Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕøತಿಕ ಕಾರ್ಯಕ್ರಮ
    ಅಂತರರಾಷ್ಟ್ರೀಯ

    ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕøತಿಕ ಕಾರ್ಯಕ್ರಮ

    ಮಡಿಕೇರಿ:-ಕನ್ನಡಿಯನ್ನು ಕಿಟಕಿಯನ್ನಾಗಿಸುವಂತ ಪ್ರಕ್ರಿಯೆ ಶಿಕ್ಷಣ. ನಮ್ಮೊಳಗಿರುವ ಪ್ರತಿಭೆಯನ್ನು ಗುರುತಿಸಲು ಶಿಕ್ಷಣ ಅತ್ಯಮೂಲ್ಯ ಕಾರ್ಯವೆಂದು ಕೊಡಗು ಜಿಲ್ಲಾ ಪ್ರಾಂಶುಪಾಲ ಸಂಘದ ಖಜಾಂಚಿ ಅಂತೋಣಿ ವಿಜಯನ್ ಅಲ್ವಾರೀಸ್ ಅವರು ತಿಳಿಸಿದ್ದಾರೆ.
    ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರುಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು 2025-26 ನೇ ಸಾಲಿನ ಶೈಕ್ಷಣಿಕ ಮತ್ತು ಸಾಂಸ್ಕøತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
    ಶಿಕ್ಷಣ ಇಲಾಖೆ ಹಮ್ಮಿಕೊಳ್ಳುತ್ತಿರುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು ಪ್ರಾಂಶುಪಾಲ ಸಂಘ ಬಹಳ ಸಹಕಾರಿಯಾಗಿರುವುದು ಸ್ಮರಣೀಯ. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಸನ್ಮಾನಿಸುವುದು ಅತ್ಯಂತ ಗೌರವಯುತ ಕಾರ್ಯ. ಹಾಗೆಯೇ ಪೆÇೀಷಕರು ಅದಕ್ಕಾಗಿ ಶ್ರಮಿಸುತ್ತಿರುವುದು ಕೂಡ ಗಮನಾರ್ಹವೆಂದು ತಿಳಿಸಿದರು.
    ಪೆÇೀಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ ಸಂತೋಷವನ್ನು ತ್ಯಾಗ ಮಾಡಿ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿ ವಿದ್ಯಾರ್ಥಿಗಳನ್ನು ಹಂತ-ಹಂತವಾಗಿ ತಯಾರು ಮಾಡುತ್ತಿರುವ ಪೆÇೀಷಕರಿಗೆ ನಮನ ಎಂದರು.
    ಇಲಾಖೆ ವತಿಯಿಂದ ಯುವ ಸಂಸತ್ತು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ, ಇದರಲ್ಲಿ ರಾಜಕೀಯ ಪ್ರವೃತ್ತಿ ಮೇಲ್ಮನೆ ಕೆಳಮನೆ ಕಾರ್ಯ ಹೇಗೆ ನಿರ್ವಹಿಸುತ್ತದೆ ಎಂದು ತಿಳಿಸಿಕೊಡಲಾಗುತ್ತದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು.
    ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಲ್.ಚಿದಾನಂದ ಕುಮಾರ್ ಮಾತನಾಡಿ ಉತ್ತಮ ಫಲಿತಾಂಶಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಪ್ರತಿಯೊಬ್ಬ ಪ್ರಾಧ್ಯಾಪಕರುಗಳಿಗೆ ವಂದನೆ ಸಲ್ಲಿಸಿದರು.
    ವಿದ್ಯಾರ್ಥಿಗಳ ಜೀವನದಲ್ಲಿ ಪ್ರಾಧ್ಯಾಪಕರುಗಳಲ್ಲದೆ ಪೆÇೀಷಕರ ಪ್ರಯತ್ನವು ಮುಖ್ಯ ಪಾತ್ರ ವಹಿಸಿದೆ. ಕೊಡಗಿನಲ್ಲಿ ಮಳೆಯಿಂದಾಗಿ ರಜೆ ಇದ್ದರೂ ಫಲಿತಾಂಶದಲ್ಲಿ ವ್ಯತ್ಯಾಸವಾಗಲಿಲ್ಲ ಎಂದು ತಿಳಿಸಿದರು.
    ಈ ಬಾರಿ ಕೊಡಗು ನಾಲ್ಕನೇ ಸ್ಥಾನ ಪಡೆದಿದ್ದರೂ ಮುಂದಿನ ದಿನಗಳಲ್ಲಿ ಮೊದಲನೇ ಸ್ಥಾನ ಪಡೆಯುವಂತಾಗಬೇಕು ಎಂದು ಕೋರಿದರು.
    ಅರುಣ ಪದವಿ ಪೂರ್ವ ಕಾಲೇಜಿನಲ್ಲಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದಾಯನ ಎಸ್ ರಾಮಕೃಷ್ಣ ಅವರಿಗೆ ಗಣ್ಯರುಗಳು ಸನ್ಮಾನಿಸಿ ಗೌರವಿಸಿದರು.
