ರಗಳು ಇಲ್ಲವಾದ ಕಾರಣ ಹಸು ಸಾಕಾಣಿಕೆ ಮಾಡುವವರ ಸಂಖ್ಯೆಯು ಕಡಿಮೆಯಾಗಿದೆ ಎಂದು ಪಶುಪಾಲನೆ ಇಲಾಖೆಯ ಸಹಾಯಕ ನಿರ್ದೇಶರಾದ ಗಿರೀಶ್ ಅವರು ಮಾಹಿತಿ ನೀಡಿದರು.
    ಸೆಸ್ಕ್ ವಿಭಾಗದಿಂದ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹೊಸ ಕಂಬಗಳನ್ನು ಅಳವಡಿಸುವ ಸಂಬಂಧಿಸಿದಂತೆ ಕಂಬಗಳನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವುದರಿಂದ ರಸ್ತೆಗೆ ಹಾನಿಯಾಗುತ್ತಿರುವುದು ಕಂಡುಬಂದಿದ್ದು, ಇದರ ಕುರಿತು ಕ್ರಮವಹಿಸಲು ಎಂಜಿನಿಯರ್‍ಗಳಿಗೆ ತಿಳಿಸಿದರು.
    ಅರಣ್ಯ ಇಲಾಖೆಯಿಂದ ವನ್ಯಜೀವಿಗಳ(ಆನೆದಾಳಿ, ಹುಲಿದಾಳಿ, ಬೆಳೆನಾಶ) ದಾಳಿಯಿಂದ ತಾಲ್ಲೂಕಿನಲ್ಲಿ ಒಟ್ಟು 618 ಪ್ರಕರಣಗಳು ದಾಖಲಾಗಿದ್ದು ಈಗಾಗಲೇ ಹಲವು ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ ಎಂದು ವಲಯ ಅರಣ್ಯಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಭೆಯಲ್ಲಿ ತಿಳಿಸಲಾಯಿತು.
    ಕೃಷಿ, ಸಹಕಾರ, ಕಂದಾಯ, ಅಬಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ, ತೋಟಗಾರಿಕೆ, ಅಕ್ಷರ ದಾಸೋಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇಲಾಖಾವಾರು ಸಭೆಗೆ ಮಹಿತಿ ನೀಡಿದರು.
    ಸಭೆಯಲ್ಲಿ ವಿರಾಜಪೇಟೆ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಸಿ.ಅಪ್ಪಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

    Previous Articleರಸ್ತೆಯ ಬದಿಗೆ ವಾಲಿದ ಖಾಸಗಿ ಬಸ್
    Next Article ಹೊದ್ದೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.