Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ
    ಅಂತರರಾಷ್ಟ್ರೀಯ

    ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ

    ಕುಶಾಲನಗರ : ಮೊಬೈಲ್ ಫೋಟೋಗ್ರ‍್ರಾಫಿ ಪರಿಣಾಮ ವೃತ್ತಿ ಪರ ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಗಳ ಜೀವನ ದುಸ್ತರವಾಗಿದ್ದು, ಭವಿಷ್ಯದ ದಿನಗಳ ಚಿಂತೆ ಇವರನ್ನು ಕಾಡುತ್ತಿದೆ ಎಂದು ಕೊಡಗು ಜಿಲ್ಲಾ ಛಾಯಾಗ್ರಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಕುಶಾಲನಗರದ ಗೌಡ ಸಮಾಜದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಛಾಯಾಗ್ರಾಹಕರು ಒಂದೇ ನಾಣ್ಯದ ಎರಡು ಮುಖ ವೆಂದು ಬಣ್ಣಿಸಿದ ಅವರು, ಈ ಇಬ್ಬರ ಸಂಬಂಧ ಬಿಡಿಸಲಾಗದ ಅನುಬಂಧ ಎಂದು ಆವರು ಬಣ್ಣಿಸಿದರು. ತಮ್ಮ ಛಾಯಾಗ್ರಾಹಕ ವೃತ್ತಿ ಜೀವನದ ಅನುಭವವನ್ನು ವಿವರಿಸಿದ ಅವರು ನಮ್ಮ ಜೀವನದಲ್ಲಿ ಮಾನವೀಯತೆ ಗುಣಗಳನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಿಕೊಡಬೇಕೆಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ ಪತ್ರಕರ್ತರಷ್ಟೇ ಜವಾಬ್ದಾರಿ ಛಾಯಾಚಿತ್ರಗಾಹಕರಿಗಿದೆ. ಒಬ್ಬ ವ್ಯಕ್ತಿಯ ಭವಿಷ್ಯವನ್ನು ನಿರ್ಧರಿಸುವ ಶಕ್ತಿ ಛಾಯಾಚಿತ್ರಕ್ಕಿದೆ. ಯಾವುದೇ ಛಾಯಾಚಿತ್ರವು ಸಂಬಂಧಿಸಿದ ವಿಷಯಕ್ಕೆ ಪೂರಕವಾಗಿರಬೇಕೇ ಹೊರತು ಮಾರಕವಾಗಿರಬಾರದು ಎಂದು ಹೇಳಿದರು.

    ದತ್ತಿ ಪ್ರಶಸ್ತಿ ದಾನಿಗಳಾದ ಪತ್ರಕರ್ತ ರ ಸಂಘದ ಗೌರವ ಸಲಹೆಗಾರ ಬಿ.ಜಿ. ಅನಂತಶಯನ ಮಾತನಾಡಿ, ಬದಲಾದ ಆಧುನಿಕ ಯುಗದಲ್ಲಿ ಆರ್ಟಿಫಿಷಲ್ ಇಂಟಲಿಜೆನ್ಸ್ ಯಿಂದಾಗಿ ಫೋಟೋ ಹಾಗೂ ವಿಡಿಯೋಗ್ರಫಿ ಕ್ಷೇತ್ರ ಸಾಕಷ್ಟು ಕಮರಿ ಹೋಗುತ್ತಿದೆ. ಇದರಿಂದ ಛಾಯಾಗ್ರಾಹಕರ ಹಾಗೂ ವಿಡಿಯೋಚಿತ್ರಗಾರರ ಭವಿಷ್ಯ ತೂಗುಯ್ಯಾಲೆಯಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು. ಉದ್ಯಮಿ ಹೆನ್ರಿಕ್ ಮಾರ್ಟಿನ್ ಮಾತನಾಡಿ 2000ರ ಆಸುಪಾಸಿನಲ್ಲಿ ಒಂದು ಫೋಟೊ ಬೇಕಾದರೆ ಹತ್ತು ದಿನ ಬೇಕಾಗಿತ್ತು. ಆದರೆ ಈಗ ಕೆಲವೇ ಕ್ಷಣಗಳಲ್ಲಿ ಛಾಯಾಚಿತ್ರ ಲಭ್ಯವಾಗುತ್ತಿದೆ. ಬದಲಾದ ತಂತ್ರಜ್ಞಾನದ ಪ್ರಭಾವ ಇದಾಗಿದೆ ಎಂದರಲ್ಲದೆ, ಛಾಯಾಚಿತ್ರದ ನವ ತಾಂತ್ರಿಕತೆಯಿಂದ ಒಳಿತು ಹಾಗೂ ಕೆಡುಕುಗಳಿದೆ ಎಂದರು.

    ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್ ಮಾತನಾಡಿ ಛಾಯಾಗ್ರಹಣ ಹಾಗೂ ವಿಡಿಯೋಗ್ರಹಕರು ಯಾವುದೇ ಸಭೆ ಸಮಾರಂಭ ಸೇರಿದಂತೆ ಹಲವು ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡುತ್ತಾರೆ. ಅವರಿಂದಾಗಿ ನಮ್ಮ ಪದ್ದತಿ ಪರಂಪರೆ ಆಚರಣೆಗಳು ಮುಂದುವರೆದು ಬರುತ್ತಿದೆ ಎಂದು ಹೇಳಿದರು.

    ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಪ್ರಾಸ್ತಾವಿಕವಾಗಿ ಮಾತನಾಡಿ ಒಂದು ಚಿತ್ರ ಸಾವಿರ ಪದಗಳಿಗೆ ಸಮ. ಛಾಯಾಚಿತ್ರವಿಲ್ಲದ ಸುದ್ದಿಗಳು ಅಪೂರ್ಣವಾಗಿರುತ್ತದೆ ಎಂದರು. ಕೆಲವರಿಗೆ ಫೋಟೋ ತೆಗೆಸಿಕೊಳ್ಳುವುದು ಖುಷಿ ಯಾದರೆ ಮತ್ತೆ ಕೆಲವರಿಗೆ ಫೋಟೋ ತೆಗೆಯುವುದೇ ಖುಷಿ. ಇವರಿಬ್ಬರ ಸಂಗಮವೇ ಇಂದಿನ ವಿಶ್ವ ಛಾಯಾಗ್ರಹಣ ಕಾರ್ಯಕ್ರಮ ಎಂದರು. ಬಿಜೆಪಿ ಯುವ ಮುಖಂಡ ಹೇರೂರು ಚಂದ್ರಶೇಖರ್, ಗುಡ್ಡೆಹೊಸೂರು ಪಂಚಾಯಿತಿ ಯೂತ್ ಸಂಘಟನೆ ಎಂ.ಎಸ್. ರಂಜಿತ್, ಗುಡ್ಡೆಹೊಸೂರು ಗ್ರಾಪಂ ಸದಸ್ಯ ನಿತ್ಯಾನಂದ ಕುಡೆಕಲ್ ಮಾತನಾಡಿದರು. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆ ವಹಿಸಿ ಮಾತನಾಡಿದರು

    ಈ ಸಂದರ್ಭದಲ್ಲಿ ಅನಂತಶಯನ ಅವರು ತಮ್ಮ ಪುತ್ರಿ ಡಾ. ಅನುಶ್ರೀ ಅವರ ಹ್ಯಾಪಿ ಟೀತ್ ಕ್ಲೀನಿಕ್ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ಛಾಯಾಚಿತ್ರ ಸ್ಪರ್ಧೆಯ ವಿಜೇತರಾದ ವಿಘ್ನೇಶ್ ಭೂತನಕಾಡು, ಕೊಡಗು ಪತ್ರಕರ್ತರ ಸಂಘದಿಂದ ಆಯೋಜಿಸಲಾದ ಸುದ್ದಿ ಚಿತ್ರ ಸ್ಪರ್ಧೆಯ ವಿಜೇತರಾದ ಕೆ. ಎಸ್. ಅನಿಲ್, ಗುಡ್ಡೆ ಮನೆ ವಿಶುಕುಮಾರ್, ವಿಡಿಯೋಗ್ರಫಿಯಲ್ಲಿ ಮಹಮ್ಮದ್ ಹನೀಫ್, ಉಷಾಪ್ರೀತಂ, ಸಾರ್ವಜನಿಕರಿಗೆ ಆಯೋಜಿತಗೊಂಡಿದ್ದ ರೀಲ್ಸ್ ಸ್ಪರ್ಧೆಯ ವಿಜೇತರಾದ ಭಾಗೀರಥಿ ಹುಲಿತಾಳ, ರಮ್ಯಾ ಮಾಚಯ್ಯ ಅವರಿಗೆ ಬಹುಮಾನ ವಿತರಿಸಲಾಯಿತು.

    ಜಿಲ್ಲಾ ಪತ್ರಕರ್ತರ ಸಂಘದಿಂದ ಛಾಯಾಗ್ರಾಹಕರಾದ ಮಹಮ್ಮದ್ ಹನೀಫ್ ಹಾಗೂ ಸಂದೀಪ್ ಅವರನ್ನು ಸನ್ಮಾನಿಸಲಾಯಿತು. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಪುಲಿಯಂಡ ರಾಮ್ ದೇವಯ್ಯ ಜ್ಞಾನಗಂಗಾ ಶಾಲೆಯ ಹೆಸರಿನಲ್ಲಿ ಸಂಘದಲ್ಲಿ ಹಿರಿಯ ಪತ್ರಕರ್ತರಿಗೆ ಸ್ಥಾಪಿಸಿರುವ ದತ್ತಿ ಪ್ರಶಸ್ತಿಯನ್ನು ಸುಂಟಿಕೊಪ್ಪದ ಹಿರಿಯ ವರದಿಗಾರ ಕೆ.ಎಚ್.ಶಿವಣ್ಣ ಅವರಿಗೆ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಘದ ನವೀನ್ ಚಿನ್ನಪ್ಪ ಅವರನ್ನು ವೀಡಿಯೋಗ್ರಫಿ ಕ್ಷೇತ್ರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ನಿರ್ದೇಶಕರಾದ ಗುಡ್ಡೆಮನೆ ವಿಶ್ವಕುಮಾರ್ ಅವರಿಂದ ಛಾಯಾಚಿತ್ರಗಳ ಆಕರ್ಷಕ ಪ್ರದರ್ಶನ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಸಿಲ್ವೆಸ್ಟರ್ ಪ್ರಾರ್ಥಿಸಿದರೆ, ವಿಘ್ನೇಶ್ ಭೂತನ ಕಾಡು ಸ್ವಾಗತಿಸಿ, ಕೆ.ತಿಮ್ಮಪ್ಪ ನಿರೂಪಿಸಿ, ನವೀನ್ ಚಿನ್ನಪ್ಪ ವಂದಿಸಿದರು.

    Previous Articleವಿಕಲಚೇತನ ವ್ಯಕ್ತಿಗೆ ವೀಲ್ ಚೇರ್ ನೀಡಿದ ಧಾನಿ
    Next Article ಶಾಸಕ ಮಂತರ್ ನೇತೃತ್ವದಲ್ಲಿ ಮುಜರಾಯಿ ಸಚಿವರನ್ನು ಭೇಟಿಯಾದ ಓಂಕಾರೇಶ್ವರ ದೇವಾಲಯ ಆಡಳಿತ ಸಮಿತಿ.

    Related Posts

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.