    2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಕಲಾವಿಭಾಗದಿಂದ ಅಫಿಯ ಶರೀಫ್, ನವನಿದನ್ ಎಂ ಆರ್, ಎಸ್ ಸಾಜಿದ, ಮೇಘಶ್ರೀ ಕೆ, ವಾಣಿಜ್ಯ ವಿಭಾಗದಿಂದ ಡಿಂಪಲ್ ತಮ್ಮಯ್ಯ, ಶಿವಾನಿ ಕೆಎಸ್, ನಿಕ್ಷಾ ವಿ. ಎಸ್, ಸೃಜನ ಡಿ ಡಿ, ವಿಜ್ಞಾನ ವಿಭಾಗದಿಂದ ವೈಷ್ಣವಿ ಟಿ. ವಿ, ಪನ್ಯಪನ್ನಮ್ಮಎ. ಆರ್, ಚಿತ್ರ ಪಿ, ಲಿಜಾ ಜೇಮ್ಸ್, ಮಮತಾ ಎಂ. ಪಿ, ಸಾನಿಕ ಜಾಸ್ಮಿನ್ ಪಿ, ದೀಕ್ಷಾ ದೇಚಮ್ಮ ಇವರುಗಳಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.
    ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ವೈಷ್ಣವಿ ಹಾಗೂ ಚಿತ್ರ ತನ್ನ ಅಭಿಪ್ರಾಯವನ್ನು ತಿಳಿಸಿ ಕಂಬನಿ ಮಿಡಿದರು. ಶೇ.100 ಫಲಿತಾಂಶವನ್ನು ಪಡೆದಿರುವ ಕೊಡಗು ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಾದ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪಲು, ಸಂತ ಅಂತೋಣಿ ಪದವಿ ಪೂರ್ವ ಕಾಲೇಜು ಪೆÇನ್ನಂಪೇಟೆ, ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪದವಿ ಪೂರ್ವ ಕಾಲೇಜು ಹಳ್ಳಿಗಟ್ಟು, ಐಶ್ವರ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು, ಕುಶಾಲನಗರ, ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಕೊಡ್ಲಿಪೇಟೆ, ಲಯನ್ಸ್ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪಲು, ಅಟಲ್ ಬಿಹಾರಿ ವಾಜಪೇಯಿ ವಸತಿ ಪದವಿ ಪೂರ್ವ ಕಾಲೇಜು ಭಾಗಮಂಡಲ ಕಾಲೇಜುಗಳ ಪ್ರಾಂಶುಪಾಲರಿಗೆ ಸ್ಮರಣಿಕೆ ವಿತರಿಸಲಾಯಿತು.
    ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪಿ.ಆರ್.ವಿಜಯನ್, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲ ಸಂಘದ ಖಜಾಂಚಿ ಅಂತೋನಿ ವಿಜಯನ್ ಅಲ್ವಾರೀಸ್, ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಎನ್.ಕೆ ಜ್ಯೋತಿ, ಪ್ರಾಂಶುಪಾಲ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಿದಾನಂದ ಕುಮಾರ್ ಎಂಎಲ್ ಮತ್ತಿತರರು ಇದ್ದರು.
    ದಿವ್ಯ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರಾಧ್ಯಾಪಕರಾದ ದಿವಾಕರ್ ಅವರು ನಿರೂಪಿಸಿದರು. ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ ಅವರು ಸ್ವಾಗತಿಸಿದರು. ಪ್ರಾಂಶುಪಾಲರ ಸಂಘದ ಕಾರ್ಯದರ್ಶಿಗಳಾದ ಎನ್.ಕೆ.ಜ್ಯೋತಿ ಅವರು ವಂದಿಸಿದರು.

    Previous Articleಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸಿ
    Next Article ಕೊಡಗಿನ ಹೆಣ್ಣುಮಕ್ಕಳ ಬಗ್ಗೆ ಅಶ್ಲೀಲ ಸಂದೇಶ ಹಾಕಿದವನು ಅಂದರ್

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.